WTC ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಳೆದುಕೊಂಡ ಆಸಿಸ್: ಭಾರತ, ಪಾಕ್‌ಗೂ ಶಾಕ್ ಕೊಟ್ಟ ಲಂಕಾ

ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಶ್ರೀಲಂಕಾ ತಂಡ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ. ಈ ಭರ್ಜರಿ ಜಯದೊಂದಿಗೆ ಶ್ರೀಲಂಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಶ್ರೇಯಾಂಕಪಟ್ಟಿಯಲ್ಲಿ ಭಾರೀ ಬದಲಾವಣೆಗೆ ಕಾರಣವಾಗಿದೆ.
ಈ ಪಂದ್ಯದಲ್ಲಿ ಸೋಲು ಅನುಭವಿಸಿದ ಆಸ್ಟ್ರೇಲಿಯಾ ತಂಡ ಈ ಪಂದ್ಯಕ್ಕೂ ಮುನ್ನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಶ್ರೇಯಾಂಕಪಟ್ಟಿಯಲ್ಲ ಅಗ್ರಸ್ಥಾನದಲ್ಲಿತ್ತು. ಆದರೆ ಈಗ ಅಗ್ರಸ್ಥಾನವನ್ನು ಕಳೆದುಕೊಂಡಿದೆ. ಇನ್ನು ಶ್ರೀಲಂಕಾ ತಂಡ ಈ ಗೆಲುವಿನೊಂದಿಗೆ ಭಾರೀ ಏರಿಕೆ ಕಂಡಿದ್ದು ಭಾರತ ಪಾಕಿಸ್ತಾನ ತಂಡಗಳನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದೆ.

ಎರಡನೇ ಸ್ಥಾನಕ್ಕೆ ಕುಸಿದ ಆಸ್ಟ್ರೇಲಿಯಾ
ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡ ಈ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿತ್ತು. ಆಡಿದ್ದ 9 ಪಂದ್ಯಗಳ ಪೈಕಿ 6 ಪಂದ್ಯಗಳಲ್ಲಿ ಗೆದ್ದು 77.78 ಶ್ರೇಕಡಾ ಅಂಕ ಪಡೆದುಕೊಂಡಿತ್ತು. ಆದರೆ ಶ್ರೀಲಂಕಾ ವಿರುದ್ಧದ ಸೋಲು ಅನುಭವಿಸಿದ ಪರಿಣಾಮ ಅದು ಈಗ 70%ಗೆ ಕುಸಿದಿದ್ದು ಎರಡನೇ ಸ್ಥಾನಕ್ಕೇರಿದೆ. ದಕ್ಷಿಣ ಆಫ್ರಿಕಾ ತಂಡ ಈಗ ಈ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇತ್ತ ಶ್ರೀಲಂಕಾ ಭಾರೀ ಏರಿಕೆ ಕಂಡಿದ್ದು ವೆಸ್ಟ್ ಇಂಡೀಸ್, ಭಾರತ ಹಾಗೂ ಪಾಕಿಸ್ತಾನವನ್ನು ಹಿಂದಿಕ್ಕಿದೆ. ಪಾಕಿಸ್ತಾನ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದರೆ ಭಾರತ ಐದನೇ ಸ್ಥಾನಕ್ಕೆ ಇಳಿದಿದೆ.

ಶ್ರೀಲಂಕಾ ತಂಡದ ಏರಿಕೆ
ಇತ್ತ ಶ್ರೀಲಂಕಾ ತಂಡ ಈ ಪಂದ್ಯದ ಆರಂಭಕ್ಕೂ ಮುನ್ನ 47.62 ಶೇಕಡಾ ಅಂಕವನ್ನು ತನ್ನ ಖಾತೆಯಲ್ಲಿ ಹೊಂದಿತ್ತು. ಗಾಲೆಯಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 39 ರನ್‌ಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 54.17 ಶೇಕಡಾ ಅಂಕಗಳಿಸಿದ್ದು ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಇದೀಗ ಮುಂದಿನ ವರ್ಷ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆಯುವ ಕನಸು ಕಾಣಲು ಆರಂಭಿಸಿದೆ.

ಕುತೂಹಲ ಕೆರಳಿಸಿದ ಪಾಕಿಸ್ತಾನ ಶ್ರೀಲಂಕಾ ಸರಣಿ
ಇನ್ನು ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ತಂಡ ಪಾಕಿಸ್ತಾನದ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ವಿಶ್ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಸ್ಥಾನವನ್ನು ಬಲಪಡಿಸಕೊಳ್ಳುವ ಅವಕಾಶವಿದೆ. ಶ್ರೀಲಂಕಾ ತಂಡ ಈ ಎರಡು ಪಂದ್ಯದಲ್ಲಿಯೂ ಗೆದ್ದರೆ ಟಾಪ್ ಎರಡು ತಂಡಗಳಲ್ಲಿ ಸ್ಥಾನ ಪಡೆಯುವ ಅವಕಾಶವೂ ಇದೆ.

ಆಸಿಸ್ ವಿರುದ್ಧ ಲಂಕಾ ಅಮೋಘ ಪ್ರದರ್ಶನ
ಇನ್ನು ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಮೋಗ ಪ್ರದರ್ಶನ ನೀಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು 364 ರನ್‌ಗಳಿಗೆ ಕಟ್ಟಿಹಾಕಿದ್ದ ಶ್ರೀಲಂಕಾ ತಂಡ ಬ್ಯಾಟಿಂಗ್‌ನಲ್ಲಿಯೂ ಮಿಂಚಿತು. ದಿನೇಶ್ ಚಾಂಡಿಮಲ್ ಅವರ ಅದ್ಭುತ ದ್ವು ಶತಕದ ನೆರವಿನಿಂದಾಗಿ ಬರೊಬ್ಬರಿ 554 ರನ್‌ಗಳನ್ನು ಪೇರಿಸಿತು ಲಂಕಾ. ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಕೇವಲ 151 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಯಿತು. ಹೀಗಾಗಿ ಇನ್ನಿಂಗ್ಸ್ ಹಾಗೂ 39 ರನ್‌ಗಳ ಅಂತರದಿಂದ ಶ್ರೀಲಂಕಾ ತಂಡ ಗೆಲುವು ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications