ಎರಡನೇ ಬಾರಿ ವೃದ್ಧಿಮಾನ್ ಸಾಹಾ ಕೊರೊನಾ ವರದಿ ಪಾಸಿಟಿವ್

ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಾಹಾ ಅವರ ಕೊರೊನಾ ವೈರಸ್ ಪರೀಕ್ಷೆಯ ವರದಿ ಮತ್ತೊಮ್ಮೆ ಪಾಸಿಟಿವ್ ಬಂದಿದೆ. ಈಗಾಗಲೇ ವಹುತೇಕ ಎರಡು ವಾರಗಳ ಕ್ವಾರಂಟೈನ್ ಪೂರೈಸಿರುವ ವೃದ್ಧಿಮಾನ್ ಸಾಹಾ ಮತ್ತೆ ಕ್ವಾರಂಟೈನ್‌ನಲ್ಲಿ ಮುಂದುವರಿಯಬೇಕಿದೆ.
ಈ ಬಾರಿಯ ಐಪಿಎಲ್ ಟೂರ್ನಿ ಕೊರೊನಾ ವೈರಸ್‌ನ ಕಾರಣದಿಂದಾಗಿ ಮುಂದೂಡಲ್ಪಟ್ಟಿತು. ಐಪಿಎಲ್ ಬಯೋಬಬಲ್‌ನ ಒಳಗೆ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಲು ಆರಂಭಿಸಿದ ಕಾರಣ ಈ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲಾಗಿತ್ತು. ಬಹುತೇಕ ಎಲ್ಲಾ ಫ್ರಾಂಚೈಸಿಗಳಲ್ಲೂ ಕೊರೊನಾ ಪ್ರಕರಣಗಳು ಬೆಳಕಿಗೆ ಬರಲು ಆರಂಭವಾಗಿತ್ತು.
ಈ ಸಂದರ್ಭದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ವೃದ್ಧಿಮಾನ್ ಸಾಹಾ ಕೂಡ ಕೊರೊನಾ ವೈರಸ್‌ಗೆ ತುತ್ತಾಗಿದ್ದರು. ಹೀಗಾಗಿ ಪ್ರತ್ಯೇಕವಾಗಿದ್ದು ಚಿಕಿತ್ಸೆಗೆ ಒಳಗಾಗಿದ್ದರು. ಈಗ ಮತ್ತೆ ವೃದ್ಧಿಮಾನ್ ಸಾಹಾ ನೆಗೆಟಿವ್ ವರದಿ ಬರುವವರೆಗೆ ಐಸೋಲೇಶನ್‌ನಲ್ಲಿ ಮುಂದುವರಿಯಬೇಕಿದೆ.
ಆದರೆ ವೃದ್ಧಿಮಾನ್ ಸಾಹಾ ಅವರು ಈಗ ಕೊರೊನಾ ವೈರಸ್‌ನ ಯಾವ ಲಕ್ಷಣಗಳನ್ನು ಹೊಂದಿಲ್ಲ. ಮೈಕೈ ನೋವು, ಜ್ವರ ಮತ್ತು ಕೆಮ್ಮು ಮುಂತಾದ ಲಕ್ಷಣಗಳು ಮೊದಲಿಗೆ ಸಾಹಾ ಅವರಲ್ಲಿ ಕಾಣಿಸಿಕೊಂಡಿತ್ತು. ಆದರೆ ಈಗ ಎಲ್ಲವೂ ಕಡಿಮೆಯಾಗಿದ್ದು ನೆಗೆಟಿವ್ ವರದಿ ಬರುವವರೆಗೆ ಪ್ರತ್ಯೇಕವಾಗಿಯೇ ಮುಂದುವರಿಯಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications