WTC ಫೈನಲ್‌ನಲ್ಲಿ ಆಡಲಿದ್ದಾರಾ ಡೇವಿಡ್ ವಾರ್ನರ್?: ಮಹತ್ವದ ಸುಳಿವು ನೀಡಿದ ಆಸಿಸ್ ಕೋಚ್

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಅಂತ್ಯವಾಗಿದ್ದು ಟೀಮ್ ಇಂಡಿಯಾ ಈ ಟ್ರೋಫಿಯನ್ನು 2-1 ಅಂತರದಿಂದ ತನ್ನ ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ ಸತತ ನಾಲ್ಕನೇ ಬಾರಿಗೆ ಭಾರತ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ವಶಕ್ಕೆ ಪಡೆದುಕೊಂಡಿದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಸತತ ಎರಡನೇ ಬಾರಿಗೆ ಫೈನಲ್‌ಗೆ ಪ್ರವೇಶಿಸಿದೆ.
ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದ್ದು ಜೂನ್ ತಿಂಗಳಿನಲ್ಲಿ ಇಂಗ್ಲೆಂಡ್‌ನಲ್ಲಿ ಈ ಪ್ರತಿಷ್ಠಿತ ಪಂದ್ಯ ಆಯೋಜನೆಯಾಗಲಿದೆ. ಆಸ್ಟ್ರೇಲಿಯಾ ಮೊದಲ ಬಾರಿಗೆ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದ್ದು ಭಾರತಕ್ಕೆ ಕಠಿಣ ಪೈಪೋಟಿ ನೀಡುವುದರಲ್ಲಿ ಅನುಮಾನವಿಲ್ಲ. ಈ ಸಂದರ್ಭಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಗಾಯದಿಂದಾಗಿ ಅರ್ಧಕ್ಕೆ ತವರಿಗೆ ವಾಪಾಸಾಗಿದ್ದ ಡೇವಿಡ್ ವಾರ್ನರ್ ಈ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಆಡುವ ವಿಚಾರವಾಗಿ ಆಸ್ಟ್ರೇಲಿಯಾ ತಂಡದ ಮುಖ್ಯ ಕೋಚ್ ಆಂಡ್ರ್ಯೋ ಮೆಕ್ ಡೊನಾಲ್ಡ್ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯ ಕೋಚ್ ಆಂಡ್ರ್ಯೋ ಮೆಕ್ ಡೊನಾಲ್ಡ್ ಆಸ್ಟ್ರೇಲಿಯಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದ ಯೋಜನೆಯಲ್ಲಿ ಡೇವಿಡ್ ವಾರ್ನರ್ ಇದ್ದಾರೆ ಎಂಬ ಮಾತನ್ನು ಹೇಳಿದ್ದಾರೆ. ಇತ್ತೀಚೆಗೆ ಡೇವಿಡ್ ವಾರ್ನರ್ ಟೆಸ್ಟ್ ಮಾದರಿಯಲ್ಲಿ ಕಳಪೆ ಪ್ರದರ್ದಶನ ನೀಡಿದ್ದು ಟೆಸ್ಟ್‌ನಿಂದ ವಾರ್ನರ್ ನಿವೃತ್ತಿಯ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿವೆ.
"ಈ ಕ್ಷಣದಲ್ಲಿ ಡೇವಿಡ್ ವಾರ್ನರ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ಸಂಪೂರ್ಣವಾಗಿ ನಮ್ಮ ಯೋಜನೆಯಲ್ಲಿದ್ದಾರೆ. ಭಾರತದ ವಿರುದ್ಧದ ಏಕದಿನ ಸರಣಿಗೆ ಅವರು ಮರಳಲಿದ್ದಾರೆ. ಗಾಯದಿಂದ ಅವರು ಚೇತರಿಸಿಕೊಂಡಿದ್ದು ಮಾರ್ಚ್ 17ರಂದು ಭಾರತದ ವಿರುದ್ಧದ ಸರಣಿಯಲ್ಲಿ ಆಡಲಿದ್ದಾರೆ" ಎಂದಿದ್ದಾರೆ ಮೆಕ್ ಡೊನಾಲ್ಡ್.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಟೆಸ್ಟ್ ಸರಣಿಯ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಮಾರ್ಚ್ 17ರಿಂದ ಈ ಏಕದಿನ ಸರಣಿ ಆರಂಭವಾಗಲಿದ್ದು ಮೊದಲ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಎರಡನೇ ಪಂದ್ಯ ವಿಶಾಖಪಟ್ಟಣಂನಲ್ಲಿ ನಡೆದರೆ ಅಂತಿಮ ಪಂದ್ಯ ಚೆನ್ನೈನಲ್ಲಿ ಆಯೋಜನೆಯಾಗಲಿದೆ. ಈ ಸರಣಿಗೆ ಪ್ಯಾಟ್ ಕಮ್ಮಿನ್ಸ್ ಅಲಭ್ಯತೆ ದೃಢಪಟ್ಟಿದ್ದು ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಈ ಸರಣಿಯಲ್ಲಿಯೂ ಮುನ್ನಡೆಸಲಿದ್ದಾರೆ. ಪ್ಯಾಟ್ ಕಮ್ಮಿನ್ಸ್ ಕೌಟುಂಬಿಕ ಕಾರಣಗಳಿಂದಾಗಿ ಟೆಸ್ಟ್ ಸರಣಿಯ ಮಧ್ಯದಲ್ಲಿ ತವರಿಗೆ ವಾಪಸಾಗಿದ್ದರು.
ಭಾರತದ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.
ಆಸ್ಟ್ರೇಲಿಯಾ ಏಕದಿನ ತಂಡ: ಸ್ಟೀವ್ ಸ್ಮಿತ್(ನಾಯಕ) ಶಾನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೈನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಜ್ಯೆ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications