ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

WTC Final, ಭಾರತ vs ಕಿವೀಸ್, Live ಸ್ಕೋರ್‌: 217 ರನ್‌ಗೆ ಭಾರತ ಆಲೌಟ್

WTC Final 2021: India vs New Zealand Day 3 Live Score, Updates

ಸೌಥಾಂಪ್ಟನ್ ಜೂನ್ 20: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 217 ರನ್‌ಗಳಿಗೆ ಆಲೌಟ್ ಆಗಿದೆ. ಮೂರನೇ ದಿನದಾಟದಲ್ಲಿ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್‌ಗಳ ವಿರುದ್ಧ ಕೀವಿಸ್ ಬೌಲಿಂಗ್ ಪಡೆ ಉತ್ತಮ ಯಶಸ್ಸು ಸಾಧಿಸಿದೆ. ಯಾವ ಜೋಡಿಯಿಂದಲೂ ದೊಡ್ಡ ಜೊತೆಯಾಟ ಬಾರದಂತೆ ನೋಡಿಕೊಳ್ಳುವಲ್ಲಿ ಕೀವಿಸ್ ಪಡೆ ಯಶಸ್ವಿಯಾಗಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೂರನೇ ದಿನದಾಟ ಆರಂಭವಾದ ಕೆಲವೇ ಹೊತ್ತಿನಲ್ಲಿ ಆಘಾತ ಅನುಭವಿಸಿತು. ನಾಯಕ ವಿರಾಟ್ ಕೊಹ್ಲಿ ಜ್ಯಾಮಿಸನ್ ಓವರ್‌ನಲ್ಲಿ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದು ಫೆವಿಲಿಯನ್ ಸೇರಿದ್ದರು. ನಂತರ ಬಂದ ರಿಷಭ್ ಪಂತ್ ಕೂಡ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ.

ಉಪನಾಯಕ ಅಜಿಂ್ಯ ರಹಾನೆ 49 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಉತ್ತಮ ಆಟ ಪ್ರದರ್ಶಿಸುವ ಆರ್ ಅಶ್ವಿನ್ 22 ರನ್‌ಗೆ ವಿಕೆಟ್ ಕಳೆದುಕೊಂಡರು. ನಂತರ ಇಶಾಂತ್ ಶರ್ಮಾ, ಬೂಮ್ರಾ ಕೂಡ ಒಬ್ಬರ ನಂತರ ಒಬ್ಬರಂತೆ ಫೆವಿಲಿಯನ್ ಸೇರಿಕೊಂಡರು. ಅಂತಿಮವಾಗಿ ರವೀಂದ್ರ ಜಡೇಜಾ 15 ರನ್‌ಗಳಿಸಿ ಔಟಾಗುವ ಮೂಲಕ ಭಾರತದ ಇನ್ನಿಂಗ್ಸ್ ಅಂತ್ಯವಾಯಿತು.

WTC Final, ಭಾರತ vs ನ್ಯೂಜಿಲೆಂಡ್, Live ಸ್ಕೋರ್‌

1
50883

ಮುಂಜಾನೆ ಸುರಿದ ಮಳೆಯಿಂದಾಗಿ ಅಂಗಳದಲ್ಲಿ ನೀರು ನಿಂತಿದ್ದ ಕಾರಣ ತಡವಾಗಿ ಆರಂಭವಾಗಿಯಿರು. ಎರಡನೇ ದಿನದಾಟದಲ್ಲಿ ಭಾರತ ನ್ಯೂಜಿಲೆಂಡ್‌ನ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದು ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿತ್ತು.

ಎರಡನೇ ದಿನದಾಟ ಅಂತ್ಯವಾಗುವ ವೇಳೆ ಟೀಮ್ ಇಂಡಿಯಾ 146 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡಿದೆ. ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ಮೂರನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ವಿರಾಟ್ ಕೊಹ್ಲಿ 44 ರನ್‌ಗಳಿಸಿದ್ದರೆ ಅಜಿಂಕ್ಯ ರಹಾನೆ 29 ರನ್‌ಗಳಿಸಿದ್ದಾರೆ.

ಭಾರತದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಮೊದಲ ವಿಕೆಟ್‌ಗೆ 62 ರನ್‌ಗಳ ಜೊತೆಯಾಟವನ್ನು ನೀಡಿದ್ದಾರೆ. ರೋಹಿತ್ ಶರ್ಮಾ 34 ರನ್‌ ಹಾಗೂ ಶುಬ್ಮನ್ ಗಿಲ್ 28 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಚೇತೇಶ್ವರ್ ಪೂಜಾರ 8 ರನ್‌ಗಳಿಸಿ ಔಟಾದರು.

ಭಾರತ ಪ್ಲೇಯಿಂಗ್ XI: ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ.

ನ್ಯೂಜಿಲೆಂಡ್ ಪ್ಲೇಯಿಂಗ್ XI: ಟಾಮ್ ಲ್ಯಾಥಮ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಬಿಜೆ ವಾಟ್ಲಿಂಗ್ (ವಿಕೆಟ್ ಕೀಪರ್), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಕೈಲ್ ಜಾಮಿಸನ್, ನೀಲ್ ವ್ಯಾಗ್ನರ್, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್.

Story first published: Sunday, June 20, 2021, 18:48 [IST]
Other articles published on Jun 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X