WTC Final: ಆಸ್ಟ್ರೇಲಿಯಾವನ್ನು 469 ರನ್‌ಗಳಿಗೆ ಆಲೌಟ್ ಮಾಡಿದ ಟೀಮ್ ಇಂಡಿಯಾ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 469 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ. ಸ್ಟೀವ್ ಸ್ಮಿತ್ ಹಾಗೂ ಟ್ರೆವಿಸ್ ಹೆಡ್ ಅವರ ಅಮೋಘ ಜೊತೆಯಾಟದಿಂದ ದೊಡ್ಡ ಮೊತ್ತ ಪೇರಿಸಲು ಆಸ್ಟ್ರೇಲಿಯಾ ತಂಡ ಯಶಸ್ವಿಯಾದರೂ ಈ ಜೋಡಿಯನ್ನು ಬೇರ್ಪಡಿಸಿದ ಬಳಿಕ ಟೀಮ್ ಇಂಡಿಯಾ ಯಶಸ್ಸು ಸಾಧಿಸಿದೆ. ಹೀಗಾಗಿ ಮತ್ತಷ್ಟು ದೊಡ್ಡ ಮೊತ್ತವನ್ನು ಪೇರಿಸುವದರಿಂದ ತಡೆಯುವಲ್ಲಿ ಯಶಸ್ವಿಯಾಗಿದೆ.
ಮೊದಲ ದಿನದಾಟದ ಅಂತ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೇವಲ ಮೂರು ವಿಕೆಟ್ ಕಳೆದುಕೊಂಡು 327 ರನ್‌ಗಳನ್ನು ಗಳಿಸಿದಲ್ಲಿಂದ ಎರಡನೇ ದಿನದಾಟವನ್ನು ಆರಂಭಿಸಿತು. ಮೊದಲ ದಿದಾಟದ ಅಂತ್ಯದಲ್ಲಿ 95 ರನ್‌ಗಳಿಸಿದ್ದ ಸ್ಟೀವ್ ಸ್ಮಿತ್ ಇಂದು ತಾವು ಎದುರಿಸಿದ ಎರಡು ಎಸೆತಗಳಲ್ಲಿಯೇ ಶತಕವನ್ನು ಪೂರ್ಣಗೊಳಿಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಮಿತ್ 31ನೇ ಶತಕವನ್ನು ಬಾರಿಸಿದ್ದಾರೆ.

ಇನ್ನು ಟ್ರೆವಿಸ್ ಹೆಡ್ ಈ ಪಂದ್ಯದಲ್ಲಿ 163 ರನ್‌ಗಳಿಸಿದಾಗ ತಮ್ಮ ವಿಕೆಟ್ ಕಳೆದುಕೊಳ್ಳುವ ಮೂಲಕ ಈ ಬೃಹತ್ ಜೊತೆಯಾಟ ಮುರಿದು ಬಿತ್ತು. ನಂತರ ಬಂದ ಗ್ರೀನ್ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಬಳಿಕ ಸ್ಟೀವ್ ಸ್ಮಿತ್ ಶಾರ್ದೂಲ್ ಠಾಕೂರ್‌ಗೆ 121 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಅಲೆಕ್ಸ್ ಕ್ಯಾರಿ 48 ರನ್‌ಗಳ ಕೊಡುಗೆ ನಿಡಿದರು. ಉಳಿದಂತೆ ಎಲ್ಲಾ ಆಟಗಾರರು ಕೂಡ ಒಂದಂಕಿಗೆ ವಿಕೆಟ್ ಒಪ್ಪಿಸಿದರು.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಮೊಹಮ್ಮದ್ ಸಿರಾಜ್ ನಾಲ್ಕು ವಿಕೆಟ್ ಕಿತ್ತು ಅಬ್ಬರಿಸಿದರೆ ಮೊಹಮ್ಮದ್ ಶಮಿ ಹಾಗೂ ಶಾರ್ದೂಲ್ ಠಾಕೂರ್ ತಲಾ ಎರಡು ವಿಕೆಟ್ ಪಡೆದರು. ಒಂದು ವಿಕೆಟ್ ರವೀಂದ್ರ ಜಡೇಜಾ ಪಾಲಾಯಿತು. ಇದೀಗ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನ ಬ್ಯಾಟಿಂಗ್ ಆರಂಭಿಸಿದೆ.
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಮಾರ್ಕಸ್ ಹ್ಯಾರಿಸ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications