WTC 2025: ಯಶ್ವಸಿ ಜೈಸ್ವಾಲ್ ದಾಖಲೆಯನ್ನು ಹಿಂದಿಕ್ಕಿದ ಜೋ ರೂಟ್
ಶ್ರೀಲಂಕಾ ಪ್ರವಾಸದ ಬಳಿಕ ಟೀಮ್ ಇಂಡಿಯಾ ಆಟಗಾರರು ರಜಾ ದಿನಗಳನ್ನು ಆನಂದಿಸುತ್ತಿದೆ. ಮುಂದಿನ ತಿಂಗಳು ಸೆಪ್ಟೆಂಬರ್ ವರೆಗೆ ಟೀಮ್ ಇಂಡಿಯಾ ಯಾವುದೇ ಸರಣಿಯನ್ನು ಆಡುತ್ತಿಲ್ಲ.
ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ಆಡಲಿದೆ. ಆದರೆ ಈ ನಡುವೆ ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಜೋ ರೂಟ್ ಅವರು ಟೀಮ್ ಇಂಡಿಯಾದ ಯುವ ಆರಂಭಿಕ ಯಶಸ್ವಿ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಜೈಸ್ವಾಲ್ ದಾಖಲೆ ಏನು?
ಕಳೆದ ವರ್ಷ ವೆಸ್ಟ್ ಇಂಡೀಸ್ ವಿರುದ್ಧ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಈ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್ ಶತಕ ಸಿಡಿಸಿ ಮಿಂಚಿದ್ದರು. ಹೀಗೆ ಉತ್ತಮ ಫಾರ್ಮ್‌ನಲ್ಲಿ ಮುಂದುವರೆದಿದ್ದ ಅವರು 2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು.
ಇದೀಗ ಜೈಸ್ವಾಲ್ ಅವರನ್ನು ಜೋ ರೂಟ್ ಹಿಂದಿಕ್ಕಿ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಡಬ್ಲ್ಯೂಟಿಸಿ 2025ರಲ್ಲಿ ಯಶಸ್ವಿ 9 ಪಂದ್ಯಗಳಲ್ಲಿ ಒಟ್ಟು 1028 ರನ್ ಗಳಿಸಿದ್ದಾರೆ. ಜೋ ರೂಟ್ 14 ಪಂದ್ಯಗಳಲ್ಲಿ 1127 ರನ್ ಹೊಡೆದಿದ್ದಾರೆ. ಹೀಗಾಗಿ ಜೈಸ್ವಾಲ್ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ.
ಭಾರತದ ಮುಂದಿರುವ ಸವಾಲು
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2024-25 ಋತುವಿನಲ್ಲಿ ಭಾರತ ತಂಡವು ಮೂರು ಸರಣಿಗಳನ್ನು ಆಡಲಿದೆ. ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧ ತವರಿನ ಟೆಸ್ಟ್ ಸರಣಿ ನಂತರ ಆಸ್ಟ್ರೇಲಿಯ ಪ್ರವಾಸ ಕೈಗೊಳ್ಳಲಿದೆ. ಸದ್ಯ ಟೀಮ್ ಇಂಡಿಯಾ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾಕ್ಕಿಂತ ಮುಂದಿದೆ.
ಡಬ್ಲ್ಯೂಟಿಸಿ ಫೈನಲ್ ತಲುಪುವರೆಗೂ ಭಾರತ ಒಟ್ಟು 10 ಟೆಸ್ಟ್‌ಗಳನ್ನು ಆಡಬೇಕಾಗಿದೆ. ಫೈನಲ್‌ಗೆ ಆರ್ಹತೆ ಪಡೆಯಲು ಕನಿಷ್ಠ 7 ಪಂದ್ಯಗಳನ್ನು ಗೆಲ್ಲಲ್ಲೇ ಬೇಕು. ಏಕೆಂದೆರೆ ಯಾವುದೇ ತಂಡವು ಡಬ್ಲ್ಯೂಟಿಸಿ ಫೈನಲ್‌ಗೆ ತಲುಪಲು ಅಂಕಪಟ್ಟಿಯಲ್ಲಿ ಶೇ.65 ರಷ್ಟು ಪಾಯಿಂಟ್‌ಗಳನ್ನು ಹೊಂದಿರಬೇಕು. ಸದ್ಯ ಟೀಮ್ ಇಂಡಿಯಾ ಶೇ.68.51 ಅಂಕ ಹೊಂದಿದ್ದರೆ, ಆಸ್ಟ್ರೇಲಿಯಾ ಶೇ.62.50 ಅಂಕಗಳನ್ನು ಗಳಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications