WTC Final: ಕೊಹ್ಲಿ, ಜಡೇಜಾ ಔಟ್: ಒಂದೇ ಓವರ್‌ನಲ್ಲಿ ಎರಡು ಆಘಾತ ನೀಡಿದ ಬೋಲಂಡ್
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಭಾರತದ ಗೆಲುವಿನ ಕನಸು ಬಹುತೇಕ ಭಗ್ನವಾಗಿದೆ. ಟೀಮ್ ಇಂಡಿಯಾದ ಗೆಲುವಿನ ಭರವಸೆಗೆ ಏಕೈಕ ಕಾರಣವಾಗಿದ್ದ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯಾ ರಹಾನೆ ಜೊಡಿ ಆರಂಭಿಕ ಹಂತದಲ್ಲಿಯೇ ಬೇರ್ಪಟ್ಟಿರುವ ಕಾರಣ ಆಸಿಸ್ ಪಡೆ ಗೆಲುವಿನ ಕನಸು ಕಾಣಲು ಆರಂಭಿಸಿದೆ.
ಟೀಮ್ ಇಂಡಿಯಾ 164 ರನ್‌ಗಳಿಸಿ 3 ವಿಕೆಟ್ ಕಳೆದುಕೊಂಡಲ್ಲಿಂದ ಐದನೇ ದಿನದಾಟವನ್ನು ಮುಂದುವರಿಸಿತು. ಆದರೆ ತಂಡದ ಮೊತ್ತಕ್ಕೆ ಕೇವಲ 15 ರನ್ ಸೇರ್ಪಡೆಗೊಂಡಾಗ ಬೋಲಂಡ್ ಎಸೆತದಲ್ಲಿ ವಿರಾಟ್ ಕೊಹ್ಲಿ ಸ್ಟೀವ್ ಸ್ಮಿತ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದಾರೆ. 49 ರನ್‌ಗಳಿದ್ದ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡಿರುವ ಕಾರಣ ಟೀಮ್ ಇಂಡಿಯಾ ದೊಡ್ಡ ಹಿನ್ನಡೆಗೆ ಕಾರಣವಾಗಿದೆ.

ಇನ್ನು ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡ ಎರಡನೇ ಎಸೆತದಲ್ಲಿಯೇ ಭಾರತ ತಂಡ ಮತ್ತೊಂದು ಆಘಾತ ಅನುಭವಿಸಿದೆ. ರವೀಂದ್ರ ಜಡೇಜಾ ಕೂಡ ತಾನು ಎದುರಿಸಿದ ಎರಡನೇ ಎಸೆತದಲ್ಲಿಯೇ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದಾರೆ. ಈ ಮೂಲಕ ಕೇವಲ ಮೂರು ಎಸೆತಗಳ ಅಂತರದಲ್ಲಿ ಟೀಮ್ ಇಂಡಿಯಾ ತನ್ನ ಎರಡು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿದೆ.
ಸಂಕಷ್ಟದಲ್ಲಿ ಭಾರತ
ಇನ್ನು ಟೀಮ್ ಇಂಡಿಯಾ ಪ್ರಸ್ತುತ ಐದು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿದ್ದು ಕೊನೆಯ ದಿನದಾಟವನ್ನು ಮುಂದುವರಿಸಿದೆ. ಆದರೆ ಟೀಮ್ ಇಂಡಿಯಾ ಮುಂದೆ ಇನ್ನು ಕೂಡ ಭಾರೀ ದೊಡ್ಡ ಗುರಿಯಿದೆ. ಹೀಗಾಗಿ ಈ ಪಂದ್ಯವನನ್ಉ ಗೆಲ್ಲುವ ಹೋರಾಟದಲ್ಲಿ ಭಾರತ ಮತ್ತಷ್ಟು ಹಿನ್ನಡೆ ಸಾಧಿಸಿದ್ದು ಆಸ್ಟ್ರೇಲಿಯಾ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಿದೆ.
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಮಾರ್ಕಸ್ ಹ್ಯಾರಿಸ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications