Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final, Ind vs Aus: ಟಾಸ್ ಗೆದ್ದ ಟೀಮ್ ಇಂಡಿಯಾ; ಅಶ್ವಿನ್‌ಗಿಲ್ಲ ಆಡುವ ಬಳಗದಲ್ಲಿ ಸ್ಥಾನ: Live score

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ಆಸ್ಟ್ರೇಲಿಯಾ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ನಾಯಕ ರೋಹಿತ್ ಶರ್ಮಾ ಕಠಿಣ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ತಂಡದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಆಡುವ ಬಳದಿಂದ ಹೊರಬಿದ್ದಿದ್ದು ಅವರ ಬದಲಿಗೆ ಹೆಚ್ಚುವರಿ ವೇಗಿಯನ್ನು ತಂಡದಲ್ಲಿ ಕಣಕ್ಕಿಳಿಸಲಾಗಿದೆ. ನಾಲ್ಕನೇ ಬೌಲರ್ ಆಗಿ ಶಾರ್ದೂಲ್ ಠಾಕೂರ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಉಳಿದ ಮೂವರು ಬೌಲರ್‌ಗಳು. ಇನ್ನು ಆರ್ ಅಶ್ವಿನ್ ತಂಡದಲ್ಲಿರುವ ಏಕೈಕ ಸ್ಪಿನ್ನರ್.

WTC Final, India vs Australia day 1,: Toss report, playing XI and Live score

ಇನ್ನು ಟೀಮ್ ಇಂಡಿಯಾದ ವಿಕೆರ್ ಕೀಪರ್ ಬ್ಯಾಟರ್ ಯಾರು ಎಂಬ ಪ್ರಶ್ನೆಗೂ ಉತ್ತರ ದೊರೆತಿದೆ. ಶ್ರೀಕರ್ ಭರತ್ ಹಾಗೂ ಇಶಾನ್ ಕಿಶನ್ ಮಧ್ಯೆ ನಾಯಕ ರೋಹಿತ್ ಭರತ್ ಅವರ ಮೇಲೆ ನಂಬಿಕೆಯಿರಿಸಿದ್ದು ಆಡುವ ಬಳಗಕ್ಕೆ ಸೇರ್ಪಡೆಗೊಳಿಸಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಬೆಂಚ್ ಕಾಯಬೇಕಿದೆ.

ಇನ್ನು ಟಾಸ್ ಸಂದರ್ಭದಲ್ಲಿ ನಾಯಕ ರೋಹಿತ್ ಶರ್ಮಾ ಆರ್ ಅಶ್ವಿನ್ ಅವರನ್ನು ಆಡುವ ಬಳಗದಿಂದ ಹೊರಗಿಟ್ಟ ಬಗ್ಗೆ ಮಾತನಾಡಿದ್ದಾರೆ. ಆರ್ ಅಶ್ವಿನ್ ಅವರಂತಾ ಆಟಗಾರನನ್ನು ತಂಡದ ಆಡುವ ಬಳಗದಿಂದ ಹೊರಗಿಡುವುದು ಖಂಡಿತಾ ಬಹಳ ಕಠಿಣ ನಿರ್ಧಾರ. ಆದರೆ ವಾತಾವರಣ ಹಾಗೂ ಪರಿಸ್ಥಿತಿಯನ್ನು ನೋಡಿಕೊಂಡು ಈ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.

ಇನ್ನು ಆಸ್ಟ್ರೇಲಿಯಾ ತಂಡ ಕೂಡ ನಾಲ್ವರು ವೇಗಿಗಳು ಹಾಗೂ ಓರ್ವ ಸ್ಪಿನ್ನರ್‌ ಜೊತೆಗೆ ಕಣಕ್ಕಿಳಿದಿದೆ. ಜೋಶ್ ಹೇಜಲ್‌ವುಡ್ ಬದಲಿಗೆ ನಿರೀಕ್ಷೆಯಂತೆಯೇ ಸ್ಕಾಟ್ ಬೋಲಂಡ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್ ಆಡುವ ಬಳಗದಲ್ಲಿರುವ ಏಕೈಕ ಸ್ಪಿನ್ನರ್ ಆಗಿದ್ದಾರೆ.

ಆಸ್ಟ್ರೇಲಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಮಾರ್ಕಸ್ ಹ್ಯಾರಿಸ್

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್

Story first published: Wednesday, June 7, 2023, 14:52 [IST]
Other articles published on Jun 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+