IND vs AUS WTC Final: 270 ರನ್‌ಗಳಿಗೆ ಆಸ್ಟ್ರೇಲಿಯಾ 2ನೇ ಇನ್ನಿಂಗ್ಸ್ ಡಿಕ್ಲೇರ್; ಭಾರತಕ್ಕೆ ಬೃಹತ್ ರನ್‌ಗಳ ಗುರಿ
ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ 4ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡ ತನ್ನ ಎರಡನೇ ಇನ್ನಿಂಗ್ಸ್ ಅನ್ನು ಡಿಕ್ಲೇರ್ ಮಾಡಿಕೊಂಡಿದೆ.
ಭಾರತ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ 173 ರನ್‌ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡ 8 ವಿಕೆಟ್‌ಗೆ 270 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದ್ದು, ಉಳಿದ ಒಂದೂವರೆ ದಿನದಲ್ಲಿ ಭಾರತಕ್ಕೆ ಗೆಲ್ಲಲು 444 ರನ್‌ಗಳ ಬೃಹತ್ ಗುರಿ ನೀಡಿದೆ.

ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ನಲ್ಲಿ ಸ್ಟೀವ್ ಸ್ಮಿತ್ ಮತ್ತು ಟ್ರಾವಿಸ್ ಹೆಡ್ ಶತಕಗಳ ನೆರವಿನಿಂದ 469 ರನ್ ಗಳಿಸಿ ಆಲೌಟ್ ಆಗಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಅಜಿಂಕ್ಯ ರಹಾನೆ ಮತ್ತು ಶಾರ್ದೂಲ್ ಠಾಕೂರ್ ಅರ್ಧಶತಕಗಳ ಸಹಾಯದಿಂದ 296 ರನ್‌ಗಳಿಗೆ ಸರ್ವಪತನ ಕಂಡಿತ್ತು.
ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡದ ಪರ ಉಸ್ಮಾನ್ ಖವಾಜಾ 13 ರನ್, ಡೇವಿಡ್ ವಾರ್ನರ್ 1 ರನ್, ಮಾರ್ನಸ್ ಲ್ಯಾಬುಸ್ಚಾಗ್ನೆ 41 ರನ್, ಸ್ಟೀವ್ ಸ್ಮಿತ್ 34 ರನ್, ಟ್ರಾವಿಸ್ ಹೆಡ್ 18 ರನ್, ಕ್ಯಾಮೆರಾನ್ ಗ್ರೀನ್ 25 ರನ್, ಅಲೆಕ್ಸ್ ಕ್ಯಾರಿ 66 ರನ್, ಮಿಚೆಲ್ ಸ್ಟಾರ್ಕ್ 41 ರನ್ ಮತ್ತು ನಾಯಕ ಪ್ಯಾಟ್ ಕಮ್ಮಿನ್ಸ್ 5 ರನ್ ಗಳಿಸಿದರು.

ಭಾರತ ತಂಡದ ಪರ ಬೌಲಿಂಗ್‌ನಲ್ಲಿ ರವೀಂದ್ರ ಜಡೇಜಾ 23 ಓವರ್‌ಗಳಲ್ಲಿ 58 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರೆ, ಮೊಹಮ್ಮದ್ ಶಮಿ 16.3 ಓವರ್‌ಗಳಲ್ಲಿ 39 ರನ್ ನೀಡಿ 2 ಕೆಟ್ ಪಡೆದರು. ಉಮೇಶ್ ಯಾದವ್ 17 ಓವರ್‌ಗಳಲ್ಲಿ 54 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಸಿರಾಜ್ 20 ಓವರ್‌ಗಳಲ್ಲಿ 80 ರನ್ ನೀಡಿ 1 ವಿಕೆಟ್ ಕಿತ್ತರು.
ಆಸ್ಟ್ರೇಲಿಯಾ ತಂಡ ನೀಡಿರುವ 444 ರನ್‌ಗಳ ಬೃಹತ್ ಗುರಿಯನ್ನು ಭಾರತ ತಂಡ ಯಶಸ್ವಿಯಾಗಿ ಚೇಸ್ ಮಾಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಈ ವೇಳೆ ಭಾರತದ ಅಗ್ರ ಕ್ರಮಾಂಕದ ಬ್ಯಾಟರ್‌ಗಳಿಂದ ದೊಡ್ಡ ಜೊತೆಯಾಟ ನಿರೀಕ್ಷಿಸಲಾಗುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications