WTC Final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆದ ಆಸ್ಟ್ರೇಲಿಯಾ, ಭಾರತದ ಹಾದಿ ಸುಲಭ!

2023ರಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಆಸ್ಟ್ರೇಲಿಯಾ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಕೊನೆಯ ಪಂದ್ಯವನ್ನು ಡ್ರಾ ಮಾಡಿಕೊಂಡ ಆಸ್ಟ್ರೇಲಿಯಾ, 2-0 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಗೆಲುವಿನ ನಂತರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿತು. ಸರಣಿಯ ಆರಂಭದಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ, ಸರಣಿಯ ಗೆಲುವಿನ ನಂತರ ಅಂತರವನ್ನು ಮತ್ತಷ್ಟು ಹೆಚ್ಚಿಸಿಕೊಂಡಿತು.
ಸದ್ಯ ಆಸ್ಟ್ರೇಲಿಯಾ 75.56 ಶೇಕಡಾವಾರು ಅಂಕ (PCT) ಗಳೊಂದಿಗೆ ಅಗ್ರಸ್ಥಾನದಲ್ಲಿದೆ, ಟೀಂ ಇಂಡಿಯಾ 58.93 ಪಿಸಿಟಿಯೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ಕ್ರಮವಾಗಿ 53.33 ಮತ್ತು 48.72 ಪಿಸಿಟಿಯೊಂದಿಗೆ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ.
ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮುಂದಿನ ಟೆಸ್ಟ್ ಸರಣಿಯನ್ನು ಭಾರತದ ವಿರುದ್ಧ ಆಡಲಿದೆ. ಒಂದು ವೇಳೆ ಸರಣಿಯ ಎಲ್ಲಾ ಪಂದ್ಯಗಳಲ್ಲಿ ಸೋತರೂ ಕೂಡ ಆಸ್ಟ್ರೇಲಿಯಾ ಎರಡನೇ ಸ್ಥಾನಕ್ಕೆ ಕುಸಿಯಲಿದ್ದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಡಲಿದೆ.

ಸುಲಭವಾದ ಭಾರತದ ಹಾದಿ
ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ಸರಣಿ ಗೆಲ್ಲುವ ಮೂಲಕ ಭಾರತದ ಫೈನಲ್ ಹಾದಿ ಸುಲಭವಾಗಿದೆ. ಡಿಸೆಂಬರ್ ನಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧದ ಸರಣಿಯನ್ನು 2-0 ಅಂತರದಲ್ಲಿ ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದ ಭಾರತ 2ನೇ ಸ್ಥಾನಕ್ಕೆ ಜಿಗಿತ ಕಂಡಿದೆ.
ಭಾರತ ಫೆಬ್ರವರಿ-ಮಾರ್ಚ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯನ್ನು ಆಡಲಿದೆ. 4 ಪಂದ್ಯಗಳ ಈ ಸರಣಿಯಲ್ಲಿ ಭಾರತ ಕನಿಷ್ಠ ಮೂರು ಪಂದ್ಯಗಳನ್ನು ಗೆದ್ದು ಒಂದು ಪಂದ್ಯದಲ್ಲಿ ಸೋತರೂ ಕೂಡ ಫೈನಲ್‌ಗೆ ಅರ್ಹತೆ ಪಡೆಯಲಿದೆ.

ಫೈನಲ್ ತಲುಪಲು ಭಾರತದ ಲೆಕ್ಕಾಚಾರ
ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ ಭಾರತ 4-0, 3-1, 2-0 ಅಂತರದಲ್ಲಿ ಗೆದ್ದರೆ ನೇರವಾಗಿ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆಯಲಿದೆ. ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳ ಟೆಸ್ಟ್ ಸರಣಿಯ ಫಲಿತಾಂಶದ ಮೇಲೆ ಅವಲಂಬಿತವಾಗುವ ಅಗತ್ಯವಿಲ್ಲ.
ಭಾರತ 3-1 ಅಂತರದಲ್ಲಿ ಸರಣಿ ಗೆದ್ದರೆ 62.5 ಪಿಸಿಟಿ ಹೊಂದಲಿದೆ. ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ಮುಂಬರುವ ಟೆಸ್ಟ್ ಸರಣಿಯಲ್ಲಿ ಗೆದ್ದರೂ ಕೂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನಿಂದ ಹೊರಗುಳಿಯಬೇಕಾಗುತ್ತದೆ. ಶ್ರೀಲಂಕಾ ತನ್ನ ಮುಂದಿನ ಟೆಸ್ಟ್ ಸರಣಿಯನ್ನು ನ್ಯೂಜಿಲೆಂಡ್ ವಿರುದ್ಧ ಆಡಲಿದ್ದು, ದಕ್ಷಿಣ ಆಫ್ರಿಕಾ ವೆಸ್ಟ್ ಇಂಡೀಸ್ ವಿರುದ್ಧ ಸರಣಿಯನ್ನು ಆಡಲಿದೆ.

ಶ್ರೀಲಂಕಾ, ದ.ಆಫ್ರಿಕಾ ತಂಡಕ್ಕೆ ಅವಕಾಶ
ಆಸ್ಟ್ರೇಲಿಯಾ ವಿರುದ್ಧ ಸರಣಿ ಸೋತ ಬಳಿಕ ದಕ್ಷಿಣ ಆಫ್ರಿಕಾದ ಫೈನಲ್ ಹಾದಿ ಕಠಿಣವಾಗಿದೆ. ಮುಂದಿನ ಟೆಸ್ಟ್ ಸರಣಿಯನ್ನು ಅದು ವೆಸ್ಟ್ ಇಂಡೀಸ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಯನ್ನು ಗೆದ್ದರೂ ಕೂಡ ಅವರು ಫೈನಲ್ ತಲುಪಲು ಭಾರತ ಮತ್ತು ಶ್ರೀಲಂಕಾ ತಂಡಗಳ ಮುಂದಿನ ಟೆಸ್ಟ್ ಸರಣಿಯನ್ನು ಅವಲಂಭಿಸಬೇಕಾಗುತ್ತದೆ.
ಶ್ರೀಲಂಕಾ ಏನಾದರೂ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡರೆ. ಭಾರತ ಆಸ್ಟ್ರೇಲಿಯಾ ವಿರುದ್ಧ ಸರಣಿ ಸೋತರೆ ಅವರು ಫೈನಲ್‌ಗೆ ಅರ್ಹತೆ ಪಡೆಯಲು ಅವಕಾಶವಿದೆ. ಆದರೆ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದರೆ ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ಹೋರಾಟ ಅಂತ್ಯವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications