WTC Final 2023: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಭಾರತದ ಸಂಭಾವ್ಯ ಆಡುವ 11ರ ಬಳಗ
ಸುದೀರ್ಘ ಎರಡು ತಿಂಗಳ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ಪಂದ್ಯಾವಳಿಯ ನಂತರ, ಭಾರತೀಯ ಕ್ರಿಕೆಟ್ ತಂಡ 2023ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲು ಇಂಗ್ಲೆಂಡ್‌ಗೆ ತೆರಳಿದ್ದಾರೆ.
ಜೂನ್ 7ರಿಂದ 11ರ ವೆರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಕಳೆದ ಒಂದು ದಶಕದಿಂದ ಐಸಿಸಿ ಪ್ರಶಸ್ತಿ ಗೆಲ್ಲದ ಭಾರತ ತಂಡಕ್ಕೆ ಈ ಪಂದ್ಯ ಮಹತ್ವದ್ದಾಗಿದೆ.

ಭಾರತ ತಂಡ 2022-23ರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಆಸ್ಟ್ರೇಲಿಯಾ ವಿರುದ್ಧ 2-1 ಅಂತರದಿಂದ ಗೆದ್ದುಕೊಂಡಿದ್ದು, ಮತ್ತೊಮ್ಮೆ ಆಸೀಸ್ ಮಣಿಸಲು ಎದುರು ನೋಡುತ್ತಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ನಂತರ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಓವಲ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ತಂಡದ ವಿರುದ್ಧದ ಫೈನಲ್ ಪಂದ್ಯಕ್ಕೆ 15 ಆಟಗಾರರ ತಂಡವನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಜಸ್ಪ್ರೀತ್ ಬುಮ್ರಾ, ರಿಷಭ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ತಂಡದಿಂದ ಹೊರಗುಳಿದಿದ್ದಾರೆ.
ಜನವರಿ 2022ರಲ್ಲಿ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ ಅಜಿಂಕ್ಯ ರಹಾನೆ ಭಾರತ ತಂಡಕ್ಕೆ ಪುನರಾಗಮನ ಮಾಡಿದ್ದಾರೆ. ನಾಯಕ ರೋಹಿತ್ ಶರ್ಮಾ ಅವರಿಗೆ ಭಾರತದ ಹತ್ತು ವರ್ಷಗಳ ಐಸಿಸಿ ಟ್ರೋಫಿ ಬರವನ್ನು ನೀಗಿಸುವುದು ದೊಡ್ಡ ಸವಾಲಾಗಿದೆ.

ಆಟಗಾರರಿಂದ ಅತ್ಯುತ್ತಮ ಆಟವನ್ನು ಹೊರತೆಗೆಯಲು ನಾಯಕ ರೋಹಿತ್ ಶರ್ಮಾ ತನ್ನ ಅತ್ಯುತ್ತಮ ಆಡುವ 11ರ ಬಳಗವನ್ನು ಕಣಕ್ಕಿಳಿಸಲು ಎದುರು ನೋಡುತ್ತಿದ್ದಾರೆ.
ನಾಯಕ ರೋಹಿತ್ ಪ್ರಮುಖ ಪಂದ್ಯದಲ್ಲಿ ಮುಂದೆ ನಿಂತು ತಂಡವನ್ನು ಗೆಲುವಿನೆಡೆಗೆ ಕೊಂಡೊಯ್ಯಬೇಕಾಗಿದೆ. ಅಪಾರ ಅನುಭವ ಹೊಂದಿರುವ ನಾಯಕ ರೋಹಿತ್ ಶರ್ಮಾ ಫೈನಲ್ ಪಂದ್ಯದಲ್ಲಿ ಉತ್ತಮ ಆರಂಭವನ್ನು ನೀಡಲು ನಿರೀಕ್ಷಿಸುತ್ತಾರೆ. ಇಲ್ಲಿಯವರೆಗೆ ತಮ್ಮ ಟೆಸ್ಟ್ ವೃತ್ತಿಜೀವನದ 83 ಇನ್ನಿಂಗ್ಸ್‌ಗಳಲ್ಲಿ ಒಂಬತ್ತು ಶತಕಗಳು ಮತ್ತು 14 ಅರ್ಧಶತಕಗಳೊಂದಿಗೆ 3379 ರನ್ ಗಳಿಸಿದ್ದಾರೆ.
ಇನ್ನು 34 ವರ್ಷದ ವಿರಾಟ್ ಕೊಹ್ಲಿ ಇಂಗ್ಲೆಂಡ್‌ನಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದಾರೆ ಮತ್ತು ಮುಂಬರುವ ಫೈನಲ್ ಪಂದ್ಯದಲ್ಲಿ ಅಬ್ಬರಿಸಲು ತಮ್ಮ ಅನುಭವವನ್ನು ಬಳಸಬೇಕಿದೆ. ಇಂಗ್ಲೆಂಡ್‌ನಲ್ಲಿ 16 ಟೆಸ್ಟ್‌ಗಳ 31 ಇನ್ನಿಂಗ್ಸ್‌ಗಳಲ್ಲಿ ಎರಡು ಶತಕ ಮತ್ತು ಐದು ಅರ್ಧಶತಕಗಳೊಂದಿಗೆ 1022 ರನ್ ಗಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಅವರ ಅಂಕಿಸಂಖ್ಯೆಯ ಬಗ್ಗೆ ಮಾತನಾಡುವಾಗ, ಸ್ಟಾರ್ ಬ್ಯಾಟರ್ 24 ಟೆಸ್ಟ್‌ಗಳ 42 ಇನ್ನಿಂಗ್ಸ್‌ಗಳಲ್ಲಿ ಎಂಟು ಶತಕಗಳು ಮತ್ತು ಐದು ಅರ್ಧಶತಕಗಳೊಂದಿಗೆ 1979 ರನ್ ಬಾರಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯಕ್ಕೆ ಭಾರತದ ಸಂಭಾವ್ಯ ಆಡುವ 11ರ ಬಳಗ:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಂಜಿಂಕ್ಯ ರಹಾನೆ / ಇಶಾನ್ ಕಿಶನ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.
WTC ಫೈನಲ್ 2023: ಭಾರತದ ಪೂರ್ಣ ತಂಡ:
ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಅಜಿಂಕ್ಯ ರಹಾನೆ, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕತ್ ಮತ್ತು ಉಮೇಶ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications