Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final 2023: ಡಬ್ಲ್ಯುಟಿಸಿ ಫೈನಲ್ ಪಂದ್ಯಕ್ಕಾಗಿ ಇಂಗ್ಲೆಂಡ್‌ನಲ್ಲಿ ಭಾರತ ತಂಡ ಸೇರಿಕೊಂಡ ರೋಹಿತ್ ಶರ್ಮಾ

2023ರ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ತಂಡದ ಸದಸ್ಯರು 2023ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲು ಇಂಗ್ಲೆಂಡ್‌ಗೆ ತೆರಳಿದ್ದಾರೆ.

ಜೂನ್ 7ರಿಂದ 11ರ ವೆರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ.

WTC Final 2023

ಇದೀಗ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) 2023ರ ಫೈನಲ್‌ ಪಂದ್ಯದ ತಯಾರಿಯನ್ನು ಆರಂಭಿಸಲು ಇಂಗ್ಲೆಂಡ್‌ನಲ್ಲಿ ಭಾರತ ಟೆಸ್ಟ್ ತಂಡವನ್ನು ಇತ್ತೀಚೆಗೆ ಸೇರಿಕೊಂಡರು.

ಈಗಾಗಲೇ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ ಮತ್ತು ಇತರ ಕೆಲವು ಆಟಗಾರರು ಐಪಿಎಲ್ ಪ್ಲೇಆಫ್‌ಗೆ ಮೊದಲು ಡಬ್ಲ್ಯುಟಿಸಿ ಆತಿಥೇಯ ರಾಷ್ಟ್ರ ಇಂಗ್ಲೆಂಡ್‌ಗೆ ತೆರಳಿ ಅಭ್ಯಾಸ ನಡೆಸುತ್ತಿದ್ದಾರೆ.

ಮುಂಬೈ ಇಂಡಿಯನ್ಸ್ ಪ್ಲೇಆಫ್‌ನಲ್ಲಿ ಸೋತ ನಂತರ ನಾಯಕ ರೋಹಿತ್ ಶರ್ಮಾ ಕೂಡ ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕಾಗಿ ಲಂಡನ್‌ಗೆ ಪ್ರಯಾಣ ಬೆಳೆಸಿದರು. ಇದೇ ವೇಳೆ ಇನ್ನುಳಿದ ಸದಸ್ಯರಾದ ಜಯದೇವ್ ಉನಾದ್ಕಟ್, ಯಶಸ್ವಿ ಜೈಸ್ವಾಲ್ ಸೇರಿದಂತೆ ಕೆಲವು ಆಟಗಾರರು ಅವರೊಂದಿಗೆ ತಂಡವನ್ನು ಸೇರಿಕೊಂಡರು.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಮ್ಮ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ರೋಹಿತ್ ಶರ್ಮಾ ಇಂಗ್ಲೆಂಡ್‌ನಲ್ಲಿನ ಉಳಿದ ತಂಡದೊಂದಿಗೆ ಸೇರಿಕೊಂಡಿರುವ ಕುರಿತು ಅಭಿಮಾನಿಗಳಿಗೆ ಮಾಹಿತಿ ನೀಡಿದೆ.

ಕೆಎಸ್ ಭರತ್ ಬದದಲು ಇಶಾನ್ ಕಿಶನ್ ಆಯ್ಕೆ ಮಾಡಿದ ರಿಕಿ ಪಾಂಟಿಂಗ್

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರು ಮುಂದಿನ ಡಬ್ಲ್ಯುಟಿಸಿ ಫೈನಲ್ ಪಂದ್ಯಕ್ಕಾಗಿ ಕೆಎಸ್ ಭರತ್ ಬದಲು ಭಾರತ ತಂಡದಲ್ಲಿ ವಿಕೆಟ್ ಕೀಪಿಂಗ್ ಸ್ಥಾನಕ್ಕಾಗಿ ಎಡಗೈ ಬ್ಯಾಟರ್ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಿದ್ದಾರೆ.

ಇತ್ತೀಚೆಗೆ ಐಸಿಸಿ ರಿವ್ಯೂ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಆಸೀಸ್ ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್, ""ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾದ ಮುಂಬರುವ ಟೆಸ್ಟ್‌ ಪಂದ್ಯದ ಪೂರ್ವವೀಕ್ಷಣೆ ಮಾಡಿದರು. ಇದೇ ವೇಳೆ ಇಶಾನ್ ಕಿಶನ್ ಅವರು ಭಾರತ ತಂಡಕ್ಕೆ ಎಕ್ಸ್-ಫ್ಯಾಕ್ಟರ್ ಆಗಲಿದ್ದಾರೆ,'' ಎಂದು ಅಭಿಪ್ರಾಯಪಟ್ಟರು.

WTC ಫೈನಲ್ 2023: ಭಾರತದ ಪೂರ್ಣ ತಂಡ

ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಅಜಿಂಕ್ಯ ರಹಾನೆ, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕತ್ ಮತ್ತು ಉಮೇಶ್ ಯಾದವ್.

Story first published: Wednesday, May 31, 2023, 21:24 [IST]
Other articles published on May 31, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+