ಮತ್ತೊಂದು ಐಸಿಸಿ ಟ್ರೋಫಿ ಕನಸು ಭಗ್ನ: ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್ಸ್
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ಭಾರೀ ದೊಡ್ಡ ಅಂತರದ ಸೋಲು ಅನುಭವಿಸಿದ್ದು ಐಸಿಸಿ ಟ್ರೋಫಿ ಗೆಲ್ಲುವ ಮತ್ತೊಂದು ಕನಸು ಭಗ್ನಗೊಂಡಿದೆ. ಆಸ್ಟ್ರೇಲಿಯಾ ತಂಡ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದುಕೊಂಡಿದ್ದು ಮೂರು ಮಾದರಿಯಲ್ಲಿಯೂ ಐಸಿಸಿ ಟ್ರೋಫಿ ಗೆದ್ದ ಐತಿಹಾಸಿಕ ಸಾಧನೆ ಮಾಡಿದಂತಾಗಿದೆ.
ನಾಲ್ಕನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ ಮೂರಯ ವಿಕೆಟ್ ಕಳೆದುಕೊಂಡು 164 ರನ್‌ಗಳಿಸಿ ದಿನದಾಟ ಮುಗಿಸಿದಾಗ ಕೊನೆಯ ದಿನ ಟೀಮ್ ಇಂಡಿಯಾ ಗೆಲುವಿನ ಭರವಸೆಗಳು ಉಳಿದುಕೊಂಡಿಒದ್ದವು. ಅದಕ್ಕೆ ಕಾರಣ ಟೀಮ್ ಇಂಡಿಯಾದ ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯಾ ರಹಾನೆ ಕ್ರೀಸ್‌ನಲ್ಲಿ ನೆಲೆಯೂರಿದ್ದು. ಇಬ್ಬರು ಕೂಡ ಸರಾಗವಾಗಿ ಬ್ಯಾಟ್ ಬೀಸುತ್ತಿದ್ದ ಕಾರಣ ತಂಡ ಕೊನೆಯ ದಿನ ಖಂಡಿತಾ ಹೋರಾಟದ ಪ್ರದರ್ಶನ ನೀಡುವ ಭರವಸೆ ಮುಡಿಸಿತ್ತು.

ಆದರೆ ಈ ನಿರೀಕ್ಷೆ ಕೊನೆಯ ದಿನದಾಟದಲ್ಲಿ ಸುಳ್ಳಾಗಿದೆ. ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಅಜಿಂಕ್ಯಾ ರಹಾನೆ, ಶಾರ್ದೂಲ್ ಠಾಕೂರ್ ಕೊನೆಯ ದಿನದಾಟದಲ್ಲಿ ಯಾವುದೇ ಪ್ರತೊರೋಧ ನೀಡದೆ ವಿಕೆಟ್ ಕಳೆದುಕೊಂಡರು. ಹೀಗಾಗಿ ಟೀಮ್ ಇಂಡಿಯಾ ಈ ಮಹತ್ವದ ಪಂದ್ಯದಲ್ಲಿ 209 ರನ್‌ಗಳ ಅಂತರದ ಭಾರೀ ಸೋಲು ಕಂಡಿದೆ. ಈ ಮೂಲಕ ದಶಕದ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಮತ್ತೊಂದಯ ಕನಸು ಕೂಡ ಭಗ್ನವಾದಂತಾಗಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ಟೀಮ್ ಇಂಡಿಯಾದ ಹಿನ್ನಡೆಗೆ ಕಾರಣವಾಗಿದ್ದು ಸ್ಟೀವ್ ಸ್ಮಿತ್ ಹಾಗೂ ಟ್ರೆವಿಸ್ ಹೆಡ್ ಜೋಡಿ. ಇವರಿಬ್ಬರು ಮೊದಲ ಇನ್ನಿಂಗ್ಸ್‌ನಲ್ಲಿ ಇನ್ನೂರಕ್ಕೂ ಅಧಿಕ ರನ್‌ಗಳ ಜೊತೆಯಾಟ ನೀಡಿದ ಕಾರಣ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 469 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಲು ಸಾಧ್ಯವಾಯಿತು.

ಇನ್ನು ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 296 ರನ್‌ಗಳನ್ನು ಮಾಥ್ರ ಗಳಿಸಲು ಸಾಧ್ಯವಾಯಿತು. ತಮಡದ ಅಗ್ರ ಕ್ರಮಾಂಕದ ಆಟಗಾರರು ಅಲ್ಪ ಮೊತ್ತಕ್ಕೆ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಅಜಿಂಕ್ಯಾ ರಹಾನೆ, ರವೀಂದ್ರ ಜಡೇಜಾ ಹಾಗೂ ಶಾರ್ದೂಲ್ ಠಾಕೂರ್ ಉತ್ತಮ ಜೊತೆಯಾಟ ನೀಡಿದ ಕಾರಣ ಈ ಮೊತ್ತವನ್ನು ಗಳಿಸಲು ಸಾಧವಾಯಿತು.
ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗ ಶಿಸ್ತಿನ ಪ್ರದರ್ಶನ ನೀಡಿದರಾದರೂ ಆಸ್ಟ್ರೇಲಿಯಾ 270 ರನ್‌ಗಳಿಸಿ ಡಿಕ್ಲೇ ಮಾಡಿಕೊಂಡಿತು. ಇದರ ಪರಿಣಾಮವಾಗಿ ಭಾರತ ಈ ಪಂದ್ಯ ಕೊನೆಯ ಇನ್ನಿಂಗ್ಸ್‌ನಲ್ಲಿ 444 ರನ್‌ಗಳಿಸುವ ದೊಡ್ಡ ಸವಾಲು ಪಡೆದುಕೊಂಡಿತು.
ಈ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಟೀಮ್ ಇಂಡಿಯಾ ಆರಂಭದಲ್ಲಿ ಭರವಸೆಯ ಪ್ರದರ್ಶನ ನೀಡಿತು. ಆದರೆ ಟೀಮ್ ಇಂಡಿಯಾ ಅಗ್ರ ಕ್ರಮಾಂಖದ ಆಟಗಾರರನ್ನು ವಂಚಿಸಿ ವಿಕೆಟ್ ಪಡೆಯುವಲ್ಲಿ ಆಸಿಸ್ ಬೌಲರ್‌ಗಳು ಮತ್ತೆ ಯಶಸ್ವಿಯಾದರು. ಶುಬ್ಮನ್ ಗಿಲ್ ತಂಡದ ಮೊತ್ತ 41 ರನ್‌ಗಳಿಸಿದ್ದಾಗ ವಿವಾದಾತ್ಮಕ ತೀರ್ಪಿಗೆ ಬಲಿಯಾದರು. ನಂತರ ರೋಹಿತ್ ಶರ್ಮಾ ವೈಯಕ್ತಿಕ ಮೊತ್ತ 43 ರನ್‌ಗಳಿಸಿದ್ದಾಗ ಅನಗತ್ಯ ಹೊಡೆತಕ್ಕೆ ಮುಂದಾಗಿ ವಿಕೆಟ್ ಕಳೆದುಕೊಂಡರು. ನಂತರ ಚೇತೇಶ್ವರ್ ಪೂಜಾರ ಕೂಡ ನಾಲ್ಕನೇ ದಿನದಾಟದಲ್ಲಿ ವಿಕೆಟ್ ಕಳೆದುಕೊಂಡರು.
ಈ ಸಂದರ್ಭದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯಾ ರಹಾನೆ ಟೀಮ್ ಇಂಡಿಯಾ ಪರವಾಗಿ ಉತ್ತಮ ಜೊತೆಯಾಟದ ಭರವಸೆ ನೀಡಿ ಕೊನೆಯ ದಿನಕ್ಕೆ ಆಟವನ್ನು ಕಾಯ್ದಿರಿಸಿದ್ದರು. ಆದರೆ ಕೊನೆಯ ದಿನದಲ್ಲಿ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಅಜಿಂಕ್ಯಾ ರಹಾನೆ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಸಾರ್ಧಯವಾಗದ ಕಾರಣ ಈ ಹೋರಾಟದಲ್ಲಿ ಸೋಲೊಪ್ಪಿಕೊಂಡಿತು. ಟೀಮ್ ಇಂಡಿಯಾ ಕೊನೆಯ ಇನ್ನಿಂಗ್ಸ್‌ನಲ್ಲಿ 234 ರನ್‌ಗಳಿಗೆ ಆಲೌಟ್ ಆಗಿದ್ದು 209 ರನ್‌ಗಳ ಬೃಹತ್ ಅಂತರದ ಸೋಲು ಕಂಡಿದೆ.
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಮಾರ್ಕಸ್ ಹ್ಯಾರಿಸ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications