ಟೆಸ್ಟ್ ಕ್ರಿಕೆಟ್‌ನಲ್ಲಿ ದಾಖಲೆ ಬರೆದ ಭಾರತ vs ಆಸ್ಟ್ರೇಲಿಯಾ WTC ಫೈನಲ್ ಪಂದ್ಯ
ಇತ್ತೀಚೆಗೆ ಮುಕ್ತಾಯಗೊಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯನಹೊಸ ದಾಖಲೆಯೊಂದನ್ನು ಬರೆದಿದೆ. ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧ ನಡೆದ ಈ ಫೈನಲ್ ಪಂದ್ಯ ಇದುವರೆಗೆ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಟೆಸ್ಟ್ ಪಂದ್ಯವಾಗಿ ಹೊರಹೊಮ್ಮಿದೆ. BARC ಇಂಡಿಯಾ (ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್) ನೀಡಿರುವ ಮಾಹಿತಿಯ ಪ್ರಕಾರ WTC ಫೈನಲ್ ಪಂದ್ಯವನ್ನು 124 ಮಿಲಿಯನ್ ವೀಕ್ಷಕರು ವೀಕ್ಷಿಸಿದ್ದಾರೆ. ಇದು ಈ ಹಿಂದಿನ 2021ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದ ದಾಖಲೆಗಿಂತ 32% ಹೆಚ್ಚು.
BARC ಡೇಟಾ ಪ್ರಕಾರ ಓವಲ್‌ನಲ್ಲಿ ನಡೆದ ಐದು-ದಿನದ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ 124 ಮಿಲಿಯನ್ ವೀಕ್ಷಣೆಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಅಧಿಕೃತ ಪ್ರಸಾರಕರ ಮಾಹಿತಿಯಂತೆ 14.4 ಶತಕೋಟಿ ನಿಮಿಷಗಳ ವೀಕ್ಷಣೆ ಸಮಯವನ್ನು ದಾಖಲಿಸಿದ್ದು 2021ರಲ್ಲಿ WTC ಫೈನಲ್‌ನಲ್ಲಿ ಭಾರತ-ನ್ಯೂಜಿಲೆಂಡ್ ಪಂದ್ಯದವನ್ನು ವೀಕ್ಷಿಸಿದ ದಾಖಲೆಯನ್ನು ಮುರಿದಿದೆ.

ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಪ್ರಸ್ತುತ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಅಗ್ರ ಎರಡು ತಂಡಗಳು ಎನಿಸಿಕೊಂಡಿದ್ದು ಜೂನ್ 7 ರಿಂದ ಜೂನ್ 11 ರವರೆಗೆ ಓವಲ್‌ನಲ್ಲಿ ಈ ಪ್ರತಿಷ್ಠಿತ ಪಂದ್ಯವನ್ನು ಆಡಿದ್ದವು. ಭಾರತದ ನಾಯಕ ರೋಹಿತ್ ಶರ್ಮಾ ಈ ಪಂದ್ಯದ ಟಾಸ್ ಗೆದ್ದುಕೊಂಡಿದ್ದರು ಕೂಡ ಆಸ್ಟ್ರೇಲಿಯಾ ಪಂದ್ಯದಲ್ಲಿ ಮೇಲುಗೈ ಸಾಧಿಸಿತು. 5ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ಭಾರತವನ್ನು 209 ರನ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿದೆ.
ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರವಾಗಿ ಟ್ರಾವಿಸ್ ಹೆಡ್ ಮತ್ತು ಸ್ಟೀವ್ ಸ್ಮಿತ್ ಮೊದಲ ಇನ್ನಿಂಗ್ಸ್‌ನಲ್ಲಿ ದೊಡ್ಡ ಮೊತ್ತದ ಜೊತೆಯಾಟವನ್ನು ಆಡಿದ್ದು ಭಾರತಕ್ಕೆ ಭಾರೀ ಹಿನ್ನಡೆಯಾಯಿತು. ನಂತರ ಬ್ಯಾಟಿಂಗ್‌ನಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಬೌಲರ್‌ಗಳ ವಿರುದ್ಧ ಯಶಸ್ಸು ಸಾಧಿಸಲು ಸಾಧ್ಯವಾಗಲಿಲ್ಲ. ಭಾರತದ ಪರವಾಗಿ ಅಜಿಂಕ್ಯ ರಹಾನೆ ಮಾತ್ರವೇ ಪರಿಣಾಮಕಾರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ 89 ರನ್ ಮತ್ತು ಎರಡೇ ಇನ್ನಿಂಗ್ಸ್‌ನಲ್ಲಿ 46 ರನ್‌ಗಳನ್ನು ಗಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications