WTC Final: ಆಸ್ಟ್ರೇಲಿಯಾಗೆ ಮೊದಲ ಆಘಾತ: ಟೂರ್ನಿಯಿಂದ ಹೊರಬಿದ್ದ ಸ್ಟಾರ್ ಕ್ರಿಕೆಟಿಗ!
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದ ಆರಂಭಕ್ಕೆ ಇನ್ನು ಮೂರು ದಿನಗಳು ಮಾತ್ರವೇ ಬಾಕಿಯಿದೆ. ಎರಡು ತಂಡಗಳು ಕೂಡ ಅಂತಿಮ ಹಂತದ ಸಿದ್ಧತೆಗಳನ್ನು ಈ ಹಂತದಲ್ಲಿ ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರನೋರ್ವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ಅಲಭ್ಯ ಎಂಬುದು ಖಚಿತವಾಗಿದೆ.
ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗದ ಬೌಲರ್ ಜೋಶ್ ಹೇಜಲ್‌ವುಡ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ. ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯ ಆಯ್ಕೆಗಾರ ಜಾರ್ಜ್ ಬೈಲಿ ಭಾನುವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪೊಯನ್‌ಶಿಪ್‌ನಂಥಾ ಪ್ರಮುಖ ಹಂತದಲ್ಲಿ ಇದು ಆಸಿಸ್ ಪಡೆಗೆ ದೊಡ್ಡ ಹಿನ್ನಡೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ.

ಇನ್ನು ವಿಚಾರವಾಗಿ ಮಾತನಾಡಿದ ಆಸ್ಟ್ರೇಲಿಯಾದ ಮುಖ್ಯ ಆಯ್ಕೆಗಾರ ಜಾರ್ಜ ಬೈಲಿ ವೇಗಿ ಜೋಶ್ ಹೇಜಲ್‌ವುಡ್ ಚೇತರಿಕೆಯ ಹಂತದಲ್ಲಿದ್ದು ಆಡುವ ಹಂತಕ್ಕೆ ಹತ್ತರದಲ್ಲಿದ್ದಾರೆ. ಆದರೆ ಆಶಸ್ ಸರಣಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ" ಎಂದು ಜೋಶ್ ಹೇಜಲ್‌ವಿಡ್ ಅಲಭ್ಯತೆಯ ಬಗ್ಗೆ ಮಾತನಾಡಿದ್ದಾರೆ.
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ಜೋಶ್ ಹೇಜಲ್‌ವುಡ್ ಅಲಭ್ಯವಾಗಿರುವ ಹಿನ್ಮೆಲೆಯಲ್ಲಿ ಅವರ ಸ್ಥಾನಕ್ಕೆ ಬದಲಿ ಆಟಗಾರನನ್ನು ಆಸ್ಟ್ರೇಲಿಯಾ ಹೆಸರಿಸಿದೆ. ಮೈಕಲ್ ನೇಸರ್ ಆಸ್ಟ್ರೇಲಿಯಾದ ಅಂತಿಮ 15ರ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆದರೆ ಸ್ಕಾಟ್ ಬೋಲಾಂಡ್ ತಮಡದಲ್ಲಿ ಇರುವ ಕಾರಣ ಆಡುವ 11ರ ಬಳಗದಲ್ಲಿ ನೇಸರ್‌ಗೆ ಅವಕಾಶ ದೊರೆಯುವ ಸಾಧ್ಯತೆಯಿಲ್ಲ.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಸ್ಟೀವ್ ಸ್ಮಿತ್ (ಉಪನಾಯಕ) , ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್
ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಯ್‌ದೇವ್ ಉನಾದ್ಕಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications