ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್: ಭಾರತದ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಇರ್ಫಾನ್ ಪಠಾಣ್!

WTC Final: I Think New Zealand Will Have A 55-45 Advantage says Irfan Pathan

ಜೂನ್ 18-22ರವರೆಗೆ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದ್ದು ಟೀಮ್ ಇಂಡಿಯಾ ತಂಡ ಈಗಾಗಲೇ ಸೌತಂಪ್ಟನ್ ತಲುಪಿ ಕ್ವಾರಂಟೈನ್ ನಿಯಮವನ್ನು ಅನುಸರಿಸುತ್ತಿದೆ.

ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಭಾರತ ಗೆದ್ದು ಬೀಗಿದ್ದ ಟೆಸ್ಟ್ ಸರಣಿಯೇ ಅತ್ಯುತ್ತಮ ಎಂದು ಘೋಷಿಸಿದ ಐಸಿಸಿ

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಭಾರತ ಯಾವುದೇ ಅಭ್ಯಾಸ ಪಂದ್ಯಗಳನ್ನು ಆಡುತ್ತಿಲ್ಲ ಆದರೆ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನೆಲದಲ್ಲಿ ಇಂಗ್ಲೆಂಡ್ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನು ಆಡುತ್ತಿದೆ. ಈ ಕಾರಣದಿಂದ ಭಾರತಕ್ಕಿಂತ ನ್ಯೂಜಿಲೆಂಡ್ ತಂಡಕ್ಕೆ ಹೆಚ್ಚಿನ ಅನುಕೂಲವಿದೆ ಎಂಬ ಚರ್ಚೆಗಳು ಸಾಕಷ್ಟು ನಡೆಯುತ್ತಿವೆ. ಇದೀಗ ಭಾರತದ ಮಾಜಿ ಆಟಗಾರ ಇರ್ಫಾನ್ ಪಠಾಣ್ ಹಾಗೂ ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಸ್ಕಾಟ್ ಸ್ಟೈರಿಸ್ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

WTC Final: ನ್ಯೂಜಿಲೆಂಡ್‌ಗೆ ಲಾಭ, ಭಾರತಕ್ಕೆ ನಷ್ಟ; ಯುವರಾಜ್ ಸಿಂಗ್ ಅಸಮಾಧಾನ

ಇತ್ತೀಚೆಗೆ ಟೀಮ್ ಇಂಡಿಯಾದ ಕೋಚ್ ರವಿಶಾಸ್ತ್ರಿ ಹಾಗೂ ಮಾಜಿ ಆಟಗಾರ ಯುವರಾಜ್ ಸಿಂಗ್ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯುತ್ತಿರುವ 2 ಟೆಸ್ಟ್ ಪಂದ್ಯಗಳ ವಿಷಯವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಭಾರತ ತಂಡಕ್ಕೆ ಯಾವುದೇ ರೀತಿಯ ಅಭ್ಯಾಸ ಪಂದ್ಯಗಳಿಲ್ಲ ಆದರೆ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನು ಆಡುತ್ತಿರುವುದರಿಂದ ಅವರಿಗೆ ಅನುಕೂಲ ಹೆಚ್ಚು ಎಂದು ಬೇಸರ ವ್ಯಕ್ತಪಡಿಸಿದ್ದರು. ಇದೀಗ ಇರ್ಫಾನ್ ಪಠಾಣ್ ಹಾಗೂ ಸ್ಕಾಟ್ ಸ್ಟೈರಿಸ್ ಕೂಡ ಅದೇ ವಿಚಾರವಾಗಿ ಚರ್ಚಿಸಿದ್ದು ಈ ಕೆಳಕಂಡಂತೆ ಮಾತನಾಡಿದ್ದಾರೆ.

ಭಾರತದ ಗೆಲುವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಇರ್ಫಾನ್ ಪಠಾಣ್

ಭಾರತದ ಗೆಲುವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಇರ್ಫಾನ್ ಪಠಾಣ್

'ನನ್ನ ಪ್ರಕಾರ ನ್ಯೂಜಿಲೆಂಡ್ ತಂಡ ಗೆಲ್ಲುವ ಸಂಭವ ಹೆಚ್ಚಿದೆ. ನ್ಯೂಜಿಲೆಂಡ್ ತಂಡಕ್ಕೆ ಅನುಕೂಲಗಳು ಹೆಚ್ಚಿದ್ದು ಶೇ. 55ರಷ್ಟು ಗೆಲ್ಲುವ ಸಾಧ್ಯತೆಗಳನ್ನು ಹೊಂದಿದೆ. ಹಾಗೂ ಆ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಹೆಚ್ಚಿನ ರನ್ ಗಳಿಸಲಿದ್ದಾರೆ ಹಾಗೂ ಟ್ರೆಂಟ್ ಬೌಲ್ಟ್ ಅಥವಾ ಮೊಹಮ್ಮದ್ ಶಮಿ ಹೆಚ್ಚಿನ ವಿಕೆಟ್ ಪಡೆಯಲಿದ್ದಾರೆ' ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.

 ನ್ಯೂಜಿಲೆಂಡ್ ಗೆಲ್ಲುವುದು ಖಚಿತ ಎಂದ ಸ್ಕಾಟ್ ಸ್ಟೈರಿಸ್

ನ್ಯೂಜಿಲೆಂಡ್ ಗೆಲ್ಲುವುದು ಖಚಿತ ಎಂದ ಸ್ಕಾಟ್ ಸ್ಟೈರಿಸ್

'ನನ್ನ ಪ್ರಕಾರ ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ 6 ವಿಕೆಟ್‍ಗಳ ಗೆಲುವು ಸಾಧಿಸಲಿದೆ. ನ್ಯೂಜಿಲೆಂಡ್ ತಂಡದ ಡಿವೋನ್ ಕಾನ್ವೆ ಪಂದ್ಯದಲ್ಲಿ ಹೆಚ್ಚಿನ ರನ್ ಗಳಿಸಲಿದ್ದಾರೆ ಹಾಗೂ ಟ್ರೆಂಟ್ ಬೌಲ್ಟ್ ಹೆಚ್ಚಿನ ವಿಕೆಟ್ ಪಡೆಯಲಿದ್ದಾರೆ' ಎಂದು ಸ್ಕಾಟ್ ಸ್ಟೈರಿಸ್ ಹೇಳಿದ್ದಾರೆ.

ನ್ಯೂಜಿಲೆಂಡ್‌ಗೆ ಅನುಕೂಲ ಎಂದು ಹೇಳುತ್ತಿರುವವರೇ ಹೆಚ್ಚು

ನ್ಯೂಜಿಲೆಂಡ್‌ಗೆ ಅನುಕೂಲ ಎಂದು ಹೇಳುತ್ತಿರುವವರೇ ಹೆಚ್ಚು

ಈ ಹಿಂದೆ ಹೇಳಿದಂತೆ ಯುವರಾಜ್ ಸಿಂಗ್, ರವಿಶಾಸ್ತ್ರಿ, ಸುನಿಲ್ ಗವಾಸ್ಕರ್ ಸೇರಿದಂತೆ ಹಲವಾರು ಮಾಜಿ ಕ್ರಿಕೆಟಿಗರು ಭಾರತಕ್ಕಿಂತ ನ್ಯೂಜಿಲೆಂಡ್ ತಂಡಕ್ಕೆ ಹೆಚ್ಚಿನ ಅನುಕೂಲವಿದೆ ಎಂದು ಹೇಳಿಕೆಗಳನ್ನು ನೀಡಿದ್ದಾರೆ.

ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿ ವಿರಾಟ್ ಕೊಹ್ಲಿ

ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿ ವಿರಾಟ್ ಕೊಹ್ಲಿ

ಯಾರು ಎಷ್ಟೇ ಟೀಕೆಗಳನ್ನು ಮಾಡುತ್ತಿದ್ದರು ಸಹ ತಲೆಕೆಡಿಸಿಕೊಳ್ಳದ ವಿರಾಟ್ ಕೊಹ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳುವ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದರು. 'ಈ ಹಿಂದೆ ನಡೆದಿರುವ ಹಲವಾರು ವಿದೇಶ ಪ್ರವಾಸದ ಸರಣಿಗಳಲ್ಲಿ ಯಾವುದೇ ಅಭ್ಯಾಸ ಪಂದ್ಯವನ್ನು ನಡೆಸದೇ ನಾವು ಗೆದ್ದಿದ್ದೇವೆ. ಹೀಗಾಗಿ ನ್ಯೂಜಿಲೆಂಡ್ ತಂಡಕ್ಕೆ ಹೆಚ್ಚಿನ ಅನುಕೂಲ ಇದೆ ಎನ್ನುವುದು ಬೇಡ' ಎಂದು ವಿರಾಟ್ ಕೊಹ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದರು.

Story first published: Wednesday, June 9, 2021, 9:32 [IST]
Other articles published on Jun 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X