Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final 2023: ದಶಕದ ಬಳಿಕ ಭಾರತಕ್ಕೆ ಐಸಿಸಿ ಪ್ರಶಸ್ತಿ ಗೆದ್ದು ಕೊಡುತ್ತಾರಾ ಕೊಹ್ಲಿ-ರಹಾನೆ ಜೋಡಿ?

ಭಾನುವಾರ, ಜೂನ್ 11ರಂದು ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ನ ಐದನೇ ದಿನದಂದು ಭಾರತ ತಂಡವು 444 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುತ್ತಿದ್ದು, ಇದೀಗ ಎಲ್ಲರ ಕಣ್ಣುಗಳು ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಯತ್ತ ನೆಟ್ಟಿವೆ.

ಮೊದಲ ಇನ್ನಿಂಗ್ಸ್‌ನಲ್ಲಿ ವಿಫಲವಾದ ವಿರಾಟ್ ಕೊಹ್ಲಿ, ಎರಡನೇ ಇನ್ನಿಂಗ್ಸ್‌ನಲ್ಲಿ ಗಟ್ಟಿಯಾಗಿ ಕ್ರೀಸ್‌ನಲ್ಲಿ ನೆಲೆಯೂರಿದ್ದಾರೆ. ನಾಲ್ಕನೇ ದಿನದಾಟದ ಅಂತ್ಯದ ವೇಳೆಗೆ 60 ಎಸೆತಗಳಲ್ಲಿ 44 ರನ್ ಗಳಿಸಿದ್ದರೆ, ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕ (89) ಬಾರಿಸಿದ್ದ ಅಜಿಂಕ್ಯ ರಹಾನೆ 20 ರನ್ ಗಳಿಸಿ ಅಜೇಯರಾಗುಳಿದಿದ್ದಾರೆ.

WTC Final 2023: Team India Expecting ICC Title After A Decade; All Ryes On Virat Kohli

ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಜೋಡಿ ಉಳಿದ 280 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ, ಭಾರತಕ್ಕೆ ದಶಕದ ಬಳಿಕ ಐಸಿಸಿ ಟ್ರೋಪಿ ಗೆದ್ದುಕೊಡುತ್ತಾರಾ ನೋಡಬೇಕಿದೆ. ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ಮೇಲಂತೂ ನಿರೀಕ್ಷೆ ದುಪ್ಪಟ್ಟಾಗಿದೆ. 2013ರ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಭಾರತ ಯಾವುದೇ ಐಸಿಸಿ ಪ್ರಶಸ್ತಿಯನ್ನು ಗೆದ್ದಿಲ್ಲ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ನಾಲ್ಕನೇ ದಿನದಂದು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಭಾರತದ ಗಣ್ಯರ ಪಟ್ಟಿಗೆ ಸೇರಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 2000ಕ್ಕಿಂತ ಹೆಚ್ಚು ರನ್ ಗಳಿಸಿದ ಐದನೇ ಭಾರತೀಯ ಬ್ಯಾಟರ್ ಎನಿಸಿಕೊಂಡರು.

ಭಾರತದ ಲೆಜೆಂಡ್ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರು ಆಸ್ಟ್ರೇಲಿಯಾ ವಿರುದ್ಧ 3,630 ರನ್ ಗಳಿಸಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ವಿವಿಎಸ್ ಲಕ್ಷ್ಮಣ್ 2,434 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, 2,143 ರನ್ ಗಳಿಸಿರುವ ಪ್ರಸ್ತುತ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮೂರನೇ ಸ್ಥಾನದಲ್ಲಿದ್ದಾರೆ.

WTC Final 2023: Team India Expecting ICC Title After A Decade; All Ryes On Virat Kohli

ಇನ್ನು ಭಾರತದ ಅನುಭವಿ ಬ್ಯಾಟರ್ ಚೇತೇಶ್ವರ ಪೂಜಾರ 2,074 ರನ್ ಗಳಿಸಿ ಪಟ್ಟಿಯಲ್ಲಿ ನಾಲ್ಕನೇ ಬ್ಯಾಟರ್ ಆಗಿದ್ದಾರೆ. ಸದ್ಯ ವಿರಾಟ್ ಕೊಹ್ಲಿ 2,037 ರನ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಭಾನುವಾರದಂದು ಚೇತೇಶ್ವರ ಪೂಜಾರ ದಾಖಲೆಯನ್ನು ಮುರಿಯುವ ಸಾಧ್ಯತೆ ಇದೆ.

ಅಷ್ಟೇ ಅಲ್ಲದೆ, ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಒಟ್ಟಾರೆ 93 ಪಂದ್ಯಗಳಲ್ಲಿ 51.05 ಸರಾಸರಿಯೊಂದಿಗೆ 5000ಕ್ಕೂ ಹೆಚ್ಚು ರನ್ ಗಳಿಸಿದ ಕಾರಣ, ಆಸ್ಟ್ರೇಲಿಯಾ ವಿರುದ್ಧ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ಅತ್ಯುತ್ತಮ ದಾಖಲೆಯನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ ಆಸೀಸ್ ವಿರುದ್ಧ 16 ಶತಕ ಮತ್ತು 24 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಭಾರತ ತಂಡದ ಗೆಲುವಿನ ಆಸೆಯನ್ನು ಜೀವಂತವಾಗಿರಿಸಿದ್ದು, ಕಳೆದ ನ್ಯೂಜಿಲೆಂಡ್ ವಿರುದ್ಧ ಸೋತು ತಪ್ಪಿಸಿಕೊಂಡಿದ್ದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ದಂಡವನ್ನು ಪಡೆಯಲು ನಿರ್ಣಾಯಕ ಆಟವಾಡಬೇಕಿದೆ.

WTC Final 2023: Team India Expecting ICC Title After A Decade; All Ryes On Virat Kohli

ಐದನೇ ದಿನದ ಆಟಕ್ಕೆ ಮೊದಲು ಭಾರತ 40 ಓವರ್‌ಗಳಲ್ಲಿ 3 ವಿಕೆಟ್‌ಗೆ 164 ರನ್ ಕಲೆಹಾಕಿದ್ದು, ಗೆಲುವಿನ ಗಡಿ ತಲುಪಲು ಉಳಿದ 7 ವಿಕೆಟ್‌ಗಳೊಂದಿಗೆ ಇನ್ನೂ 280 ರನ್ ಗಳಿಸಬೇಕಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಶುಭ್ಮನ್ ಗಿಲ್ 18 ರನ್ ಗಳಿಸಿ ವಿವಾದಾತ್ಮಕ ತೀರ್ಪಿಗೆ ಔಟಾದರೆ, ರೋಹಿತ್ ಶರ್ಮಾ 43 ರನ್ ಮತ್ತು ಚೇತೇಶ್ವರ ಪೂಜಾರ 27 ರನ್‌ ಗಳಿಸಲಷ್ಟೇ ಶಕ್ತರಾದರು.

93/3ಕ್ಕೆ ಕುಸಿದಿದ್ದ ಭಾರತ ತಂಡವನ್ನು ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಜೋಡಿ ಆಸ್ಟ್ರೇಲಿಯನ್ ಬೌಲರ್‌ಗಳ ವಿರುದ್ಧ ರಕ್ಷಣಾತ್ಮಕವಾಗಿ ಆಡಿದರು ಮತ್ತು ಆಗಾಗ ಆಕ್ರಮಣಕಾರಿ ಶಾಟ್‌ಗಳನ್ನು ಪ್ರಯೋಗಿಸಿದರು. ಮುರಿಯದ ನಾಲ್ಕನೇ ವಿಕೆಟ್‌ಗೆ 71 ರನ್‌ಗಳ ಜೊತೆಯಾಟ ನಿರ್ಮಿಸಿದರು.

Story first published: Sunday, June 11, 2023, 15:18 [IST]
Other articles published on Jun 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+