Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC ಫೈನಲ್: ಋತುರಾಜ್ ಗಾಯಕ್ವಾಡ್ ಬದಲಿಗೆ ಮೀಸಲು ಆಟಗಾರನಾಗಿ ಯಶಸ್ವಿ ಜೈಸ್ವಾಲ್‌ಗೆ ಅವಕಾಶ!

ಇಂಡಿಯನ್ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದ ಬಳಿಕ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಚಿತ್ತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದ ಮೇಲೆ ನೆಡಲಿದೆ. ಇಂಗ್ಲೆಂಡ್‌ನ ಲಂಡನ್‌ನಲ್ಲಿ ನಡೆಯಲಿರುವ ಈ ಪ್ರತಿಷ್ಟಿತ ಪಂದ್ಯಕ್ಕೆ ಟೀಮ್ ಇಂಡಿಯಾದ ಕೆಲ ಆಟಗಾರರು ಈಗಾಗಲೇ ಸಿದ್ಧತೆ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ತಂಡದ ಮೀಸಲು ಆಟಗಾರರಲ್ಲಿ ಬದಲಾವಣೆಯೊಂದು ನಡೆಯಲಿದೆ. ಋತುತಾಜ್ ಗಾಯಕ್ವಾಡ್ ಬದಲಿಗೆ ಮೀಸಲು ಆಟಗಾರನಾಗಿ ಯಶಸ್ವಿ ಜೈಸ್ವಾಲ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.

ಋತುರಾಜ್ ಗಾಯಕ್ವಾಡ್ ಜೂನ್ 3-4ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಈ ವಿಚಾರವಾಗಿ ಋತುರಾಜ್ ಈಗಾಗಲೇ ಬಿಸಿಸಿಐಗೆ ಮಾಹಿತಿ ನೀಡಿದ್ದು ಜೂನ್ 5ಕ್ಕೂ ಮುನ್ನ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಹಾಗಾಗಿ ಆಯ್ಕೆಗಾರರು ಯಶಸ್ವಿ ಜೈಸ್ವಾಲ್ ಅವರನ್ನು ಋತುರಾಜ್ ಬದಲಿಗೆ ಮೀಸಲು ಆಟಗಾರನನ್ನಾಗಿ ಆಯ್ಕೆ ಮಾಡಿದ್ದು ಶೀಶ್ರದಲ್ಲೇ ಲಂಡನ್‌ನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

WTC 2023 Final : Yashasvi Jaiswal replace Ruturaj Gaikwad as standby opener

ಗಾಯಕ್ವಾಡ್ ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗಾಗಿ ಭಾರತದ ತಂಡಕ್ಕೆ ಆಯ್ಕೆ ಮಾಡಿದ ಮೂವರು ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಒಬ್ಬರಾಗಿದ್ದರು. ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್‌ಗೆ ಅವರಿಗೆ ಆರಂಭಿಕ ಸ್ಥಾನಕ್ಕೆ ಮೀಸಲು ಆಟಗಾರನಾಗಿ ಹೆಸರಿಸಲ್ಪಟ್ಟಿದ್ದರು. ಸದ್ಯ ಋತು ಐಪಿಎಲ್‌ನಲ್ಲಿ ಆಡುತ್ತಿದ್ದು ಮೇ 28 (ಇಂದು) ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ. ಈ ಟೂರ್ನಿಯ ಬಳಿಕ ಜೂನ್ 7 ರಂದು ಲಂಡನ್‌ನ ಓವಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು ಅದಕ್ಕೂ ಮುನ್ನ ವೈವಾಹಿಕ ಜೀವನಕ್ಕೆ ಋತು ಕಾಲಿಡಲಿದ್ದಾರೆ.

ಮದುವೆಯ ಕಾರ್ಯಕ್ರಮವಿದ್ದರೈ ಜೂನ್ 5ರಂದು ತಂಡವನ್ನು ಕೂಡಿಕೊಳ್ಳುವುದಾಗಿ ಋಯರಾಜ್ ಗಾಯಕ್ವಾಡ್ ಬಿಸಿಸಿಐ ಹಾಗೂ ತಂಡದ ಮ್ಯಾನೇಜ್‌ಮೆಂಟ್‌ಗೆ ತಿಳಿಸಿದ್ದರು. ಆದರೆ ಮೂಲಗಳ ಮಾಹಿತಿಯ ಪ್ರಕಾರ ಕೋಚ್ ರಾಹುಲ್ ದ್ರಾವಿಡ್ ಋತುರಾಜ್ ಬದಲಿಗೆ ಬದಲಿ ಆಟಗಾರರನ್ನು ಆಯ್ಕೆ ಮಾಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ.

ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಋತುರಾಜ್ ಗಾಯಕ್ವಾಡ್ ಮದುವೆಯ ಕಾರಣದಿಂದಾಗಿ ಇಂಗ್ಲೆಂಡ್‌ಗೆ ಪ್ರಯಾಣಿಸಲು ಸಾಧ್ಯವಾಗದ ಕಾರಣ ಜೈಸ್ವಾಲ್ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ. ಋತುರಾಜ್ ಗಾಯಕ್ವಾಡ್ ಜೂನ್ 5ರಿಂದ ತಂಡವನ್ನು ಸೇರಿಕೊಳ್ಳುವುದಾಗಿ ತಿಳಿಸಿದ್ದರು. ಆದರೆ ಕೋಚ್ ದ್ರಾವಿಡ್ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದು ಅವರಿಗೆ ಬದಲಿ ಆಟಗಾರನನ್ನು ಆಯ್ಕೆ ಮಾಡುವಂತೆ ತಿಳಿಸಿದ್ದಾರೆ. ಹಾಗಾಗಿ ಶೀಘ್ರದಲ್ಲಿಯೇ ಜೈಸ್ವಾಲ್ ಲಂಡನ್‌ಗೆ ಪ್ರಯಾಣಿಸಲಿದ್ದಾರೆ" ಎಂದು ಬಿಸಿಸಿಐ ಅಧಿಕಾರಿಯ ಹೇಳಿಕೆಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

WTC ಫೈನಲ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕಟ್

Story first published: Sunday, May 28, 2023, 15:44 [IST]
Other articles published on May 28, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+