Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final: ಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ತಂಡ ಆಸ್ಟ್ರೇಲಿಯಾ

ಭಾನುವಾರ, ಜೂನ್ 11ರಂದು ಲಂಡನ್‌ನ ಓವಲ್‌ನಲ್ಲಿ ಮುಕ್ತಾಯಗೊಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಐದನೇ ದಿನದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು 209 ರನ್‌ಗಳಿಂದ ಸೋಲಿಸಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದರು.

ಗೆಲುವಿಗೆ ದಾಖಲೆಯ 444 ರನ್‌ಗಳ ಬೃಹತ್ ಮೊತ್ತ ಬೆನ್ನತ್ತಿದ ಭಾರತ ತಂಡ ನಾಲ್ಕನೇ ದಿನದಾಟದ ಅಂತ್ಯಕ್ಕೆ 160 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು. ಐದನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾ ಭೋಜನ ವಿರಾಮಕ್ಕೂ ಮೊದಲೇ 24 ಓವರ್‌ಗಳಲ್ಲಿ 70 ರನ್‌ಗಳಿಗೆ ಉಳಿದ ಏಳು ವಿಕೆಟ್‌ಗಳನ್ನು ಕಳೆದುಕೊಂಡು 234 ರನ್‌ಗಳಿಗೆ ಸರ್ವಪತನ ಕಂಡಿತು.

WTC Final: Australia Is The 1st Team In Cricket History To Win All 4 ICC Trophies

ದಶಕದ ನಂತರ ಐಸಿಸಿ ಪ್ರಶಸ್ತಿ ಗೆಲ್ಲುವ ಭರವಸೆ ಹೊಂದಿದ್ದ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮತ್ತೊಮ್ಮೆ ನಿರಾಸೆ ಮೂಡಿಸಿತು. ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಮುಗ್ಗರಿಸಿತು. ಇನ್ನು ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದುಕೊಂಡಿತು.

ಒಂದೇ ಓವರ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾರ ವಿಕೆಟ್ ಕಬಳಿಸಿದ ಸ್ಕಾಟ್ ಬೋಲ್ಯಾಂಡ್ ಭಾರತಕ್ಕೆ ಆಘಾತ ನೀಡಿದರು. ನಂತರ ಸ್ಪಿನ್ನರ್ ನಾಥನ್ ಲಿಯಾನ್ ಭಾರತ ತಂಡದ ಕೆಳ ಕ್ರಮಾಂಕದ ವಿಕೆಟ್ ಕಬಳಿಸಿ ತಮ್ಮ ತಂಡಕ್ಕೆ ಗೆಲುವು ತಂದುಕೊಟ್ಟರು.

ಎಲ್ಲಾ 4 ಐಸಿಸಿ ಟ್ರೋಫಿ ಗೆದ್ದ ಮೊದಲ ತಂಡ ಆಸ್ಟ್ರೇಲಿಯಾ

ಕ್ರಿಕೆಟ್ ಇತಿಹಾಸದಲ್ಲಿ ಆಸ್ಟ್ರೇಲಿಯಾ ತಂಡ ಎಲ್ಲಾ ನಾಲ್ಕು ಐಸಿಸಿ ಟ್ರೋಫಿಗಳನ್ನು ಗೆದ್ದ ಮೊದಲ ತಂಡವಾಗಿ ಹೊರಹೊಮ್ಮಿತು. ಏಕದಿನ ವಿಶ್ವಕಪ್, ಏಕದಿನ ಚಾಂಪಿಯನ್ಸ್ ಟ್ರೋಫಿ, ಟಿ20 ವಿಶ್ವಕಪ್ ಪ್ರಶಸ್ತಿ ಹೀಗೆ ಎಲ್ಲ ತರಹದ ಐಸಿಸಿ ಪ್ರಶಸ್ತಿಗಳನ್ನು ಬಾಚಿಕೊಂಡು ಕ್ರಿಕೆಟ್‌ನ ಕಿಂಗ್ ಎನಿಸಿಕೊಂಡಿದೆ.

WTC Final: Australia Is The 1st Team In Cricket History To Win All 4 ICC Trophies

ಆಸ್ಟ್ರೇಲಿಯಾ ತಂಡ 5 ಬಾರಿ ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದಿದ್ದರೆ, 2 ಬಾರಿ ಏಕದಿನ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. 1 ಬಾರಿ ಟಿ20 ವಿಶ್ವಕಪ್ ಮತ್ತು ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ. ಪ್ಯಾಟ್ ಕಮಿನ್ಸ್ ಪಡೆ ತಮ್ಮ ಮುಂದಿನ ಇಂಗ್ಲೆಂಡ್ ವಿರುದ್ಧದ ಆಶಸ್ ಟೆಸ್ಟ್‌ ಸರಣಿಗೆ ಭರ್ಜರಿಯಾಗಿ ತಯಾರಾಗಿದೆ.

ಇನ್ನು ಈ ಫಲಿತಾಂಶದಿಂದ ಸೌತಾಂಪ್ಟನ್‌ನಲ್ಲಿ ನಡೆದ 2021ರ ಉದ್ಘಾಟನಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಭಾರತ ತಂಡ ಮತ್ತೊಮ್ಮೆ ಐಸಿಸಿ ಪ್ರಶಸ್ತಿ ಆಸೆ ಕೈಬಿಟ್ಟಿದೆ.

ಭಾರತ ತಂಡದ ಪರ ಎರಡನೇ ಇನ್ನಿಂಗ್ಸ್‌ನಲ್ಲಿ ನಾಯಕ ರೋಹಿತ್ ಶರ್ಮಾ 43 ರನ್, ಶುಭ್ಮನ್ ಗಿಲ್ 18 ರನ್, ಚೇತೇಶ್ವರ ಪೂಜಾರ 27 ರನ್, ವಿರಾಟ್ ಕೊಹ್ಲಿ 49 ರನ್, ಅಜಿಂಕ್ಯ ರಹಾನೆ 46 ರನ್, ರವೀಂದ್ರ ಜಡೇಜಾ 0, ಕೆಎಸ್ ಭರತ್ 23 ರನ್, ಮೊಹಮ್ಮದ್ ಶಮಿ 13 ರನ್ ಗಳಿಸಿದರು.

ಇನ್ನು ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾ ತಂಡದ ಪರ ಸ್ಕಾಟ್ ಬೋಲ್ಯಾಂಡ್ 16 ಓವರ್‌ಗಳಲ್ಲಿ 46 ರನ್ ನೀಡಿ 3 ವಿಕೆಟ್ ಪಡೆದರೆ, ನಾಥನ್ ಲಿಯಾನ್ 15.3 ಓವರ್‌ಗಳಲ್ಲಿ 41 ರನ್ ನೀಡಿ 4 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಮಿಚೆಲ್ ಸ್ಟಾರ್ಕ್ 2 ವಿಕೆಟ್ ಮತ್ತು ಪ್ಯಾಟ್ ಕಮ್ಮಿನ್ಸ್ 1 ವಿಕೆಟ್ ಪಡೆದರು.

Story first published: Sunday, June 11, 2023, 18:08 [IST]
Other articles published on Jun 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+