ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

WTC Final: ಭಾರತ ಗೆದ್ದರೆ ದಾಖಲೆ; ಸೋತರೆ 18 ವರ್ಷಗಳ ಕೆಟ್ಟ ಹೆಸರು ಮತ್ತೆ ಮುಂದುವರಿಕೆ: ಮೊಹಮ್ಮದ್ ಕೈಫ್

WTC Final: Mohammad Kaif hopes Kohlis men end Indias losing streak to New Zealand in ICC events

ಸದ್ಯ ವಿಶ್ವದಾದ್ಯಂತ ಇರುವ ಕ್ರಿಕೆಟ್ ಅಭಿಮಾನಿಗಳ ಚಿತ್ತ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದತ್ತ ನೆಟ್ಟಿದೆ. ಜೂನ್ 18-22ರವರೆಗೆ ನಡೆಯಲಿರುವ ಈ ಪ್ರತಿಷ್ಟಿತ ಪಂದ್ಯದ ಕುರಿತು ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಪಂಡಿತರು ಹಾಗೂ ಕ್ರೀಡಾಭಿಮಾನಿಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‌ನಲ್ಲಿ ಭಾರತದ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಇರ್ಫಾನ್ ಪಠಾಣ್!

ಜೂನ್ 18ರಿಂದ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ಎರಡೂ ತಂಡಗಳಿಗೂ ಅತೀ ಮುಖ್ಯವಾಗಿದ್ದು ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲು ಕಾತುರದಿಂದ ಕಾಯುತ್ತಿವೆ. ಈ ನಡುವೆ ಈ ಪಂದ್ಯದ ಕುರಿತು ಇದೀಗ ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಮಾತನಾಡಿದ್ದು 18 ವರ್ಷಗಳಿಂದ ಕಾಡುತ್ತಿರುವ ಕೆಟ್ಟ ಹೆಸರನ್ನು ಕಿತ್ತು ಹಾಕಲು ಇದು ಸರಿಯಾದ ಸಮಯ ಎಂದಿದ್ದಾರೆ. ಹೌದು ಐಸಿಸಿ ಪಂದ್ಯಗಳಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ ತಂಡ ಕೊನೆಯದಾಗಿ ಮಣಿಸಿರುವುದು 2003ರ ವಿಶ್ವಕಪ್ ಟೂರ್ನಿಯಲ್ಲಿ, ಇದಾದ ಬಳಿಕ ಯಾವುದೇ ಐಸಿಸಿ ಪಂದ್ಯಗಳಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿಯೇ ಇಲ್ಲ.

ನ್ಯೂಜಿಲೆಂಡ್‌ನ ಈ ಬೌಲರ್‌ಗೆ ಕೊಹ್ಲಿ ಹೆದರುತ್ತಾರೆ; ರಹಸ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್!

'ನ್ಯೂಜಿಲೆಂಡ್ ತಂಡವನ್ನು ಐಸಿಸಿ ಟೂರ್ನಿಗಳ ಪಂದ್ಯಗಳಲ್ಲಿ ಕಡೆಯದಾಗಿ ಸೋಲಿಸಿದ ಭಾರತ ತಂಡ ನಮ್ಮದೇ. 2003ರ ವಿಶ್ವಕಪ್ ಟೂರ್ನಿಯಲ್ಲಿ ನಾವು ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ್ದೆವು. ಇದಾದ ಬಳಿಕ ನ್ಯೂಜಿಲೆಂಡ್ ತಂಡವನ್ನು ಟೀಮ್ ಇಂಡಿಯಾ ಯಾವುದೇ ಐಸಿಸಿ ಟ್ರೋಫಿ ಪಂದ್ಯಗಳಲ್ಲಿ ಸೋಲಿಸಿಲ್ಲ. ಮುಂಬರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಪ್ರಸ್ತುತ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸುವುದರ ಮೂಲಕ 18 ವರ್ಷಗಳ ಈ ಕೆಟ್ಟ ದಾಖಲೆಯನ್ನು ಅಳಿಸಿ ಹಾಕಲಿದೆ ಎಂಬ ನಂಬಿಕೆ ನನಗಿದೆ' ಎಂದು ಮೊಹಮ್ಮದ್ ಕೈಫ್ ಹೇಳಿಕೊಂಡಿದ್ದಾರೆ.

Story first published: Wednesday, June 9, 2021, 7:02 [IST]
Other articles published on Jun 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X