ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿರಾಟ್ ಕೊಹ್ಲಿ ವಿಫಲರಾದಾಗ ಈತ ತಂಡವನ್ನು ಕಾಪಾಡುತ್ತಾನೆ ಎಂದ ಮಾಜಿ ಕ್ರಿಕೆಟಿಗ ಎಂಎಸ್‌ಕೆ ಪ್ರಸಾದ್

WTC Final: MSK Prasad lauds Ajinkya Rahane’s contribution in the Indian team

ಸದ್ಯ ವಿಶ್ವದಾದ್ಯಂತ ಇರುವ ಕ್ರಿಕೆಟ್ ಅಭಿಮಾನಿಗಳ ಚಿತ್ತ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದತ್ತ ನೆಟ್ಟಿದೆ. ಜೂನ್ 18-22ರವರೆಗೆ ನಡೆಯಲಿರುವ ಈ ಪ್ರತಿಷ್ಟಿತ ಪಂದ್ಯದ ಕುರಿತು ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಪಂಡಿತರು ಹಾಗೂ ಕ್ರೀಡಾಭಿಮಾನಿಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ನ್ಯೂಜಿಲೆಂಡ್‌ನ ಈ ಬೌಲರ್‌ಗೆ ಕೊಹ್ಲಿ ಹೆದರುತ್ತಾರೆ; ರಹಸ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್!

ಇದೀಗ ಮಾಜಿ ಕ್ರಿಕೆಟಿಗ ಎಂಎಸ್‌ಕೆ ಪ್ರಸಾದ್ ಕೂಡ ಟೀಮ್ ಇಂಡಿಯಾ ಕುರಿತು ಮಾತನಾಡಿದ್ದು ತಂಡದ ನಾಯಕ ವಿರಾಟ್ ಕೊಹ್ಲಿ ದೊಡ್ಡ ಇನ್ನಿಂಗ್ಸ್ ಕಟ್ಟುವಲ್ಲಿ ವಿಫಲರಾದಾಗ ತಂಡಕ್ಕೆ ಆಸರೆಯಾಗುವ ಆಟಗಾರನನ್ನು ಹೆಸರಿಸಿದ್ದಾರೆ. ಹೌದು ವಿರಾಟ್ ಕೊಹ್ಲಿ ವಿಫಲರಾದಾಗಲೆಲ್ಲಾ ಅಜಿಂಕ್ಯ ರಹಾನೆ ಉತ್ತಮ ಆಟವನ್ನು ಆಡಿ ಭಾರತ ತಂಡವನ್ನು ಕಾಪಾಡುತ್ತಾರೆ ಎಂದು ಎಂಎಸ್‌ಕೆ ಪ್ರಸಾದ್ ಹೇಳಿಕೆ ನೀಡಿದ್ದಾರೆ.

ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಭಾರತ ಗೆದ್ದು ಬೀಗಿದ್ದ ಟೆಸ್ಟ್ ಸರಣಿಯೇ ಅತ್ಯುತ್ತಮ ಎಂದು ಘೋಷಿಸಿದ ಐಸಿಸಿ

'ತನ್ನ ವೃತ್ತಿ ಜೀವನದಲ್ಲಿ ಹಲವಾರು ಏಳುಬೀಳುಗಳನ್ನು ಕಂಡು ಬಂದಿರುವ ಅಜಿಂಕ್ಯ ರಹಾನೆ ಸದ್ಯ ಭಾರತ ತಂಡದ ಪ್ರಮುಖ ಆಟಗಾರನಾಗಿ ನಿಂತಿದ್ದಾರೆ. ಭಾರತ ತಂಡ ಸಂಕಷ್ಟಕ್ಕೆ ಸಿಲುಕಿಕೊಂಡಾಗಲೆಲ್ಲ ಅಜಿಂಕ್ಯ ರಹಾನೆ ಉತ್ತಮ ಆಟವನ್ನು ಆಡುತ್ತಾರೆ. ತಂಡದ ನಾಯಕ ವಿರಾಟ್ ಕೊಹ್ಲಿ ದೊಡ್ಡ ಇನ್ನಿಂಗ್ಸ್ ಕಟ್ಟುವಲ್ಲಿ ವಿಫಲರಾದಾಗಲೆಲ್ಲಾ ಅಜಿಂಕ್ಯ ರಹಾನೆ ಉತ್ತಮ ಆಟವಾಡಿ ತಂಡದ ರಕ್ಷಣೆಗೆ ನಿಲ್ಲುತ್ತಾರೆ. ಕಳೆದ ಬಾರಿಯ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ತಂಡದ ಪ್ರಮುಖ ಆಟಗಾರರಿಲ್ಲದೇ ಅಜಿಂಕ್ಯ ರಹಾನೆ ನಾಯಕನಾಗಿ ಗೆಲ್ಲಿಸಿಕೊಟ್ಟಿದ್ದನ್ನು ಎಂದಿಗೂ ಮರೆಯಲಾಗುವುದಿಲ್ಲ' ಎಂದು ಎಂಎಸ್‌ಕೆ ಪ್ರಸಾದ್ ಅಜಿಂಕ್ಯ ರಹಾನೆಯನ್ನು ಕೊಂಡಾಡಿದ್ದಾರೆ.

Story first published: Tuesday, July 27, 2021, 15:42 [IST]
Other articles published on Jul 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X