WTC Final: ಭಾರತ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಬಲಿಷ್ಠ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ

ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ಫೈನಲ್‌ಗೆ ಆಸ್ಟ್ರೇಲಿಯಾ ಹಾಗೂ ಟೀಮ್ ಇಂಡಿಯಾ ತಂಡಗಳು ಅರ್ಹತೆ ಗಿಟ್ಟಿಸಿಕೊಂಡಿವೆ. ಆಸ್ಟ್ರೇಲಿಯಾ ಎಲ್ಲಾ ತಂಡಗಳಿಗಿಂತ ಹೆಚ್ಚು ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಮೊದಲೇ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿತ್ತು.
ಬಳಿಕ ಇದೇ ವರ್ಷದ ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಭಾರತದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 2-1 ಅಂತರದಲ್ಲಿ ಜಯ ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಸೌತ್ ಆಫ್ರಿಕಾ ತಂಡವನ್ನು ಮೂರನೇ ಸ್ಥಾನಕ್ಕೆ ತಳ್ಳಿ ತಾನು ಎರಡನೇ ಸ್ಥಾನವನ್ನು ಪಡೆದುಕೊಂಡು ಆಸ್ಟ್ರೇಲಿಯಾ ಜತೆ ಫೈನಲ್ ಆಡಲು ಅರ್ಹತೆ ಗಿಟ್ಟಿಸಿಕೊಂಡಿತ್ತು.
ಇನ್ನು ಕಳೆದ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿಯೂ ಭಾರತ ಫೈನಲ್ ಪಂದ್ಯವನ್ನು ತಲುಪಿತ್ತು ಹಾಗೂ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ವಿರುದ್ಧ ಕಣಕ್ಕಳಿದಿತ್ತು. ಸೌಥಂಪ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಆ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ 8 ವಿಕೆಟ್‌ಗಳ ಗೆಲುವನ್ನು ಸಾಧಿಸಿದ್ದ ನ್ಯೂಜಿಲೆಂಡ್ ಪ್ರಥಮ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿಯೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಇನ್ನು ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿಯ ಫೈನಲ್ ಪಂದ್ಯ ಜೂನ್ 7ರಿಂದ 11ರವರೆಗೆ ಲಂಡನ್‌ನ ದ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಟೂರ್ನಿಗೆ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೇ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಿದೆ.
ಜೂನ್ 7ರಿಂದ 11ರವರೆಗೆ ನಡೆಯಲಿರುವ ಭಾರತ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಹಾಗೂ ಜೂನ್ 16ರಿಂದ ಜುಲೈ 2ರವರೆಗೆ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಆಶಸ್ ಟೆಸ್ಟ್ ಸರಣಿಗೆ ಸೇರಿದಂತೆ ಆಸ್ಟ್ರೇಲಿಯಾ 17 ಆಟಗಾರರ ತಂಡವನ್ನು ಪ್ರಕಟಿಸಿದೆ.
ಪ್ರಕಟವಾಗಿರುವ ಆಸ್ಟ್ರೇಲಿಯಾ ಸ್ಕ್ವಾಡ್ ಹೀಗಿದೆ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾ, ಸ್ಟೀವ್ ಸ್ಮಿತ್ (ಉಪನಾಯಕ) , ಮಿಚೆಲ್ ಸ್ಟಾರ್ಕ್ ಮತ್ತು ಡೇವಿಡ್ ವಾರ್ನರ್
ಇನ್ನು ಈ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಸ್ಥಾನ ಪಡೆದುಕೊಂಡಿರುವುದರ ಬಗ್ಗೆ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ತಂಡ ಸಮತೋಲನದಿಂದ ಕೂಡಿದೆ ಹಾಗೂ ಇದು ಟೀಮ್ ಇಂಡಿಯಾಗೆ ತೀವ್ರ ಪೈಪೋಟಿ ನೀಡಲಿದೆ ಎಂಬ ಅಭಿಪ್ರಾಯಗಳನ್ನು ಕ್ರಿಕೆಟ್ ಪ್ರೇಮಿಗಳು ವ್ಯಕ್ತಪಡಿಸಿದ್ದಾರೆ.
ಆಸ್ಟ್ರೇಲಿಯಾ ಇಂಗ್ಲೆಂಡ್ ಪ್ರವಾಸದ ವೇಳಾಪಟ್ಟಿ ಈ ಕೆಳಕಂಡಂತಿದೆ..
ಆಸ್ಟ್ರೇಲಿಯಾ vs ಭಾರತ - ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ - ಜೂನ್ 6ರಿಂದ 11 - ಲಂಡನ್‌ನ ದ ಓವಲ್‌ನಲ್ಲಿ ನಡೆಯಲಿದೆ.
ಮೊದಲ ಆಶಸ್ ಟೆಸ್ಟ್ - ಜೂನ್ 16ರಿಂದ ಜೂನ್ 20 - ಎಡ್ಜ್‌ಬಾಸ್ಡನ್‌ನಲ್ಲಿ ನಡೆಯಲಿದೆ.
ಎರಡನೇ ಆಶಸ್ ಟೆಸ್ಟ್ - ಜೂನ್ 28ರಿಂದ ಜುಲೈ 2ರವರೆಗೆ ಲಾರ್ಡ್ಸ್‌ನಲ್ಲಿ ನಡೆಯಲಿದೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications