ಆಸ್ಟ್ರೇಲಿಯಾ ಟೆಸ್ಟ್‌ಗೆ ವೃದ್ಧಿಮಾನ್ ಸಹಾ ಸಿದ್ಧ: ಸೌರವ್ ಗಂಗೂಲಿ

ನವದೆಹಲಿ: ಭಾರತದ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ಗೆ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.
ಟೆಸ್ಟ್ ಕ್ರಿಕೆಟ್ ಮತ್ತು ವಿಕೆಟ್ ಕೀಪಿಂಗ್ ಕೌಶಲದಲ್ಲಿ ಬೆಸ್ಟ್ ಆಟಗಾರ ಎಂದು ಹೆಸರಾದವರು ವೃದ್ಧಿಮಾನ್ ಸಹಾ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಗಾಯಕ್ಕೀಡಾಗಿದ್ದರು. ಹೀಗಾಗಿ ಪ್ಲೇ ಆಫ್‌ನಲ್ಲಿ ಸಹಾಗೆ ಪಂದ್ಯಗಳನ್ನಾಡಲಾಗಿರಲಿಲ್ಲ.
ನವೆಂಬರ್ 27ರಿಂದ ಆರಂಭಗೊಳ್ಳಲಿರುವ ಭಾರತ-ಆಸ್ಟ್ರೇಲಿಯಾ ಪ್ರವಾಸ ಸರಣಿಯು ಮೂರು ಏಕದಿನ, ಮೂರು ಟಿ20ಐ ಮತ್ತು ನಾಲ್ಕು ಟೆಸ್ಟ್ ಪಂದ್ಯಗಳನ್ನು ಒಳಗೊಂಡಿರಲಿದೆ. ಟೆಸ್ಟ್ ಪಂದ್ಯಗಳಲ್ಲಿ 1 ಪಿಂಕ್ ಬಾಲ್ ಟೆಸ್ಟ್ ಕೂಡ ಸೇರಿರಲಿದೆ. ಟೆಸ್ಟ್ ಸರಣಿ ಡಿಸೆಂಬರ್ ತಿಂಗಳಲ್ಲಿ ಆರಂಭವಾಗಲಿದೆ.
'ಟೆಸ್ಟ್‌ಗೆ ಫಿಟ್ ಆಗಿರುವುದರಿಂದ ವೃದ್ಧಿಮಾನ್ ಸಹಾ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲಿದ್ದಾರೆ. ಸಹಾ ನಿಯಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾಗವಹಿಸುತ್ತಿಲ್ಲ,' ಎಂದು ಸೌರವ್ ಹೇಳಿದ್ದಾರೆ. ಸಹಾ ಬಿಟ್ಟರೆ ಭಾರತ ಟೆಸ್ಟ್ ತಂಡದಲ್ಲಿರುವ ಮತ್ತೊಬ್ಬ ವಿಕೆಟ್ ಕೀಪರ್ ಎಂದರೆ ರಿಷಭ್ ಪಂತ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications