Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final: ನಾಯಕರ ಅರ್ಧ ಶತಕ: ಒಂದೇ ಪಂದ್ಯದಲ್ಲಿ ವಿಶೇಷ ಮೈಲಿಗಲ್ಲು ಸಾಧಿಸಲಿದ್ದಾರೆ ರೋಹಿತ್, ಕಮ್ಮಿನ್ಸ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿಯಿದ್ದು ಕ್ರಿಕೆಟ್ ಅಭಿಮಾನಿಗಳ ಕಾತುರತೆ ಹೆಚ್ಚಾಗುತ್ತಿದೆ. ಜೂನ್ 7ರಿಂದ ಲಂಡನ್‌ನ ಓವಲ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಟೆಸ್ಟ್ ಮಾದರಿಯ ಚಾಂಪಿಯನ್ ಪಟ್ಟಕ್ಕಾಗಿ ಸೆಣೆಸಾಟ ಆರಂಭಿಸಲಿದೆ. ಈ ಪಂದ್ಯದಲ್ಲಿ ಎರಡು ತಂಡಗಳ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಸ್ಟೀವ್ ಸ್ಮಿತ್ ಮೇಲೆ ಅಭಿಮಾನಿಗಳ ಚಿತ್ತ ನೆಟ್ಟಿದೆ. ಆದರೆ ಈ ಪಂದ್ಯದಲ್ಲಿ ಎರಡು ತಂಡಗಳ ನಾಯಕರಾದ ರೋಹಿತ್ ಶರ್ಮಾ ಹಾಗೂ ಪ್ಯಾಟ್ ಕಮ್ಮಿನ್ಸ್ ಒಂದೇ ಪಂದ್ಯದಲ್ಲಿ ವಿಶೇಷ ಮೈಲಿಗಲ್ಲು ಸಾಧಿಸುವ ಮೂಲಕ ಗಮನಸೆಳೆಯಲಿದ್ದಾರೆ.

ಬುಧವಾರದಿಂದ ಆರಂಭವಾಗುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಟಾಸ್‌ಗಾಗಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ತಮ್ಮ ವೃತ್ತಿ ಜೀವನದ 50ನೇ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ. ಇಬ್ಬರು ಕೂಡ ನಾಯಕರಾಗಿ ಜೊತೆಯಾಗಿ ಈ ಸಾಧನೆ ಮಾಡುತ್ತಿರುವುದು ವಿಶೇಷ.

WTC Final: Indian captain Rohit Sharma and australia skipper Pat Cummins reach unique milestone together

36ರ ಹರೆಯದ ರೋಹಿತ್ ಶರ್ಮಾ ತಮ್ಮ ವೃತ್ತಿ ಜೀವನದ ಆರಂಭದಲ್ಲಿ ಕೇವಲ ವೈಟ್‌ಬಾಲ್‌ನಲ್ಲಿ ಮಾತ್ರವೇ ಕಣಕ್ಕಿಳಿಯುತ್ತಿದ್ದರು. ತಡವಾಗಿ ಟೆಸ್ಟ್ ಮಾದರಿಗೆ ಪದಾರ್ಪಣೆ ಮಾಡಿದ ರೋಹಿತ್ ಶರ್ಮಾ ಸೂದೀರ್ಘ ಮಾದರಿಯ ಕ್ರಿಕೆಟ್‌ನಲ್ಲಿಯೂ ಯಶಸ್ಸು ಸಾಧಿಸಿದರು. ಆಡಿದ 49 ಪಂದ್ಯಗಳಲ್ಲಿ 83 ಇನ್ನಿಂಗ್ಸ್‌ಗಳಲ್ಲಿ ಕಣಕ್ಕಿಳಿದ ರೋಹಿತ್ ಶರ್ಮಾ 45.66ರ ಸರಾಸರಿಯಲ್ಲಿ 9 ಶತಕ ಹಾಗೂ 14 ಅರ್ಧಶತಕಗಳೊಂದಿಗೆ 3379 ರನ್‌ಗಳನ್ನು ಗಳಿಸಿದ್ದಾರೆ.

ಇನ್ನು ಆಸ್ಟ್ರೇಲಿಯಾ ತಂಡದ ವಿರುದ್ಧ ರೋಹಿತ್ ಶರ್ಮಾ ಅವರ ಸಾಧನೆ ಸಾಧಾರಣವಾಗಿದೆ. 20 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ 34.21ರ ಸರಾಸರಿಯಲ್ಲಿ 650 ರನ್‌ಗಳನ್ನು ಗಳಿಸಿದ್ದಾರೆ. ಇನ್ನು ಇತ್ತೀಚೆಗೆ ಅಂತ್ಯವಾದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಡಿದ 6 ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಶರ್ಮಾ 242 ರನ್‌ಗಳನ್ನು ಗಳಿಸಿದ್ದು ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಶತಕವನ್ನು ಕೂಡ ಸಿಡಿಸಿದರು. ಆದರೆ ಇತ್ತೀಚೆಗೆ ಅಂತ್ಯವಾಗಿರುವ ಐಪಿಎಲ್ ಟೂರ್ನಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ನಿರ್ಣಾಯಕ ಪಂದ್ಯದಲ್ಲಿ ಜವಾಬ್ಧಾರಿಯುತ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ.

ಮತ್ತೊಂದೆಡೆ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಕೂಡ 50ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಭಾರತದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿಯೇ ಪ್ಯಾಟ್ ಈ ಮೈಲಿಗಲ್ಲು ದಾಟಬೇಕಾಗಿತ್ತು. ಆದರೆ ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಟೂರ್ನಿಯಲ್ಲಿ ಸಂಪೂರ್ಣವಾಗಿ ಭಾಗವಹಿಸದೆ ತವರಿಗೆ ವಾಪಸಾದ ಕಾರಣ ಅದು ಸಾಧ್ಯವಾಗಿರಲಿಲ್ಲ.

ಆಸ್ಟ್ರೇಲಿಯಾದ ನಾಯಕತ್ವದ ಹೊಣೆಹೊತ್ತಿರುವ ಪ್ಯಾಟ್ ಟೆಸ್ಟ್ ಮಾದರಿಯಲ್ಲಿ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಶ್ರೇಯಾಂಕವನ್ನು ಹೊಂದಿದ್ದು ಭಾರತದ ವಿರುದ್ಧ 12 ಪಂದ್ಯಗಳಲ್ಲಿ 46 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಜೋಶ್ ಹೇಜಲ್‌ವುಡ್ ಅವರಂತಾ ಅನುಭವಿಯ ಅನುಪಸ್ಥಿತಿಯಲ್ಲಿ ಪ್ಯಾಟ್ ಮೇಲೆ ಹೆಚ್ಚಿನ ಜವಾಬ್ಧಾರಿಯಿದೆ.

Story first published: Monday, June 5, 2023, 21:50 [IST]
Other articles published on Jun 5, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+