WTC Final: ಭಾರತಕ್ಕೆ ತಲೆನೋವಾದ ಹೆಡ್, ಸ್ಮಿತ್: ಮೊದಲ ದಿನದ ಮೇಲುಗೈ ಸಾಧಿಸಿದ ಆಸಿಸ್
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಅಮೋಘ ಯಶಸ್ಸು ಸಾಧಿಸಿದೆ. ಟ್ರೆವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಭಾರತದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದು ಮೊದಲ ದಿನದ ಯಶಸ್ಸು ತಮ್ಮದಾಗಿಸಿಕೊಂಡಿದ್ದಾರೆ. ಈ ಜೋಡಿ ಭರ್ಜರಿ ದ್ವಿಶತಕದ ಜೊತೆಯಾಟ ನೀಡಿದ್ದು ಎರಡನೇ ದಿನ ಆಟವನ್ನು ಮುಂದುವರಿಸಲಿದ್ದಾರೆ.
ಈ ಪಂದ್ಯದ ಮೊದಲ ಸೆಶನ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸಮಬಲದ ಹೋರಾಟವನ್ನು ಪ್ರದರ್ಶಿಸಿದವು. ಆಸ್ಟ್ರೇಲಿಯಾ ತಂಡದ ಇಬ್ಬರು ಆಟಗಾರರನ್ನು ಭಾರತ ಔಟ್ ಮಾಡುವ ಮೂಲಕ ಹೋರಾಟ ಪ್ರದರ್ಶಿಸಿತು ಭಾರತ. ಆದರೆ ಎರಡನೇ ಸೆಶನ್‌ನಲ್ಲಿ ಕೆವಲ ಒಂದು ವಿಕೆಟ್ ಪಡೆದುಕೊಂಡ ಭಾರತ ಬಳಿಕ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಆಸಿಸ್ ಪಡೆ ಸಂಪೂರ್ಣವಾಗಿ ಮೇಲುಗೈ ಸಾಧಿಸಿದೆ.

ಮೊದಲ ದಿನದಾಟದ ಅಂತ್ಯದಲ್ಲಿ ಸ್ಟೀವ್ ಸ್ಮಿತ್ ಅಜೇಯ 95 ರನ್‌ಗಳಿಸಿ ಶತಕದ ಸನಿಹಕ್ಕೆ ಬಂದು ನಿಂತಿದ್ದರೆ ಟ್ರೆವಿದ್ ಹೆಡ್ ಭರ್ಜರಿ ಶತಕದ ಸಿಡಿಸಿದ ಬಳಿಕ 146 ರನ್‌ಗಳವರೆಗೆ ಇನ್ನಿಂಗ್ಸ್ ವಿಸ್ತರಿಸಿದ್ದು ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಸ್ಪಷ್ಟ ಮೇಲುಗೈ ಸಾಧಿಸಿದಂತಾಗಿದೆ. ಆಸ್ಟ್ರೇಲಿಯಾ ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 327 ರನ್ ಕಲೆ ಹಾಕಿದೆ. ಈ ಮೂಲಕ ಬೃಹತ್ ಮೊತ್ತದತ್ತ ಆಸಿಸ್ ಪಡೆ ಹೆಜ್ಜೆಯಿಟ್ಟಿದೆ.
ಟೀಮ್ ಇಂಡಿಯಾ ಪರವಾಗಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಹಾಗೂ ಶಾರ್ದೂಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡಿದ್ದಾರೆ. ಎರಡನೇ ದಿನದಾಟದಲ್ಲಿ ಭಾರತ ತಂಡ ಯಾವ ರೀತಿ ತಿರುಗೇಟು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಮಾರ್ಕಸ್ ಹ್ಯಾರಿಸ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications