ಟೀಮ್ ಇಂಡಿಯಾದ ಆಟಗಾರರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಆಡುತ್ತಿದ್ದಾರೆ. ಈ ಲೀಗ್ ಮುಗಿದ ಬಳಿಕ ಟೀಮ್ ಇಂಡಿಯಾ ಆಟಗಾರರು ಅಂತಾರಾಷ್ಟ್ರೀಯ ಸರಣಿಗಳತ್ತ ಮುಖ ಮಾಡುತ್ತಾರೆ. ಮುಂಬರುವ ಸರಣಿಗಾಗಿ ಬಿಸಿಸಿಐ ಬಿಗ್ ಪ್ಲ್ಯಾನ್ ಮಾಡಿಕೊಂಡಿದೆ. ಭಾರತ ತಂಡ ಜೂನ್‌ನಲ್ಲಿ ಅಂತಾರಾಷ್ಟ್ರೀಯ ಸರಣಿಗೆ ಮರಳಲಿದ್ದು ಆ ಸಮಯದಲ್ಲಿ ಹೊಸ ಸರಣಿಯೂ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ ಬಿಸಿಸಿಐ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗಾಗಿ ವಿಶೇಷ ಯೋಜನೆಯನ್ನು ಅಭಿವೃದ್ಧಿಪಡಿಸಿದೆ. ಬರೀ ಬುಮ್ರಾ ಅಷ್ಟೇ ಅಲ್ಲ ಕರ್ನಾಟಕದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ ಸಹ ಈ ಯೋಜನೆಯ ಲಾಭ ಪಡೆಯುವ ಸಾಧ್ಯತೆ ಇದೆ.
ಬಿಸಿಸಿಐ ಮುಂಬರುವ ಐಸಿಸಿ ಈವೆಂಟ್ ಬಗ್ಗೆ ಮೆಗಾ ಪ್ಲ್ಯಾನ್ ಸಿದ್ಧ ಪಡಿಸಿಕೊಳ್ಳುತ್ತಿದೆ. ಈ ಯೋಜನೆಯಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಸಹ ಸೇರಿದೆ. ಈ ಫೈನಲ್ 2027ರಲ್ಲಿ ನಡೆಯಲಿದ್ದು, ಇದಕ್ಕಾಗಿ ಭಾರತ ಈ ವರ್ಷದಿಂದಲೇ ಸರಣಿಗಳನ್ನು ಆಡಲಿದೆ. ಆದರೆ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆಯಲು ಭಾರತದ ಹಾದಿ ಸುಗಮವಾಗಿಲ್ಲ. ಭಾರತ ತಂಡ ಮುಂಬರುವ ಎಲ್ಲ ಸರಣಿಗಳನ್ನು ಗೆದ್ದಾಗ ಮಾತ್ರ ಡಬ್ಲ್ಯುಟಿಸಿ ಫೈನಲ್ ಪ್ರವೇಶಿಸಬಹದು.

ಟೀಮ್ ಇಂಡಿಯಾ ಜೂನ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಟೆಸ್ಟ್ ಸರಣಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಲ್ಲ. ಆದರೆ ಮುಂದಿನ ಸರಣಿಗಳ ತಯಾರಿಗೆ ಇದು ತುಂಬ ಮುಖ್ಯ. ಬಿಸಿಸಿಐ ಜಸ್ಪ್ರೀತ್ ಬುಮ್ರಾ ಅವರ ಕೆಲಸದ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ಪ್ಲ್ಯಾನ್ ಮಾಡಿಕೊಂಡಿದೆ.
ಬಿಸಿಸಿಐ ಮುಂಬರುವ ಎಲ್ಲ ಟೆಸ್ಟ್ ಸರಣಿಗಳನ್ನು ಬುಮ್ರಾ ಆಡಬೇಕು ಎಂದು ಬಿಸಿಸಿಐ ಬಯಸುತ್ತದೆ. ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯಗಳನ್ನು ಸಹ ನಿಗದಿಪಡಿಸಲಾಗಿದೆ, ಈ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿದೆ. ಅಲ್ಲದೆ ಮುಂದಿನ ವರ್ಷ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಎಲ್ಲ ಸರಣಿಗಳು ಹಾಗೂ ಮುಂಬರುವ ಏಕದಿನ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಬಿಸಿಸಿಐ ಬಿಗ್ ಪ್ಲ್ಯಾನ್ ಮಾಡಿಕೊಂಡಿದೆ. ಡಬ್ಲ್ಯುಟಿಸಿ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆರನೇ ಸ್ಥಾನದಲ್ಲಿದೆ. ಅಗ್ರ ಎರಡು ಸ್ಥಾನಗಳನ್ನು ಪಡೆದ ತಂಡಗಳು ಮಾತ್ರ ಫೈನಲ್‌ಗೆ ಪ್ರವೇಶ ಪಡೆಯಲಿವೆ.

ಜಸ್ಪ್ರೀತ್ ಬುಮ್ರಾ ಮುಂಬರುವ ಎಲ್ಲ ಟೆಸ್ಟ್ ಪಂದ್ಯಗಳನ್ನು ಆಡುತ್ತಾರೆ ಎಂದು ವರದಿಯಾಗಿದೆ. ಇನ್ನು ಬುಮ್ರಾ ಮುಂದಿನ ದಿನಗಳಲ್ಲಿ ಭಾರತದ ಪರ ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡುವುದಿಲ್ಲ. ಇವರ ಚಿತ್ತ ಟೆಸ್ಟ್ ಹಾಗೂ ಕೆಲವು ಏಕದಿನ ಪಂದ್ಯಗಳ ಮೇಲೆ ನೆಟ್ಟಿರಲಿದೆ. ಆಟಗಾರರ ಕೆಲಸದ ಹೊರೆಯನ್ನು ನಿರ್ವಹಿಸುವುದು ಬಿಸಿಸಿಐಗೆ ದೊಡ್ಡ ಪ್ರಶ್ನೆಯಾಗಿದೆ.
ದೇಶೀಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ ಮತ್ತು ರುತುರಾಜ್ ಗಾಯಕ್ವಾಡ್‌ಗಳಿಗೆ ಅವಕಾಶಗಳನ್ನು ನೀಡುವ ಬಗ್ಗೆ ಬಿಸಿಸಿಐ ಪರಿಗಣಿಸುತ್ತಿದೆ ಎಂದು ತಿಳಿದುಬಂದಿದೆ.