WTC Final: ಇಂಗ್ಲೆಂಡ್ ನೆಲದಲ್ಲಿ ಯಶಸ್ಸು ಸಾಧಿಸಲು ಟೀಮ್ ಇಂಡಿಯಾ ನಾಯಕನಿಂದ ವಿಶೇಷ ಸಲಹೆ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭಾರತೀಯ ಬ್ಯಾಟರ್‌ಗಳಿಗೆ ಸಲಹೆ ನೀಡಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಭಾರತೀಯ ಬ್ಯಾಟರ್‌ಗಳು ಯಶಸ್ಸು ಸಾಧಿಸಬೇಕಾದರೆ ಅಪಾರವಾದ ಏಕಾಗ್ರತೆಯ ಅಗತ್ಯವಿದೆ ಎಂದಿರುವ ನಾಯಕ ಅದು ಸಾಧ್ಯವಾದಲ್ಲಿ ಮಾತ್ರವೇ ಯಶಸ್ಸು ಪಡೆಯಬಹುದು ಎಂದಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ರೋಹಿತ್ ಓವಲ್ ಕ್ರೀಡಾಂಗಣ ಇಂಗ್ಲೆಂಡ್‌ನ ಅತ್ಯುತ್ತಮ ಬ್ಯಾಟಿಂಗ್ ಪಿಚ್‌ಗಳಲ್ಲಿ ಒಂದು ಎಂದಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಸತತ ಎರಡನೇ ಬಾರಿಗೆ ಫೈನಲ್‌ಗೆ ಪ್ರವೇಶಿಸಿದ್ದು ಈ ಬಾರಿ ಭಾರತ ತಂಡಕ್ಕೆ ಆಸ್ಟ್ರೇಲಿಯಾ ತಂಡ ಸವಾಲೊಡ್ಡಲಿದೆ. ಬುಧವಾರ ಈ ಪಂದ್ಯ ಆರಂಭವಾಗಲಿದ್ದು ಎಲ್ಲರ ಚಿತ್ತ ಈ ನಿರ್ಣಾಯಕ ಪಂದ್ಯದ ಮೇಲೆ ನೆಟ್ಟಿದೆ. ಈ ಹಿನ್ನಲೆಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯೆ ನೀಡಿದರು.

"ಹವಾಮಾನದ್ಲಿ ಸಾಕಷ್ಟು ಬದಲಾವಣೆಗಳು ಇಲ್ಲಿ ಆಗುತ್ತಾ ಇರುತ್ತದೆ. ಹಾಗಾಗಿ ಸುದೀರ್ಘ ಕಾಲ ನಾವು ಏಕಾಗ್ರತೆಯನ್ನು ಕಾಪಾಡಿಕೊಳ್ಳಬೇಕು. ಈ ಮಾಸದರಿಯಲ್ಲಿ ಅದುವೇ ದೊಡ್ಡ ಸವಾಲು. ದೀರ್ಘ ಕಾಲ ಏಕಾಗ್ರತೆಯನ್ನು ಹೊಂದಲು ಸಾಧ್ಯವಾದರೆ ಮಾತ್ರವೇ ಇಲ್ಲಿ ಯಶಸ್ಸು ಸಾಧ್ಯವಿದೆ. ಬೌಲರ್‌ಗಳನ್ನು ಎದುರಿಸುವಾಗ ಏಕಾಗ್ರತೆ ಕಳೆದುಕೊಳ್ಳಬಹುದಾದ ಸಾಕಷ್ಟು ಪ್ರಸಂಗಗಳು ಬರುತ್ತದೆ. ಅದೆಲ್ಲದಕ್ಕೂ ನೀವು ಸಿದ್ಧವಾಗಿರಬೇಕು" ಎಂದಿದ್ದಾರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ.
"ನಿಮ್ಮ ಸಾಮರ್ಥ್ಯ ಏನು ಎಂಬುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಇಲ್ಲಿ ರನ್‌ಗಳಿಸಿರುವ ಮಾದರಿಯನ್ನು ನೋಡಿದರೆ ಸಂತಸವಾಗುತ್ತದೆ. ಇಂಗ್ಲೆಂಡ್‌ನ ಅತ್ಯುತ್ತಮ ಬ್ಯಾಟಿಂಗ್ ಪಿಚ್‌ಗಳಲ್ಲಿ ಓವಲ್ ಕೂಡ ಒಂದು. ಇಲ್ಲಿ ಬ್ಯಾಟರ್‌ಗಳ ಹೊಡೆತಗಳಿಗೆ ಮೌಲ್ಯವಿದೆ. ಇಲ್ಲಿ ಯಶಸ್ಸು ಸಾಧಿಸಬೇಕಾದರೆ ನಿಮಗೆ ಬೇಕಾದ ಸಮಯವನ್ನು ತೆಗೆದುಕೊಳ್ಳಬೇಕು" ಎಂದಿದ್ದಾರೆ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ.
ರೋಹಿತ್ ಶರ್ಮಾ ಟೆಸ್ಟ್ ಮಾದರಿಯಲ್ಲಿ 49 ಪಂದ್ಯಗಳನ್ನು ಆಡಿದ್ದು 45.66ರ ಸರಾಸರಿಯಲ್ಲಿ 3379 ರನ್‌ಗಳನ್ನು ಗಳಿಸಿದ್ದಾರೆ. ಇಂಗ್ಲೆಂಡ್ ನೆಲದಲ್ಲಿಯೂ ರೋಹಿತ್ ಶರ್ಮಾ ಅವರ ದಾಖಲೆ ಉತ್ತಮವಾಗಿದೆ. ಇಂಗ್ಲೀಷ್ ನೆಲದಲ್ಲಿ ರೋಹಿತ್ 42.36ರ ಸರಾಸರಿಯಲ್ಲಿ ಬ್ಯಾಟಿಂಗ್ ನಡೆಸಿದ್ದಾರೆ. ಹಾಗಾಗಿ ಈ ಪ್ರದರ್ಶನವನ್ನು ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿಯೂ ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ.
ಟೀಮ್ ಇಂಡಿಯಾ ಸಂಪೂರ್ಣ ತಂಡ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಯ್‌ದೇವ್ ಉನಾದ್ಕಟ್
ಆಸ್ಟ್ರೇಲಿಯಾ ಸಂಪೂರ್ಣ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications