Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final Day 4: ಆಸೀಸ್‌ನ ಉಳಿದ 6 ವಿಕೆಟ್ ಬೇಗನೆ ಕಿತ್ತು ಮೇಲುಗೈ ಸಾಧಿಸುತ್ತಾ ಭಾರತ?

ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ 3ನೇ ದಿನದಾಟದ ಅಂತ್ಯದ ವೇಳೆಗೆ ಭಾರತ ವಿರುದ್ಧ ಆಸ್ಟ್ರೇಲಿಯಾ ಭಾರೀ ಮುನ್ನಡೆ ಪಡೆದಿದೆ.

ಶನಿವಾರ, ಜೂನ್ 10ರ 4ನೇ ದಿನದಂದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಭಾರೀ ಮುನ್ನಡೆಯನ್ನು ಕಟ್ಟಿಹಾಕಲು ಭಾರತ ತಂಡ ಕಣಕ್ಕಿಳಿಯಲಿದೆ.

WTC Final 2023: Will Team India Prevail Against Australia On Day 4?

ಆಸೀಸ್ ತಂಡದ ಉಳಿದ 6 ವಿಕೆಟ್‌ಗಳನ್ನು ಬೇಗನೆ ಪಡೆದು, ಕಡಿಮೆ ಮೊತ್ತದ ಟಾರ್ಗೆಟ್ ಪಡೆಯಲು ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಎದುರು ನೋಡುತ್ತಿದೆ.

ಆಸ್ಟ್ರೇಲಿಯಾ ಪರ ಮಾರ್ನಸ್ ಲ್ಯಾಬುಸ್ಚಾಗ್ನೆ 41 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದರೆ, ಕ್ಯಾಮರೂನ್ ಗ್ರೀನ್ ಸಹ 7 ರನ್ ಗಳಿಸಿ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಸದ್ಯ ಆಸ್ಟ್ರೇಲಿಯಾ ತಂಡ 296 ರನ್‌ಗಳ ಮುನ್ನಡೆ ಸಾಧಿಸಿದ್ದು, ಭಾರತಕ್ಕೆ ಬೃಹತ್ ಮೊತ್ತದ ಟಾರ್ಗೆಟ್ ನೀಡಲು ಯೋಜನೆ ಹಾಕಿಕೊಂಡಿದೆ.

WTC Final 2023: Will Team India Prevail Against Australia On Day 4?

3ನೇ ದಿನದಂದು ರವೀಂದ್ರ ಜಡೇಜಾ ಅವರು ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿದ್ದ ಸ್ಟೀವ್ ಸ್ಮಿತ್ ಮತ್ತು ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡಿದ್ದರೆ, ಮೊಹಮ್ಮದ್ ಸಿರಾಜ್ ಮತ್ತು ಉಮೇಶ್ ಯಾದವ್ ಕೂಡ ತಲಾ ಒಂದು ವಿಕೆಟ್ ಪಡೆದಿದ್ದಾರೆ.

ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ನಲ್ಲಿ ಸ್ಟೀವ್ ಸ್ಮಿತ್ ಮತ್ತು ಟ್ರಾವಿಸ್ ಹೆಡ್ ಶತಕಗಳ ನೆರವಿನಿಂದ 469 ರನ್‌ ಗಳಿಸಿ ಆಲೌಟ್ ಆಗಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಅಜಿಂಕ್ಯ ರಹಾನೆ ಮತ್ತು ಶಾರ್ದೂಲ್ ಠಾಕೂರ್ ಅರ್ಧಶತಕಗಳ ಸಹಾಯದಿಂದ 296 ರನ್‌ಗಳಿಗೆ ಸರ್ವಪತನ ಕಂಡಿತು.

ಮೊದಲ ಇನ್ನಿಂಗ್ಸ್‌ನಲ್ಲಿ 173 ರನ್‌ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿರುವ ಆಸೀಸ್ ಪಡೆ, 4 ವಿಕೆಟ್‌ಗೆ 123 ರನ್ ಗಳಿಸಿ ಒಟ್ಟು 296 ರನ್‌ಗಳ ಮುನ್ನಡೆ ಪಡೆದುಕೊಂಡಿದೆ.

ಭಾರತ ಕ್ರಿಕೆಟ್ ತಂಡವು 2013ರಲ್ಲಿ ಕೊನೆಯದಾಗಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಐಸಿಸಿ ಪ್ರಶಸ್ತಿಯನ್ನು ಗೆದ್ದಿಲ್ಲ. ಅಂದಿನಿಂದ ಭಾರತ ತಂಡ 2021ರ ಟಿ20 ವಿಶ್ವಕಪ್ ಹೊರತುಪಡಿಸಿ ಪ್ರತಿ ಐಸಿಸಿ ಟೂರ್ನಮೆಂಟ್‌ನಲ್ಲಿ ಕನಿಷ್ಠ ಸೆಮಿಫೈನಲ್ ತಲುಪಿದ್ದಾರೆ.

ಹೀಗಾಗಿ ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಪ್ರಮುಖವಾಗಿರುತ್ತದೆ. ತಮ್ಮ ಹತ್ತು ವರ್ಷಗಳ ಸುದೀರ್ಘ ಐಸಿಸಿ ಟ್ರೋಫಿಯ ಬರವನ್ನು ಕೊನೆಗೊಳಿಸಲು ನೋಡುತ್ತಿರುವ ಭಾರತ ತಂಡಕ್ಕೆ ಅತ್ಯಂತ ನಿರ್ಣಾಯಕವಾಗಿದೆ.

ಉಳಿದ ಎರಡು ದಿನಗಳಲ್ಲಿ ಆಸ್ಟ್ರೇಲಿಯಾ ತಂಡ ನೀಡುವ ಗುರಿಯನ್ನು ಭಾರತ ತಂಡ ಯಶಸ್ವಿಯಾಗಿ ಚೇಸ್ ಮಾಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಈ ವೇಳೆ ಭಾರತದ ಅಗ್ರ ಕ್ರಮಾಂಕದ ಬ್ಯಾಟರ್‌ಗಳಿಂದ ದೊಡ್ಡ ಮೊತ್ತ ನಿರೀಕ್ಷಿಸಲಾಗುತ್ತಿದೆ.

Story first published: Saturday, June 10, 2023, 14:52 [IST]
Other articles published on Jun 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+