For Quick Alerts
ALLOW NOTIFICATIONS  
For Daily Alerts
 

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಟಾರ್ಸ್‌: WPL ಹರಾಜಿನಲ್ಲಿ ಅನ್‌ಸೋಲ್ಡ್ ಆದ ಟಾಪ್‌ 5 ಪ್ಲೇಯರ್ಸ್‌

ಮಹಿಳಾ ಪ್ರೀಮಿಯರ್‌ ಲೀಗ್‌ ಆಟಗಾರರ ಹರಾಜು ನವೆಂಬರ್ 27 ರಂದು ನವದೆಹಲಿಯಲ್ಲಿ ನಡೆಯಿತು. ಈ ಹರಾಜಿನಲ್ಲಿ ಮಾಲೀಕರು ಹಲವು ಪ್ರತಿಭಾನ್ವಿತ ಆಟಗಾರ್ತಿಯರಿಗೆ ತಮ್ಮ ತಂಡದಲ್ಲಿ ಸ್ಥಾನ ನೀಡಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಹೆಸರು ಮಾಡಿರುವ ಆಟಗಾರರು ಫ್ರಾಂಚೈಸಿಗಳ ಗಮನ ಸೆಳೆಯುವಲ್ಲಿ ವಿಫಲರಾಗಿದ್ದಾರೆ. ಈ ವರದಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಮಹಿಳಾ ಪ್ರೀಮಿಯರ್ ಲೀಗ್‌ ಹರಾಜಿನಲ್ಲಿ ಬಿಕರಿಯಾಗದೆ ಉಳಿದ ಆಟಗಾರರ ಬಗ್ಗೆ ಮಾಹಿತಿ ಇದೆ.

ಭಾರತದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಅಲ್ಲಿಸಾ ಹೀಲಿ ಮುನ್ನಡೆಸಿದ್ದರು. ಇವರ ಮುಂದಾಳತ್ವದಲ್ಲಿ ಆಸೀಸ್‌ ತಂಡ ಸೆಮಿಫೈನಲ್‌ ಹಂತದ ವರೆಗೆ ಅರ್ಹತೆ ಪಡೆದಿತ್ತು. ಆದರೆ ಇವರು ಹರಾಜಿನಲ್ಲಿ ಮಾಲೀಕರ ಗಮನ ಸೆಳೆಯುವಲ್ಲಿ ವಿಫಲರಾಗಿದ್ದಾರೆ. ಇವರು ಈಗಾಗಲೇ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 3 ಸಾವಿರಕ್ಕೂ ಹೆಚ್ಚಿನ ರನ್ ಗಳಿಸಿದರೂ, ಇವರ ಅನುಭವಕ್ಕೆ ಮಾಲೀಕರು ಮನ್ನಣೆ ನೀಡಿಲ್ಲ. ಇವರು ಬಿಗ್ ಬ್ಯಾಷ್‌ ಲೀಗ್‌ನಲ್ಲೂ 5 ಶತಕ ಸಿಡಿಸಿದ್ದಾರೆ. ಆದರೂ ಇವರು ಬಿಕರಿಯಾಗದೆ ಉಳಿಸಿದಿದ್ದಾರೆ.

WPL Auction 2025 International Stars Healy Knight Athapaththu Go Unsold

ಹೀದರ್ ನೈಟ್

ಮಹಿಳಾ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಶತಕ ಬಾರಿಸಿದ ಮೊದಲ ಆಟಗಾರ್ತಿ ಇಂಗ್ಲೆಂಡ್‌ನ ಹೀದರ್‌ ನೈಟ್‌ ಸಹ ಹರಾಜಿನಲ್ಲಿ ಮಾಲೀಕರ ಗಮನ ಸೆಳೆಯುವಲ್ಲಿ ವಿಫಲರಾಗಿದ್ದಾರೆ. ಇವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲ ಕ್ಷಮತೆ ಹೊಂದಿದ್ದಾರೆ. ಇವರು ಅಂತಾರಾಷ್ಟ್ರೀಯ 132 ಟಿ20 ಪಂದ್ಯಗಳನ್ನು ಆಡಿದ್ದು, 27ರ ಸರಾಸರಿಯಲ್ಲಿ 2331 ರನ್‌ ಸಿಡಿಸಿದ್ದಾರೆ. ಈ ವೇಳೆ 1 ಶತಕ ಹಾಗೂ 8 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

ಟಾಜ್ಮಿನ್ ಬ್ರಿಟ್ಸ್

ಪ್ರಸಕ್ತ ವರ್ಷ ದಕ್ಷಿಣ ಆಫ್ರಿಕಾ ಪರ ಏಕದಿನ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಆಟಗಾರ್ತಿಯರ ಪೈಕಿ ಟಾಜ್ಮಿನ್ ಬ್ರಿಟ್ಸ್ ಒಬ್ಬರು. ಇವರು ಈ ವರ್ಷದಲ್ಲಿ ಅತಿ ಹೆಚ್ಚು ರನ್‌ಗಳನ್ನು ಬಾರಿಸಿದ್ದಾರೆ. ಅಲ್ಲದೆ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲೂ ಸ್ಥಿರ ಪ್ರದರ್ಶನ ನೀಡಿದ್ದರು. ಇವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲೂ ಅಮೋಘ ಸಾಧನೆ ಮಾಡಿದ್ದಾರೆ. ಇವರು ಆಡಿದ 65 ಪಂದ್ಯಗಳಲ್ಲಿ 32ರ ಸರಾಸರಿಯಲ್ಲಿ 1719 ರನ್ ಗಳಿಸಿದ್ದು, 14 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಚಾಮರಿ ಅಟಪಟ್ಟು

ಶ್ರೀಲಂಕಾ ತಂಡದ ನಾಯಕಿ ಚಾಮರಿ ಅಟಪಟ್ಟು ಅವರು ಸಹ ಈ ಬಾರಿ ಮಹಿಳಾ ಪ್ರೀಮಿಯರ್ ಲೀಗ್‌ ಹರಾಜಿನಲ್ಲಿ ಫ್ರಾಂಚೈಸಿಗಳನ್ನು ಹುಡುಕುವಲ್ಲಿ ವಿಫಲರಾಗಿದ್ದಾರೆ. ಇವರು 146 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಮೂರು ಶತಕ ಸೇರಿದಂತೆ ಒಟ್ಟು 3,458 ರನ್‌ಗಳನ್ನು ಗಳಿಸಿದ್ದಾರೆ. ಅಲ್ಲದೆ ಇವರು 63 ವಿಕೆಟ್‌ ಕಬಳಿಸಿದ್ದಾರೆ.

ಅಲಾನಾ ಕಿಂಗ್

ಆಸೀಸ್ ತಂಡದ ಅನುಭವಿ ಲೆಗ್ ಸ್ಪಿನ್ ಬೌಲರ್‌ ಅಲಾನಾ ಕಿಂಗ್‌ ಸಹ ಅನ್‌ ಸೋಲ್ಡ್‌ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕಿಂಗ್ ಇಲ್ಲಿಯವರೆಗೆ 27 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ, 27 ವಿಕೆಟ್‌ಗಳನ್ನು ಪಡೆದಿದ್ದಾರೆ.

Story first published: Friday, November 28, 2025, 18:14 [IST]
Other articles published on Nov 28, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+