ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ಬಲಿಷ್ಠ ಆಡುವ ಬಳಗ ಹೆಸರಿಸಿದ ರವಿ ಶಾಸ್ತ್ರಿ
ಜೂನ್ ಮೊದಲ ವಾರ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಸವಾಲೊಡ್ಡಲಿದ್ದು ಟೆಸ್ಟ್ ಮಾದರಿಯ ಚಾಂಪಿಯನ್ ಪಟ್ಟಕ್ಕಾಗಿ ಇಂಗ್ಲೆಂಡ್‌ನ ಲಂಡನ್‌ನಲ್ಲಿರುವ ಕನ್ನಿಂಗ್ಟನ್ ಓವಲ್‌ನಲ್ಲಿ ಈ ಸೆಣೆಸಾಟ ನಡೆಯಲಿದೆ.
ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾದ ಸಂಭಾವ್ಯ ಆಡುವ ಬಳಗವನ್ನು ಮಾಜಿ ಕೋಚ್ ರವಿ ಶಾಸ್ತ್ರಿ ಹೆಸರಿಸಿದ್ದಾರೆ. ಈ ಆಡುವ ಬಳಗದಲ್ಲಿ ಹಿರಿಯ ಆಟಗಾರ ಅಜಿಂಕ್ಯಾ ರಹಾನೆ ಕೂಡ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಜಿಂಕ್ಯಾ ರಹಾನೆ ಕಳೆದ ವರ್ಷ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಿದ್ದ ಬಳಿಕ ಭಾರತ ತಂಡದಿಂದ ಹೊರಬಿದ್ದಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಶ್ರೇಯಸ್ ಐಯ್ಯರ್ ಗಾಯದ ಕಾರಣ ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಆಡುವ ಬಳಗದಲ್ಲಿ ರಹಾನೆ ಸ್ಥಾನವನ್ನು ಪಡೆದುಕೊಂಡಿದ್ದಾರೆ.

"ಅವರು ಚೆಂಡಿಗೆ ಬಡಿಯುತ್ತಿದ್ದ ಟೈಮಿಂಗ್, ಹಾಗೂ ಟಿ20 ಮಾದರಿಯನ್ನು ವಿಭಿನ್ನ ದೃಷ್ಟಿಕೋನದಿಂದ ರೀತಿಯಿಂದಾಗಿ ಅವರ ಫಾರ್ಮ್ ಬಗ್ಗೆ ಅರ್ಥ ಮಾಡಿಕೊಳ್ಳಬಹುದು. ಆತ ಎಷ್ಟು ರನ್‌ಗಳಿಸುತ್ತಿದ್ದಾರೆ ಎಂಬುದರತ್ತ ಹೆಚ್ಚಿನ ಗಮನನೀಡುತ್ತಿಲ್ಲ. ಅವರು ಎಷ್ಟು ಚೆಂಡುಗಳನ್ನು ಎದುರಿಸುತ್ತಿದ್ದಾರೆ ಎಂಬುದರತ್ತ ಚಿತ್ತ ನೆಟ್ಟಿದ್ದಾರೆ. ಅವರು ಆಡುತ್ತಿದ್ದ ಚೆಂಡುಗಳಿಗೆ ಹೋಲಿಸಿದರೆ ಅವರ ಸ್ಟ್ರೈಕ್‌ರೇಟ್ ಅತ್ಯುತ್ತಮವಾಗಿದೆ" ಎಂದಿದ್ದಾರೆ ರವಿ ಶಾಸ್ತ್ರಿ.
"ಕ್ರಿಕೆಟ್‌ನಲ್ಲಿ ಇದೆಲ್ಲವೂ ನಡೆಯುತ್ತದೆ. ಅಂತಾ ಸಂದರ್ಭದಲ್ಲಿ ಅವರು ದೇಶೀಯ ಕ್ರಿಕೆಟ್‌ನಲ್ಲಿ ಆಡಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ" ಎಂದಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಶುಬ್ಮನ್ ಗಿಲ್ ಆರಂಭಿಕ ಆಟಗಾರನಾಗಿ ಸೂಕ್ತ ಜೊತೆಗಾರ ಎಂಬುದನ್ನು ಉಲ್ಲೇಖಿಸಿದ್ದಾರೆ.
ಅಗ್ರ ಕ್ರಮಾಂಕ ಹೀಗಿದೆ: ರವಿ ಶಾಸ್ತ್ರಿ ಹೆಸರಿಸಿದ ಈ ತಂಡದಲ್ಲಿ ಆರಂಭಿಕರಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಯುವ ಆಟಗಾರ ಶುಬ್ಮನ್ ಗಿಲ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ ಹೆಸರನ್ನು ಉಲ್ಲೇಖಿಸಿದ್ದಾರೆ.
ಮಧ್ಯಮ ಕ್ರಮಾಂಕ: ಇನ್ನು ರವಿ ಶಾಸ್ತ್ರಿ ಹೆಸರಿಸಿರುವ ಈ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಎಂದಿನಂತೆ ನಾಲ್ಕನೇ ಕ್ರಮಾಂಕದ ಜವಾಬ್ಧಾರಿ ವಹಿಸಿಕೊಂಡಿದ್ದರೆ ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಹಾಗೂ ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಹೆಸರನ್ನು ಆಯ್ಕೆ ಮಾಡಿದ್ದಾರೆ.
ಆಲ್‌ರೌಂಡರ್ ಹಾಗೂ ಬೌಲಿಂಗ್ ವಿಭಾಗ: ಇನ್ನು ಶಾರ್ದೂಲ್ ಠಾಕೂರ್ ಹಾಗೂ ರವಿಚಂದ್ರನ್ ಅಶ್ವಿನ್ ಆಲ್‌ರೌಂಡರ್‌ಗಳಾಗಿ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ರವೀಂದ್ರ ಜಡೇಜಾ ಕೂಡ ಆಲ್‌ರೌಡಮರ್ ಆಗಿ ಜವಾಬ್ಧಾರಿ ನೀಡಲಾಗಿದೆ. ಮೊಹಮ್ಮದ್ ಶನಿ ಹಾಗೂ ಮೊಹಮ್ಮದ್ ಸಿರಾಹ್ ವೇಗಿಗಳಾಗಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ರವಿ ಶಾಸ್ತ್ರಿ ಹೆಸರಿಸಿದ WTC ಸಂಭಾವ್ಯ ತಂಡ ಹೀಗಿದೆ
ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಕೆಎಸ್ ಭರತ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications