Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC ಫೈನಲ್: ಭಾರತದ ವಿರುದ್ಧದ ಐತಿಹಾಸಿಕ ಪಂದ್ಯಕ್ಕೆ ಕೇನ್ ವಿಲಿಯಮ್ಸನ್ ಫಿಟ್?

WTC FinaL: Kane Williamson is expected to play for New Zealand against India

ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿದ್ದು ಮಹತ್ವದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಕೇನ್ ವಿಲಿಯಮ್ಸನ್ ಗಾಯದಿಂದ ಉತ್ತಮ ರೀತಿಯಲ್ಲಿ ಚೇತರಿಕೆ ಕಾಣುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯನ್ನು ಕೀವಿಸ್ ಟಾಮ್ ಲ್ಯಾಥಮ್ ವ್ಯಕ್ತಪಡಿಸಿದ್ದಾರೆ.

ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಟಾಮ್ ಲ್ಯಾಥಮ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು ನಾಯಕ ಕೇನ್ ವಿಲಿಯಮ್ಸನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಬಿಜೆ ವಾಟ್ಲಿಂಗ್ ಉತ್ತಮ ರೀತಿಯಲ್ಲಿ ಚೇತರಿಕೆ ಕಾಣುತ್ತಿದ್ದಾರೆ. ಭಾರತದ ವಿರುದ್ಧ ಜೂನ್ 18ರಿಂದ ಹ್ಯಾಂಪ್‌ಶೈರ್‌ಬೌಲ್‌ನಲ್ಲಿ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಒಇಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಆಡುವ ಸಂಭವವಿದೆ ಎಂದು ಲ್ಯಾಥಮ್ ಹೇಳಿದ್ದಾರೆ.

"ಅವರ ಚೇತರಿಕೆ ಉತ್ತಮ ರೀತಿಯಲ್ಲಿದೆ. ಮುಂದಿನ ವಾರದ ವೇಳೆಗೆ ಸಂಪೂರ್ಣ ಸಮರ್ಥರಾಗಲು ಅವರಿಗಿನ್ನೂ ವಿಶ್ರಾಂತಿಯ ಅಗತ್ಯವಿದೆ. ಹೀಗಾಗಿ ಮುಂದಿನ ಎರಡು-ಮೂರು ದಿನಗಳಲ್ಲಿ ಪ್ರೊಟೋಕಾಲ್ ಪ್ರಕಾರ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ನನಗೆ ಖಾತ್ರಿಯಿದೆ. ನಾವು ಸಂಪೂರ್ಣವಾಗಿ ಸಮರ್ಥ ತಂಡವನ್ನು ಹೊಂದುವ ಭರವಸೆಯಿದೆ" ಎಂದು ಲ್ಯಾಥಮ್ ಹೇಳಿಕೆಯನ್ನು ನೀಡಿದ್ದಾರೆ.

ಮಳೆಯಿಂದ ರದ್ದಾದ ಮೊದಲ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಗಾಯಗೊಂಡಿದ್ದ ಕಾರಣ ಎರಡನೇ ಪಂದ್ಯದ ನಾಯಕತ್ವವನ್ನು ಟಾಮ್ ಲ್ಯಾಥಮ್ ವಹಿಸಿಕೊಂಡಿದ್ದರು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಇಂಗ್ಲೆಂಡ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲೆ ಗೆಲುವು ಸಾಧಿಸುವ ಮೂಲಕ ನ್ಯೂಜಿಲೆಂಡ್ 1999ರ ಬಳಿಕ ಇಂಗ್ಲೆಂಡ್ ನೆಲದಲ್ಲಿ ಮೊದಲ ಬಾರಿಗೆ ಈ ಸಾಧನೆಯನ್ನು ಮಾಡಿದೆ. ತಂಡದ ಕೆಲ ಪ್ರಮುಖ ಆಟಗಾರರ ಅಲಭ್ಯತೆಯ ಹೊರತಾಗಿಯೂ ಕಿವೀಸ್ ಪಡೆ ಭರ್ಜರಿ ಗೆಲುವು ಸಾಧಿಸಲು ಸಾಧ್ಯವಾಯಿತು. ಇಂಗ್ಲೆಂಡ್ ನೆಲದಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಸಾಧಿಸಿದ ಗೆಲುವು ಭಾರತದ ಪಾಲಿಗೆ ಎಚ್ಚರಿಕೆಯ ಗಂಟೆಯಾಗಿದೆ.

Story first published: Monday, June 14, 2021, 16:46 [IST]
Other articles published on Jun 14, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+