Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final: ಪ್ರತಿಭಾನ್ವಿತ ಆಟಗಾರರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಿದ ಬಿಸಿಸಿಐ

ಒಂದೆಡೆ ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿ ಭರದಿಂದ ಸಾಗುತ್ತಿದ್ದರೆ ಮತ್ತೊಂದೆಡೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ 7ರಿಂದ 11ರವರೆಗೆ ನಡೆಯಲಿರುವ ಈ ಪ್ರತಿಷ್ಠಿತ ಪಂದ್ಯದ ಮೇಲೆ ವಿಶ್ವ ಕ್ರಿಕೆಟ್‌ ಅಭಿಮಾನಿಗಳ ಚಿತ್ತ ನೆಟ್ಟಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯದಲ್ಲಿ ಯಾರು ಗೆದ್ದು ಚಾಂಪಿಯನ್ ಪಟ್ಟಕ್ಕೇರಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಈ ಪ್ರತಿಷ್ಠಿತ ಪಂದ್ಯಕ್ಕೆ ಬಿಸಿಸಿಐ ಈಗಾಗಲೇ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ನೇತೃತ್ವದ ಬಲಿಷ್ಠ ತಂಡ ಪ್ರತಿಷ್ಠಿತ ಟೂರ್ನಿಯಲ್ಲಿ ಸೆಣೆಸಾಡಲಿದೆ. ಇದೀಗ ಬಿಸಿಸಿಐ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಮೀಸಲು ಆಟಗಾರರನ್ನು ಕೂಡ ಹೆಸರಿಸಿದೆ. ದೇಶೀಯ ಕ್ರಿಕೆಟ್‌ನಲ್ಲಿ ಮಿಂಚಿರುವ ಪ್ರತಿಭಾನ್ವಿತ ಆಟಗಾರರು ಮೀಸಲು ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

WTC Final 2023: BCCI name standby players for WTC Final, Ruturaj and Sarfaraz included

ಬಿಸಿಸಿಐನ ಆಯ್ಕೆ ಸಮಿತಿ ಮೂವರು ಬ್ಯಾಟರ್‌ಗಳನ್ನು ಹಾಗೂ ಇಬ್ಬರು ವೇಗಿಗಳನ್ನು ಮೀಸಲು ಆಟಗಾರರನ್ನಾಗಿ ಹೆಸರಿಸಿದೆ. ಋತುರಾಜ್ ಗಾಯಕ್ವಾಡ್, ಸರ್ಫರಾಜ್ ಖಾನ್ ಮತ್ತು ಇಶಾನ್ ಕಿಶನ್ ಬ್ಯಾಟರ್‌ಗಳಾಗಿ ಮೀಸಲು ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಸರ್ಫರಾಜ್ ಹಾಗೂ ಋತುರಾಜ್ ಸ್ಪೆಶಲಿಸ್ಟ್ ಬ್ಯಾಟರ್‌ಗಳಾಗಿದ್ದರೆ ಇಶಾನ್ ಕಿಶನ್ ವಿಕೆಟ್ ಕೀಪರ್ ಬ್ಯಾಟರ್ ಆಗಿ ಮೀಸಲು ಆಟಗಾರನಾಗಿ ಹೆಸರಿಸಲ್ಪಟ್ಟಿದ್ದಾರೆ. ಇನ್ನು ಬಿಸಿಸಿಐ ನವ್‌ದೀಪ್ ಸೈನಿ ಹಾಗೂ ಮುಕೇಶ್ ಕುಮಾರ್ ಅವರನ್ನು ವೇಗದ ಬೌಲರ್‌ಗಳಾಗಿ ಮೀಸಲು ಪಟ್ಟಿಯಲ್ಲಿ ಹೆಸರಿಸಿದೆ.

ಇನ್ನು ಐಪಿಎಲ್ ಫೈನಲ್ ಪಂದ್ಯ ಮುಕ್ತಾಯವಾದ ಒಂದೇ ವಾರದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ನಡೆಯಲಿರುವುದು ತಂಡದ ಸಿದ್ಧತೆಯ ದೃಷ್ಟಿಯಿಂದ ಟೀಮ್ ಇಂಡಿಯಾಗೆ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಎರಡು ದಿನಗಳ ಅಭ್ಯಾಸ ಪಂದ್ಯವನ್ನು ಬಿಸಿಸಿಐ ಆಯೋಜಿಸಲು ಸಿದ್ಧತೆ ನಡೆಸಿದೆ. ಲಂಡನ್‌ನ ವಾತಾವರಣಕ್ಕೆ ಮೊದಲೇ ಹೊಂದಿಕೊಳ್ಳುವ ದೃಷ್ಟಿಯಿಂದ ಬಿಸಿಸಿಐ ಈ ಅಭ್ಯಾಸ ಪಂದ್ಯದ ಆಯೋಜನೆ ಮಾಡಲಿದೆ.

ಬಿಸಿಸಿಐ ಅಧಿಕಾರಿಯೊಬ್ಬರು ಇನ್‌ಸೈಡ್‌ ಸ್ಪೋರ್ಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಮೇ ಅಂತಿಮ ವಾರದಲ್ಲಿ ರಾಹುಲ್ ದ್ರಾವಿಡ್ ಲಂಡನ್‌ಗೆ ಪ್ರಯಾಣಿಸಲಿದ್ದು ಮೇ 23-24ರಂದು ತೆರಳುವ ಸಾಧ್ಯತೆಯಿದೆ. ಆಟಗಾರರು ತಮ್ಮ ಐಪಿಎಲ್ ಜವಾಬ್ಧಾರಿ ಮುಕ್ತಾಯದ ಬಳಿಕ ಪ್ರಯಾಣಿಸಲಿದ್ದು ಕೆಲ ಆಟಗಾರು ರಾಹುಲ್ ದ್ರಾವಿಡ್ ಅವರೊಂದಿಗೆ ಪ್ರಯಾಣಿಸಲಿದ್ದಾರೆ" ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ಕೂಡ ತಂಡವನ್ನು ಪ್ರಕಟಿಸಿದೆ. ಪ್ಯಾಟ್ ಕಮ್ಮಿನ್ಸ್ ನೇತೃತ್ವದಲ್ಲಿ 17 ಆಟಗಾರರನ್ನು ಒಳಗೊಂಡ ಬಲಿಷ್ಠ ತಂಡವನ್ನು ಆಯ್ಕೆ ಮಾಡಲಾಗಿದೆ. ಆಸ್ಟ್ರೇಲಿಯಾ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.

ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಯ್‌ದೇವ್ ಉನಾದ್ಕಟ್

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೊಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹೇಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾತ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್.

Story first published: Thursday, April 27, 2023, 15:15 [IST]
Other articles published on Apr 27, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+