WTC 2021-23: ದ. ಆಫ್ರಿಕಾ ವಿರುದ್ಧ ಇಂಗ್ಲೆಂಡ್ ಸರಣಿ ಗೆದ್ದ ಬಳಿಕ ಅಂಕಪಟ್ಟಿ ಹೀಗಿದೆ!

ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮುಕ್ತಾಯವಾಗಿದೆ. ಈ ಸರಣಿಯಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದು ಸರಣಿಯನ್ನು 2-1 ಅಂತರದಿಂದ ವಶಕ್ಕೆ ಪಡದುಕೊಂಡಿದೆ. ಈ ಮೂಲಕ ತವರಿನಲ್ಲಿ ನಡೆದ ಮತ್ತೊಂದು ಸರಣಿಯನ್ನು ಇಂಗ್ಲೆಂಡ್ ವಶಕ್ಕೆ ಪಡೆದುಕೊಂಡಂತಾಗಿದೆ.
ಬೌಲರ್‌ಗಳು ಅಬ್ಬರಿಸಿದ ಸರಣಿಯ ಮೂರನೇ ಪಂದ್ಯದ ಇಂಗ್ಲೆಂಡ್ ತಂಡ ಎರಡೂ ಇನ್ನಿಂಗ್ಸ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿತು. ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗದಿದ್ದರೂ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಆರಂಭಿಕರು ಉತ್ತಮ ಪ್ರದರ್ಶನ ನೀಡುವ ಮೂಲಕ ಇಂಗ್ಲೆಂಡ್ ತಂಡಕ್ಕೆ 9 ವಿಕೆಟ್‌ಗಳ ಅಂತರದಿಂದ ಗೆಲುವು ಸಾರಿದ್ದಾರೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಆತಿಥೇಯ ಇಂಗ್ಲೆಂಡ್ ತನ್ನ ವಶಕ್ಕೆ ಪಡೆದುಕೊಂಡಿದೆ.

WTC ಅಂಕಪಟ್ಟಿ ಹೀಗಿದೆ
ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ವಿರುದ್ಧದ ಈ ಕುತೂಹಲಕಾರಿ ಸರಣಿಯ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಎರಡನೇ ಆವೃತ್ತಿಯ ಅಂಕಪಟ್ಟಿ ಬಿಡುಗಡೆಯಾಗಿದೆ. 70 ಶೇಕಡಾ ಗೆಲುವಿನ ಸರಾಸರಿ ಹೊಂದಿರುವ ಆಸ್ಟ್ರೇಲಿಯಾ ತಂಡ ಅಗ್ರಸ್ಥಾನದಲ್ಲಿಯೇ ಮುಂದುವರಿದಿದ್ದು ಸರಣಿಯನ್ನು 1-2 ಅಂತರದಿಂದ ಸೋತರೂ ದಕ್ಷಿಣ ಆಫ್ರಿಕಾ ತಂಡದ ಗೆಲುವಿನ ಸರಾಸರಿ 60 ಶೇಕಡಾ ಇದೆ. ಹೀಗಾಗಿ ಎರಡನೇ ಸ್ಥಾನದಲ್ಲಿ ಮುಂದುವರಿದೆ. ಇನ್ನು ಮೂರನೇ ಸ್ಥಾನದಲ್ಲಿ ಶ್ರೀಲಂಕಾ ಇದ್ದರೆ ಭಾರತ ನಾಲ್ಕನೇ ಸ್ಥಾನದಲ್ಲಿ ಹಾಗೂ ಪಾಕಿಸ್ತಾನ ಐದನೇ ಸ್ಥಾನದಲ್ಲಿದೆ.

8ನೇ ಸ್ಥಾನದಲ್ಲಿ ಹಾಲಿ ಚಾಂಪಿಯನ್
ವೆಸ್ಟ್ ಇಂಡೀಸ್ ತಂಡ 50 ಶೇಕಡಾದೊಂದಿಗೆ 6ನೇ ಸ್ಥಾನದಲ್ಲಿ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆದ್ದ ಇಂಗ್ಲೆಂಡ್ 38.6 ಶೇಡಾದೊಂದಿಗೆ 7ನೇ ಸ್ಥಾನದಲ್ಲಿದೆ. ಇನ್ನು ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ತಂಡ 25.93 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ. ಇನ್ನು ಬಾಂಗ್ಲಾದೇಶ ತಂಡ ಅಂತಿಮ ಸ್ಥಾನದಲ್ಲಿದ್ದು 13.33 ಶೇಕಡಾ ಅಂಕಪಡೆದುಕೊಂಡಿದೆ.

ಅಂತಿಮ ಇನ್ನಿಂಗ್ಸ್‌ನಲ್ಲಿ 130 ರನ್‌ಗಳ ಗುರಿ
ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಅಂತಿಮ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡಕ್ಕೆ ಅಗತ್ಯವಿದ್ದಿದ್ದು ಕೇವಲ 130 ರನ್‌ಗಳು ಮಾತ್ರ. ಕೆನ್ನಿಂಗ್ಸನ್ ಓವಲ್‌ನಲ್ಲಿ ಮೊದಲ ಮೂರು ಇನ್ನಿಂಗ್ಸ್‌ನಲ್ಲಿಯೂ ಬೌಲಿಂಗ್ ವಿಭಾಗ ಮೇಲುಗೈ ಸಾಧಿಸಿದ್ದ ಕಾರಣ ಅಂತಿಮ ಇನ್ನಿಂಗ್ಸ್‌ನಲ್ಲಿಯೂ ಇಂಗ್ಲೆಂಡ್‌ಗೆ ದಕ್ಷಿಣ ಆಫ್ರಿಕಾ ವೇಗಿಗಳು ಕಠಿಣ ಸವಾಲೊಡ್ಡಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಇಂಗ್ಲೆಂಡ್‌ನ ಆರಂಭಿಕರಾದ ಅಲೆಕ್ಸ್ ಲೀಸ್ ಹಾಗೂ ಜಾಕ್ ಕ್ರಾವ್ಲೆ ಭರ್ಜರಿ ಆರಂಭವನ್ನು ಒದಗಿಸುವ ಮೂಲಕ ಈ ಸವಾಲನ್ನು ಸುಲಭಗೊಳಿಸಿದರು. ಮೊದಲ ವಿಕೆಟ್‌ಗೆ 108 ರ್‌ಗಳ ಜೊತೆಯಾಟ ಈ ಜೋಡಿಯಿಂದ ಬಂದಿತ್ತು. ಜಾಕ್ ಕ್ರಾವ್ಲೆ 69 ರನ್‌ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅಂತಿಮವಾಗಿ 9 ವಿಕೆಟ್‌ಗಳ ಭರ್ಜರಿ ಅಂತರದಿಂದ ಇಂಗ್ಲೆಂಡ್ ಗೆಲುವು ಸಾಧಿಸಿದೆ.
ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಒಲ್ಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಆಲಿ ರಾಬಿನ್ಸನ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಬೆಂಚ್: ಬೆನ್ ಡಕೆಟ್, ಕ್ರೇಗ್ ಓವರ್ಟನ್, ಮ್ಯಾಟಿ ಪಾಟ್ಸ್
ದಕ್ಷಿಣ ಆಫ್ರಿಕಾ ಆಡುವ ಬಳಗ
ದಕ್ಷಿಣ ಆಫ್ರಿಕಾ: ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ಕೀಗನ್ ಪೀಟರ್ಸನ್, ರಿಯಾನ್ ರಿಕೆಲ್ಟನ್, ಖಯಾ ಜೊಂಡೋ, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ
ಬೆಂಚ್: ಐಡೆನ್ ಮಾರ್ಕ್ರಾಮ್, ಸೈಮನ್ ಹಾರ್ಮರ್, ಲುಂಗಿ ಎನ್ಗಿಡಿ, ಲುಥೋ ಸಿಪಾಮ್ಲಾ, ಗ್ಲೆಂಟನ್ ಸ್ಟೌರ್ಮನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications