ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟೂರ್ನಿ ಬಳಿಕ ನಿವೃತ್ತಿ ಹೊಂದಬಹುದಾದ 5 ಭಾರತೀಯ ಆಟಗಾರರು!

WTC Final: Here is the list of 5 Indian Players Who Might Retire After The Tournament

ಜೂನ್ 18-22ರವರೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇದು ಟೆಸ್ಟ್ ಕ್ರಿಕೆಟ್‌ನ ವಿಶ್ವಕಪ್ ಎಂದೇ ಖ್ಯಾತಿಯನ್ನು ಪಡೆದುಕೊಳ್ಳುತ್ತಿದ್ದು ದಿನದಿಂದ ದಿನಕ್ಕೆ ಈ ಪಂದ್ಯದ ಮೇಲೆ ನಿರೀಕ್ಷೆಗಳು ಹೆಚ್ಚಾಗುತ್ತಿವೆ.

ಐಪಿಎಲ್ ಟೂರ್ನಿ ವಿಸ್ತರಿಸುವ ಬಿಸಿಸಿಐ ಕನಸಿಗೆ ಐಸಿಸಿ ತಣ್ಣೀರು

ಇನ್ನು ಈ ಪಂದ್ಯಕ್ಕೆ ಬಿಸಿಸಿಐ 20 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದು ಕೆಲ ಸ್ಟಾರ್ ಆಟಗಾರರ ಹೆಸರನ್ನು ಕೈಬಿಡಲಾಗಿತ್ತು. 20 ಸದಸ್ಯರ ತಂಡವನ್ನೇನೋ ಬಿಸಿಸಿಐ ಪ್ರಕಟಿಸಿ ಇಂಗ್ಲೆಂಡ್‌ಗೆ ಕಳುಹಿಸಿದೆ, ಆದರೆ ಅಷ್ಟು ಆಟಗಾರರ ಪೈಕಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಯಾವ ಆಟಗಾರರಿಗೆ ಆಡುವ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕು. ಇನ್ನು ಈ ಟೂರ್ನಿ ಮುಗಿದ ಬಳಿಕ ಭಾರತದ ಕೆಲ ಆಟಗಾರರು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‌ನಲ್ಲಿ ಭಾರತದ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಇರ್ಫಾನ್ ಪಠಾಣ್!

ಹೌದು ಎಷ್ಟೋ ಆಟಗಾರರಿಗೆ ಟೆಸ್ಟ್ ತಂಡದಲ್ಲಿ ಅವಕಾಶ ದೊರಕುತ್ತಿಲ್ಲ, ಹೊಸ ಹೊಸ ಆಟಗಾರರ ಸೇರ್ಪಡೆಯಾಗುತ್ತಿದ್ದು ಹಿರಿಯ ಆಟಗಾರರು ಸತತವಾಗಿ ಉತ್ತಮ ಪ್ರದರ್ಶನ ನೀಡದ ಕಾರಣ ಟೆಸ್ಟ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುವಲ್ಲಿ ಎಡವುತ್ತಿದ್ದಾರೆ. ಅಂತಹ ಅವಕಾಶ ಸಿಗದ ಕ್ರಿಕೆಟಿಗರು ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಮುಗಿದ ಬಳಿಕ ನಿವೃತ್ತಿ ಘೋಷಿಸುವ ಸಾಧ್ಯತೆಯಿದ್ದು ಭಾರತದ ಈ ಕೆಳಕಂಡ ಕ್ರಿಕೆಟಿಗರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಬಹುದಾಗಿದೆ..

1. ವೃದ್ಧಿಮಾನ್ ಸಹಾ

1. ವೃದ್ಧಿಮಾನ್ ಸಹಾ

ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾ ತಂಡದಲ್ಲಿ ವೃದ್ಧಿಮಾನ್ ಸಹಾ ಅವಕಾಶವನ್ನೇನೋ ಪಡೆದುಕೊಂಡಿದ್ದಾರೆ, ಆದರೆ ಆಡುವ ಬಳಗಕ್ಕೆ ಆಯ್ಕೆ ಆಗುವುದು ಸುಲಭದ ಮಾತಲ್ಲ. ಏಕೆಂದರೆ ಭಾರತ ಟೆಸ್ಟ್ ತಂಡದ ಮೊದಲ ಆದ್ಯತೆಯ ವಿಕೆಟ್ ಕೀಪರ್ ರಿಷಭ್ ಪಂತ್. ಹೌದು ರಿಷಭ್ ಪಂತ್ ಇರುವಾಗ ವೃದ್ಧಿಮಾನ್ ಸಹಾಗೆ ಅವಕಾಶ ಸಿಗುವುದು ತೀರಾ ಕಷ್ಟ. ಕಳೆದ ಆಸ್ಟ್ರೇಲಿಯಾ ಪ್ರವಾಸದ ಮೊದಲನೇ ಟೆಸ್ಟ್ ಪಂದ್ಯ ಆಡಿದ ಬಳಿಕ ಇದುವರೆಗೂ ಯಾವುದೇ ಟೆಸ್ಟ್ ಪಂದ್ಯದಲ್ಲಿಯೂ ಆಡುವ ಅವಕಾಶವನ್ನು ವೃದ್ಧಿಮಾನ್ ಸಹಾ ಪಡೆದಿಲ್ಲ. ಹೀಗಾಗಿ ಈ ಇಂಗ್ಲೆಂಡ್ ಪ್ರವಾಸ ಮುಗಿದ ಬಳಿಕ 34 ವರ್ಷದ ವೃದ್ಧಿಮಾನ್ ಸಹಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳುವ ಸಾಧ್ಯತೆಗಳು ಹೆಚ್ಚಿವೆ.

2. ಶಿಖರ್ ಧವನ್

2. ಶಿಖರ್ ಧವನ್

ಶಿಖರ್ ಧವನ್ ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ಟೀಂ ಇಂಡಿಯಾದ ಸ್ಫೋಟಕ ಆಟಗಾರ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಟೆಸ್ಟ್ ತಂಡದಲ್ಲಿ ಶಿಖರ್ ಧವನ್ ಸ್ಥಾನ ಪಡೆದುಕೊಳ್ಳುವುದರಲ್ಲಿ ವಿಫಲರಾಗುತ್ತಿದ್ದಾರೆ. ಟೀಮ್ ಇಂಡಿಯಾ ಟೆಸ್ಟ್ ತಂಡದ ಆರಂಭಿಕರಾಗಿ ರೋಹಿತ್ ಶರ್ಮಾ, ಶುಬ್ಮನ್ ಗಿಲ್ ಹಾಗೂ ಮಯಾಂಕ್ ಅಗರ್ವಾಲ್ ಇರುವ ಕಾರಣ ಶಿಖರ್ ಧವನ್ ಅವಕಾಶ ವಂಚಿತರಾಗುತ್ತಿದ್ದಾರೆ. ಇನ್ನು ಭಾರತದ ಪರ ಶಿಖರ್ ಧವನ್ ಟೆಸ್ಟ್ ಪಂದ್ಯವನ್ನಾಡಿ 3 ವರ್ಷಗಳು ಕಳೆದಿವೆ. 2018ರ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಶಿಖರ್ ಧವನ್ ಕೊನೆಯದಾಗಿ ಟೆಸ್ಟ್ ಪಂದ್ಯವನ್ನಾಡಿದ್ದರು. ಹೀಗಾಗಿ ಶಿಖರ್ ಧವನ್ ಕೂಡ ಆದಷ್ಟು ಬೇಗ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.

3. ಇಶಾಂತ್ ಶರ್ಮಾ

3. ಇಶಾಂತ್ ಶರ್ಮಾ

ಇಶಾಂತ್ ಶರ್ಮಾ ಪ್ರಸ್ತುತ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾದ ಅತಿಹೆಚ್ಚು ಅನುಭವ ಹೊಂದಿರುವಂತಹ ಆಟಗಾರ. ಇಶಾಂತ್ ಶರ್ಮಾ ಟೆಸ್ಟ್ ತಂಡಕ್ಕೆ ಸತತವಾಗಿ ಆಯ್ಕೆಯಾಗುತ್ತಿದ್ದರೂ ಸಹ ಗಾಯದ ಸಮಸ್ಯೆಯಿಂದ ಆಗಾಗ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಳ್ಳದೆ ತಂಡದಿಂದ ಹೊರಗುಳಿದ ಉದಾಹರಣೆಗಳಿವೆ. ಇನ್ನು ಈಗಾಗಲೇ ನೂರಕ್ಕೂ ಹೆಚ್ಚು ಟೆಸ್ಟ್ ಪಂದ್ಯಗಳಲ್ಲಿ ಆಡಿರುವ ಇಶಾಂತ್ ಶರ್ಮಾ ಇಂಗ್ಲೆಂಡ್ ಪ್ರವಾಸದ ಬಳಿಕ ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

4. ಮುರಳಿ ವಿಜಯ್

4. ಮುರಳಿ ವಿಜಯ್

ಮುರಳಿ ವಿಜಯ್ ಭಾರತ ಟೆಸ್ಟ್ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಮುರಳಿ ವಿಜಯ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಮುರಳಿ ವಿಜಯ್ ಭಾರತ ತಂಡದ ಪರ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದು 2018ರ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ. ಆ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಮುರಳಿ ವಿಜಯ್ ಮತ್ತೆ ಅವಕಾಶವನ್ನು ಪಡೆದುಕೊಂಡಿಲ್ಲ. ಇನ್ನು ಅವಕಾಶ ಸಿಗದೆ ಈಗಾಗಲೇ 3 ವರ್ಷಗಳು ಕಳೆದಿದ್ದು ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟೂರ್ನಿ ಮುಗಿದ ಬಳಿಕ ಮುರಳಿ ವಿಜಯ್ ಕೂಡ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳುವ ಸಾಧ್ಯತೆಯಿದೆ.

5. ದಿನೇಶ್ ಕಾರ್ತಿಕ್

5. ದಿನೇಶ್ ಕಾರ್ತಿಕ್

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಕ್ಕೆ ಭಾರತದ ಪರ ವೀಕ್ಷಕ ವಿವರಣೆ ಮಾಡಲು ಸುನಿಲ್ ಗವಾಸ್ಕರ್ ಜೊತೆ ದಿನೇಶ್ ಕಾರ್ತಿಕ್ ಕೂಡ ಇಂಗ್ಲೆಂಡ್‌ ತಲುಪಿದ್ದಾರೆ. ಇನ್ನು ಇತ್ತೀಚಿಗಷ್ಟೇ ಮಾತನಾಡಿದ ದಿನೇಶ್ ಕಾರ್ತಿಕ್ ಸೀಮಿತ ಓವರ್ ಪಂದ್ಯಗಳಿಗೆ ಮರಳುವ ಆಸೆಯನ್ನು ವ್ಯಕ್ತಪಡಿಸಿದರು ಆದರೆ ಟೆಸ್ಟ್ ಕ್ರಿಕೆಟ್ ಕುರಿತು ಕಾರ್ತಿಕ್ ಯಾವುದೇ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಲಿಲ್ಲ. ಹಾಗೂ ಇತ್ತೀಚಿನ ಕೆಲ ವರ್ಷಗಳಿಂದ ದಿನೇಶ್ ಕಾರ್ತಿಕ್ ಟೆಸ್ಟ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುವುದರಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಈ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟೂರ್ನಿಯ ಬಳಿಕ ದಿನೇಶ್ ಕಾರ್ತಿಕ್ ಕೂಡ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.

Story first published: Wednesday, June 9, 2021, 13:23 [IST]
Other articles published on Jun 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X