Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final: ಭಾರತಕ್ಕೆ ಕೊಹ್ಲಿ, ರೋಹಿತ್ ಆಟವೇ ನಿರ್ಣಾಯಕ ಎಂದ ಮೈಕಲ್ ಹಸ್ಸಿ

ವಿಶ್ವ ಟೆಸ್ಟ್ ಚಾಂಪಿಯಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ. ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರು ಈಗಾಗಲೇ ಇಂಗ್ಲೆಂಡ್‌ಗೆ ಪ್ರಯಾಣಿಸಿದ್ದು ಪ್ರತಿಷ್ಠಿತ ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮೈಕಲ್ ಹಸ್ಸಿ ಪ್ರತಿಕ್ರಿಯೆ ನೀಡಿದ್ದು ಟೀಮ್ ಇಂಡಿಯಾಗೆ ವಿಶ್ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಅನುಭವ ಬಹಳ ದೊಡ್ಡ ಪಾತ್ರವಹಿಸಲಿದೆ ಎಂದಿದ್ದಾರೆ.

ಇಂಗ್ಲೀಶ್ ವಾತಾವರಣದಲ್ಲಿ ಈ ಹಿಂದೆ ಆಡಿದ ಅನುಭವವನ್ನು ಕೊಹ್ಲಿ ಹಾಗೂ ರೋಹಿತ್ ಶರ್ಮಾ ಬಳಸಿಕೊಳ್ಳಲಿದ್ದಾರೆ ಎಂದಿರುವ ಮೈಕಲ್ ಹಸ್ಸಿ ಈ ಮೂಲಕ ಭಾರತ ತಂಡಕ್ಕೆ ಬಲವಾಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಜೂನ್ 7ರಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಆರಂಭವಾಗಲಿದ್ದು 11ರಂದು ಅಂತ್ಯವಾಗಲಿದೆ. ಲಂಡನ್‌ನ ಓವರ್ ಕ್ರೀಡಾಂಗಣ ಈ ಪ್ರತಿಷ್ಠಿತ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ.

WTC Final: Michael Hussey said Virat Kohli and Rohit Sharma performance going to be important for India

ಐಸಿಸಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೈಕಲ್ ಹಸ್ಸು ಮೊದಲಿಗೆ ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿದ್ದಾರೆ. "ಈ ಹಿಂದಿನ ವಿರಾಟ್ ಕೊಹ್ಲಿಯನ್ನು ನೋಡಲು ಬಹಳ ಕಠಿಣವಾಗಿತ್ತು. ಖಂಡಿತವಾಗಿಯೂ ಅವರು ಈಗ ಉತ್ತಮ ಲಯಕ್ಕೆ ಮರಳಿದ್ದು ಎಲ್ಲಾ ಮಾದರಿಯಲ್ಲಿಯೂ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಪ್ರದರ್ಶನ ಭಾರತ ತಂಡಕ್ಕೆ ಬಹಳ ಮುಖ್ಯವಾಗಲಿದೆ" ಎಂದಿದ್ದಾರೆ ಮೈಕಲ್ ಹಸ್ಸಿ.

"ಈ ಪಂದ್ಯ ಇಂಗ್ಲೆಂಡ್‌ನಲ್ಲಿ ನಡೆಯಲಿದೆ. ಇತ್ತೀಚೆಗೆ ಭಾರತದಲ್ಲಿ ನಡೆದ ಟೆಸ್ಟ್ ಸರಣಿಗಿಂತ ಇಂಗ್ಲೆಂಡ್ ವಾತಾವರಣ ಭಿನ್ನವಾಗಿರಲಿದೆ. ನನ್ನ ಪ್ರಕಾರ ವೇಗದ ಬೌಲರ್‌ಗಳು ಇಲ್ಲಿ ಬಹಳ ನಿರ್ಣಾಯಕ ಪಾತ್ರವಹಿಸಲಿದ್ದಾರೆ. ಪ್ಯಾಟ್ ಕಮ್ಮನ್ಸ್ ಹಾಗೂ ಜೋಶ್ ಹೇಜಲ್‌ವುಡ್ ಸಮರ್ಥವಾಗಿದ್ದರೆ ಅದು ಆಸ್ಟ್ರೇಲಿಯಾ ಪಾಲಿಗೆ ಖುಷಿಯ ಸುದ್ದಿಯಾಗಿರಲಿದೆ" ಎಂದಿದ್ದಾರೆ ಮೈಕಲ್ ಹಸ್ಸಿ.

ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಕೆಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಯ್‌ದೇವ್ ಉನಾದ್ಕಟ್, ಇಶಾನ್ ಕಿಶನ್(ವಿಕೆಟ್ ಕೀಪರ್)

ಆಸ್ಟ್ರೇಲಿಯಾ ಸ್ಕ್ವಾಡ್: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೊಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಮಿಚ್ ಮಾರ್ಷ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾ, ಸ್ಟೀವ್ ಸ್ಮಿತ್, ಸ್ಟೀವ್ ಸ್ಮಿತ್ , ಡೇವಿಡ್ ವಾರ್ನರ್.

Story first published: Sunday, May 28, 2023, 16:49 [IST]
Other articles published on May 28, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+