WTC Final, Ind vs Aus: 2ನೇ ದಿನದಾಟದಲ್ಲಿ ತಿರುಗಿ ಬೀಳಲಿದೆಯಾ ಭಾರತ: Live score
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾಗೆ ಭಾರೀ ಹಿನ್ನಡೆಯಾಗಿದೆ. ಮೊದಲ ದಿನದಾಟದ ಅಂತ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೇವಲ ಮೂರು ವಿಕೆಟ್ ಕಳೆದುಕೊಂಡಿದ್ದು 327 ರನ್‌ಗಳನ್ನು ಗಳಿಸಿ ಅತ್ಯುತ್ತಮ ಸ್ಥಿತಿಯಲ್ಲಿದೆ. ಅದರಲ್ಲೂ ಸ್ಟೀವ್ ಸ್ಮಿತ್ ಹಾಗೂ ಟ್ರೆವಿಸ್ ಹೆಡ್ ಜೋಡಿಯನ್ನು ಬೇರ್ಪಡಿಸುವುದು ಟೀಮ್ ಇಂಡಿಯಾದ ಮುಂದಿರುವ ದೊಡ್ಡ ಸವಾಲಾಗಿದೆ.
ಮೊದಲ ದಿನದಾಟದಲ್ಲಿ 76 ರನ್‌ಗಳಿಗೆ 3 ವಿಕೆಟ್ ಪಡೆದುಕೊಳ್ಳುವ ಮೂಲಕ ಆಸ್ಟ್ರೇಲಿಯಾ ವಿರುದ್ಧ ಪೈಪೋಟಿ ನೀಡಿದ್ದ ಭಾರತಕ್ಕೆ ನಂತರ ಸ್ಟೀವ್ ಸ್ಮಿತ್ ಹಾಗೂ ಟ್ರೆವಿಸ್ ಹೆಡ್ ಸತತವಾಗಿ ಕಾಡಿದ್ದಾರೆ. ಈ ಜೋಡಿ ಮೊದಲ ದಿನದಾಟದ ಅಂತ್ಯದಲ್ಲಿ ಅಜೇಯ ದ್ವಿಶತಕದ ಜೊತೆಯಾಟವನ್ನು ನೀಡಿ ಮುನ್ನುಗ್ಗಿದ್ದಾರೆ. ಟ್ರೆವಿಸ್ ಹೆಡ್ ಮೊದಲ ದಿನದಾಟಸ ಅಂತ್ಯದಲ್ಲಿ 146 ರನ್‌ಗಳನ್ನು ಗಳಿಸಿ ಅಜೇಯವಾಗುಳಿದಿದ್ದರೆ ಸ್ಟೀವ್ ಸ್ಮಿತ್ 95 ರನ್‌ಗಳಿಸಿದ್ದು ಶತಕದ ನಿರೀಕ್ಷೆಯಲ್ಲಿದ್ದಾರೆ.

ಈ ಪಂದ್ಯದ ಮೊದಲ ಸೆಶನ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸಮಬಲದ ಹೋರಾಟವನ್ನು ಪ್ರದರ್ಶಿಸಿದವು. ಆಸ್ಟ್ರೇಲಿಯಾ ತಂಡದ ಇಬ್ಬರು ಆಟಗಾರರನ್ನು ಭಾರತ ಔಟ್ ಮಾಡುವ ಮೂಲಕ ಹೋರಾಟ ಪ್ರದರ್ಶಿಸಿತು ಭಾರತ. ಆದರೆ ಎರಡನೇ ಸೆಶನ್‌ನಲ್ಲಿ ಕೆವಲ ಒಂದು ವಿಕೆಟ್ ಪಡೆದುಕೊಂಡ ಭಾರತ ಬಳಿಕ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಆಸಿಸ್ ಪಡೆ ಸಂಪೂರ್ಣವಾಗಿ ಮೇಲುಗೈ ಸಾಧಿಸಿದೆ.
ಟೀಮ್ ಇಂಡಿಯಾ ಪರವಾಗಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಹಾಗೂ ಶಾರ್ದೂಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡಿದ್ದಾರೆ. ಎರಡನೇ ದಿನದಾಟದಲ್ಲಿ ಭಾರತ ತಂಡ ಯಾವ ರೀತಿ ತಿರುಗೇಟು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಮಾರ್ಕಸ್ ಹ್ಯಾರಿಸ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications