Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final ಪಂದ್ಯದಲ್ಲಿ ಆ ಸ್ಟಾರ್ ಬೌಲರ್ ಬದಲು ಸಿರಾಜ್‌ಗೆ ಅವಕಾಶ ನೀಡಲು ವಿರಾಟ್ ಕೊಹ್ಲಿ ಚಿಂತನೆ!

WTC Final: India working on the plan to fit Mohammed Siraj in the WTC Final XI

ಸದ್ಯ ವಿಶ್ವದಾದ್ಯಂತ ಇರುವ ಕ್ರಿಕೆಟ್ ಅಭಿಮಾನಿಗಳ ಚಿತ್ತ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದತ್ತ ನೆಟ್ಟಿದೆ. ಜೂನ್ 18-22ರವರೆಗೆ ನಡೆಯಲಿರುವ ಈ ಪ್ರತಿಷ್ಟಿತ ಪಂದ್ಯದ ಕುರಿತು ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಪಂಡಿತರು ಹಾಗೂ ಕ್ರೀಡಾಭಿಮಾನಿಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚೆಗಷ್ಟೇ ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ಬೌಲಿಂಗ್ ದಾಳಿ ಬಲಿಷ್ಠವಾಗಿರಬೇಕಾದರೆ ಮೊಹಮ್ಮದ್ ಸಿರಾಜ್‌ಗೆ ತಂಡದಲ್ಲಿ ಅವಕಾಶ ನೀಡಬೇಕು ಎಂದು ಮಾಜಿ ಕ್ರಿಕೆಟಿಗ ಗುಂಡಪ್ಪ ವಿಶ್ವನಾಥ್ ಅಭಿಪ್ರಾಯಪಟ್ಟಿದ್ದರು. ಅದೇ ರೀತಿ ಇದೀಗ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್‌ಗೆ ಅವಕಾಶ ನೀಡುವ ದಾರಿಗಳನ್ನು ಹುಡುಕುತ್ತಿದೆ ಎನ್ನಲಾಗುತ್ತಿದೆ.

ಆತನಿಗೆ ಅವಕಾಶ ನೀಡಿದರೆ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಗೆಲ್ಲುವುದು ಖಚಿತ: ಗುಂಡಪ್ಪ ವಿಶ್ವನಾಥ್

ಆದರೆ ಕಳೆದ 2 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೊಹಮ್ಮದ್ ಶಮಿ, ಜಸ್ ಪ್ರೀತ್ ಬೂಮ್ರಾ ಹಾಗೂ ಇಶಾಂತ್ ಶರ್ಮಾ ಮೂವರೂ ಒಟ್ಟಿಗೆ ಪಂದ್ಯವನ್ನಾಡಲು ಲಭ್ಯರಾಗಿದ್ದಾರೆ, ಹೀಗಾಗಿ ಮೊಹಮ್ಮದ್ ಸಿರಾಜ್‌ಗೆ ಅವಕಾಶ ನೀಡುವುದು ತೀರಾ ಕಷ್ಟದ ಕೆಲಸವಾಗಿದ್ದು ಇಶಾಂತ್ ಶರ್ಮಾರನ್ನು ಆಡುವ ಬಳಗದಿಂದ ಕೈಬಿಡಬಹುದು ಎಂಬ ಸುದ್ದಿ ಹರಿದಾಡುತ್ತಿದ್ದು ಮೊಹಮ್ಮದ್ ಸಿರಾಜ್‌ಗೆ ಅವಕಾಶ ನೀಡುವ ಸಲುವಾಗಿ ಇಶಾಂತ್ ಶರ್ಮಾರನ್ನು ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಿಂದ ಕೈಬಿಡಲಾಗುತ್ತಾ ಎಂಬುದನ್ನು ಕಾದು ನೋಡಬೇಕು.

ಮೊಹಮ್ಮದ್ ಸಿರಾಜ್‌ಗೆ ಅವಕಾಶ ನೀಡುವುದು ಉತ್ತಮ

ಮೊಹಮ್ಮದ್ ಸಿರಾಜ್‌ಗೆ ಅವಕಾಶ ನೀಡುವುದು ಉತ್ತಮ

ಮೊಹಮ್ಮದ್ ಸಿರಾಜ್ ಯುವ ಬೌಲರ್ ಆಗಿದ್ದು ತಂಡದಲ್ಲಿ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದ್ದು, ಇತ್ತೀಚೆಗೆ ಕೆಲ ಮಾಜಿ ಕ್ರಿಕೆಟಿಗರು ಸಿರಾಜ್‌ಗೆ ಅವಕಾಶ ನೀಡುವುದು ಉತ್ತಮ ಎಂಬ ಹೇಳಿಕೆಗಳನ್ನು ನೀಡಿದ್ದರು.

ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧನಾಗು ಎಂದಿದ್ರು ವಿರಾಟ್ ಕೊಹ್ಲಿ

ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧನಾಗು ಎಂದಿದ್ರು ವಿರಾಟ್ ಕೊಹ್ಲಿ

ಈ ಬಾರಿಯ ಐಪಿಎಲ್ ಟೂರ್ನಿಯ ಸಮಯದಲ್ಲಿ ಮೊಹಮ್ಮದ್ ಸಿರಾಜ್ ಬಳಿ ಬಂದ ವಿರಾಟ್ ಕೊಹ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧನಾಗು ಎಂದು ಹೇಳಿದ್ದರಂತೆ. ವಿರಾಟ್ ಕೊಹ್ಲಿ ತನ್ನ ಬಳಿ ಬಂದು ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧನಾಗು ಎಂದು ಶುಭಾಶಯ ಕೋರಿದ್ದರು ಎಂಬ ವಿಷಯವನ್ನು ಇತ್ತೀಚಿಗಷ್ಟೆ ಮೊಹಮ್ಮದ್ ಸಿರಾಜ್ ಅವರೇ ಹೇಳಿಕೊಂಡಿದ್ದರು.

ಮೊಹಮ್ಮದ್ ಸಿರಾಜ್‌ಗೆ ಅವಕಾಶ ನೀಡಲು ವಿರಾಟ್ ಕೊಹ್ಲಿ ಚಿಂತನೆ

ಮೊಹಮ್ಮದ್ ಸಿರಾಜ್‌ಗೆ ಅವಕಾಶ ನೀಡಲು ವಿರಾಟ್ ಕೊಹ್ಲಿ ಚಿಂತನೆ

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಆಡುವುದರ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್‌ಗೆ ಅವಕಾಶ ನೀಡಬೇಕೆಂಬುದು ವಿರಾಟ್ ಕೊಹ್ಲಿಯವರ ಚಿಂತನೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಐಪಿಎಲ್ ಸಮಯದಲ್ಲಿಯೂ ವಿರಾಟ್ ಕೊಹ್ಲಿ ಮೊಹಮ್ಮದ್ ಸಿರಾಜ್‌ಗೆ ಸಾಲು ಸಾಲು ಅವಕಾಶಗಳನ್ನು ನೀಡಿದ್ದರು. ಅದೇ ರೀತಿ ಈ ಪಂದ್ಯದಲ್ಲಿಯೂ ಸಿರಾಜ್‌ಗೆ ವಿರಾಟ್ ಕೊಹ್ಲಿ ಅವಕಾಶ ನೀಡಿದರೆ ಆಶ್ಚರ್ಯವೇನಿಲ್ಲ ಎನ್ನುತ್ತಿದ್ದಾರೆ ಕ್ರಿಕೆಟ್ ಪಂಡಿತರು

Story first published: Tuesday, July 27, 2021, 15:38 [IST]
Other articles published on Jul 27, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+