ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

WTC Points Table: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿ?

WTC 2023: World Test Championship Points Table After South Africa Lost Against Australia

ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಇನ್ನಿಂಗ್ಸ್ ಮತ್ತು 182 ರನ್‌ಗಳ ಬೃಹತ್ ಜಯ ಸಾಧಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 2 ಪಂದ್ಯಗಳಲ್ಲಿ ಸೋಲನುಭವಿಸಿದ್ದು ಸರಣಿಯನ್ನು ಕಳೆದುಕೊಂಡಿದೆ.

ಈ ಸೋಲಿನ ಮೂಲಕ ದಕ್ಷಿಣ ಆಫ್ರಿಕಾ 2023ರಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ತಲುಪುವ ಹಾದಿ ಮತ್ತಷ್ಟು ಕಠಿಣವಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ ಎರಡನೇ ಪಂದ್ಯದಲ್ಲಿ ಸೋತ ನಂತರ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಶ್ರೀಲಂಕಾ ಮೂರನೇ ಸ್ಥಾನಕ್ಕೆ ಜಿಗಿದಿದೆ.

Aus vs SA 2nd Test: ಹರಿಣಗಳಿಗೆ ಮುಖಭಂಗ, ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಬೃಹತ್ ಜಯ ಸಾಧಿಸಿದ ಆಸ್ಟ್ರೇಲಿಯಾAus vs SA 2nd Test: ಹರಿಣಗಳಿಗೆ ಮುಖಭಂಗ, ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಬೃಹತ್ ಜಯ ಸಾಧಿಸಿದ ಆಸ್ಟ್ರೇಲಿಯಾ

ದಕ್ಷಿಣ ಆಫ್ರಿಕಾ ವಿರುದ್ಧದ ಗೆಲುವಿನ ನಂತರ ಆಸ್ಟ್ರೇಲಿಯಾ ಫೈನಲ್‌ ತಲುಪುವುದು ಬಹುತೇಕ ಖಚಿತವಾಗಿದೆ. ಕಪಟ್ಟಿಯಲ್ಲಿ ಈಗಾಗಲೇ ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ, ಈ ಗೆಲುವಿನ ಬಳಿಕ 78.57 ಪಿಸಿಟಿಯೊಂದಿಗೆ ಫೈನಲ್ ಪ್ರವೇಶಕ್ಕೆ ಬಹುತೇಕ ಅರ್ಹತೆ ಪಡೆದಂತಾಗಿದೆ. ಸರಣಿಯಲ್ಲಿ ಇನ್ನೊಂದು ಪಂದ್ಯ ಬಾಕಿಯಿದ್ದು, ಅದರಲ್ಲೂ ಗೆಲುವು ಸಾಧಿಸಿದರೆ, ಅದು ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

WTC 2023: World Test Championship Points Table After South Africa Lost Against Australia

ಭಾರತದ ಫೈನಲ್ ಹಾದಿ ಸುಗಮ

ದಕ್ಷಿಣ ಆಫ್ರಿಕಾ ಸೋಲಿನ ನಂತರ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಮತ್ತಷ್ಟು ಸುಗಮವಾಗಿದೆ. ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯನ್ನು ಗೆದ್ದ ನಂತರ ಭಾರತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಭಾರತ 58.93 ಪಿಸಿಟಿಯೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 50.0 ಪಿಸಿಟಿಯೊಂದಿಗೆ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದು, ಶ್ರೀಲಂಕಾ 53.33 ಗೆಲುವಿನ ಸರಾಸರಿಯೊಂದಿಗೆ ಮೂರನೇ ಸ್ಥಾನದಲ್ಲಿದೆ.

ಭಾರತ ತನ್ನ ಮುಂದಿನ ಟೆಸ್ಟ್ ಸರಣಿಯನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. 2023ರ ಫೆಬ್ರವರಿಯಲ್ಲಿ ನಡೆಯಲಿರುವ ನಾಲ್ಕು ಪಂದ್ಯಗಳ ಸರಣಿಯಲ್ಲಿ ಭಾರತ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಅವರು ಫೈನಲ್‌ಗೆ ಅರ್ಹತೆ ಪಡೆಯಲಿದ್ದಾರೆ.

ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾ ವಿರುದ್ಧ ಇನ್ನೂ ಒಂದು ಟೆಸ್ಟ್ ಬಾಕಿಯಿದ್ದು ಇದಾದ ನಂತರ, ಅವರು ವೆಸ್ಟ್ ಇಂಡೀಸ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಗೆಲುವು ಸಾಧಿಸಿದರೆ, ತಂಡಕ್ಕೆ ಫೈನಲ್ ತಲುಪಲು ಅವಕಾಶ ಸಿಗಲಿದ್ದು, ಅದೂ ಕೂಡ ಭಾರತ ಆಸ್ಟ್ರೇಲಿಯಾ ಸರಣಿಯ ಸೋಲು ಗೆಲುವಿನ ಮೇಲೆ ನಿರ್ಧಾರವಾಗಲಿದೆ.

ಪಾಕಿಸ್ತಾನವನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದ ಇಂಗ್ಲೆಂಡ್ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಇಂಗ್ಲೆಂಡ್‌ 46.97 ಗೆಲುವಿನ ಶೇಕಡಾವಾರು ಹೊಂದಿದೆ. ಗೆಲುವಿನ ಶೇಕಡಾವಾರು 40.91 ರೊಂದಿಗೆ ವೆಸ್ಟ್ ಇಂಡೀಸ್ ಆರನೇ ಸ್ಥಾನದಲ್ಲಿದೆ. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ಕ್ರಮವಾಗಿ 38.89 ಮತ್ತು 25.93 ಗೆಲುವಿನ ಶೇಕಡಾವಾರುಗಳೊಂದಿಗೆ ಏಳು ಮತ್ತು ಎಂಟನೇ ಸ್ಥಾನದಲ್ಲಿವೆ. 11.11 ರಷ್ಟು ಕಳಪೆ ಗೆಲುವಿನೊಂದಿಗೆ ಬಾಂಗ್ಲಾದೇಶ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Story first published: Thursday, December 29, 2022, 12:42 [IST]
Other articles published on Dec 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X