ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

WTC final: ದಾಖಲೆ ಸನಿಹದಲ್ಲಿದ್ದಾರೆ ಭಾರತದ ಸ್ಪಿನ್ನರ್ ಆರ್‌ ಅಶ್ವಿನ್

WTC final: R Ashwin on the cusp of ending as top wicket taker

ನವದೆಹಲಿ: ಟೀಮ್ ಇಂಡಿಯಾದ ಪ್ರಮುಖ ಸ್ಪಿನ್ನರ್ ಆರ್‌ ಅಶ್ವಿನ್ ವಿಶೇಷ ದಾಖಲೆ ಸನಿಹದಲ್ಲಿದ್ದಾರೆ. ಐಸಿಸಿ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಅಶ್ವಿನ್‌ಗೆ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಧಿಕ ವಿಕೆಟ್ ಸರದಾರರಾಗಿ ಮಿಂಚಲು ಅವಕಾಶವಿದೆ. ನ್ಯೂಜಿಲೆಂಡ್-ಭಾರತ ನಡುವಿನ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಜೂನ್ 18ರಿಂದ 22ರ ವರೆಗೆ ಇಂಗ್ಲೆಂಡ್‌ನಲ್ಲಿ ನಡೆಯಲಿದೆ.

ಭಾರತ-ನ್ಯೂಜಿಲೆಂಡ್ ನಡುವಿನ WTC final ದುಬಾರಿ ಟಿಕೆಟ್ ಬೆಲೆಯೆಷ್ಟು ಗೊತ್ತಾ?!ಭಾರತ-ನ್ಯೂಜಿಲೆಂಡ್ ನಡುವಿನ WTC final ದುಬಾರಿ ಟಿಕೆಟ್ ಬೆಲೆಯೆಷ್ಟು ಗೊತ್ತಾ?!

ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ನಲ್ಲಿ ಅತೀ ಹೆಚ್ಚು ವಿಕೆಟ್ ದಾಖಲೆ ಪಟ್ಟಿಯಲ್ಲಿ ಸದ್ಯ ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ ಇದ್ದಾರೆ. ಟೆಸ್ಟ್ ಚಾಂಪಿಯನ್‌ಶಿಪ್‌ನ 14 ಪಂದ್ಯಗಳಲ್ಲಿ ಕಮಿನ್ಸ್ 70 ವಿಕೆಟ್ ಪಡೆದಿದ್ದರೆ, ಅಶ್ವಿನ್ 13 ಪಂದ್ಯಗಳಲ್ಲಿ 67 ವಿಕೆಟ್ ಪಡೆದಿದ್ದಾರೆ. ಇನ್ನು 4 ವಿಕೆಟ್‌ ಪಡೆದರೆ ಅತ್ಯಧಿಕ ವಿಕೆಟ್ ದಾಖಲೆ ಅಶ್ವಿನ್ ಹೆಸರಿಗೆ ಸೇರಲಿದೆ.

ಆದರೆ ಅಶ್ವಿನ್‌ಗೆ ಈ ಅವಕಾಶ ಸಿಗೋದು ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಪ್ಲೇಯಿಂಗ್ XIನಲ್ಲಿ ಅವಕಾಶ ದೊರೆತಾಗ ಮಾತ್ರ. ಹೀಗಾಗಿ ಎಲ್ಲರ ಚಿತ್ತ ಅಶ್ವಿನ್ ಮೇಲಿದೆ. ಸದ್ಯ ರೇಸ್‌ನಲ್ಲಿ ನ್ಯೂಜಿಲೆಂಡ್‌ನ ಟಿಮ್ ಸೌಥೀ ಕೂಡ ಇದ್ದಾರೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜೋ ರೂಟ್ ಹೆಸರಿನಲ್ಲಿ ಮಾತ್ರ ಇದೆ ಈ ವಿಶೇಷ ದಾಖಲೆವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜೋ ರೂಟ್ ಹೆಸರಿನಲ್ಲಿ ಮಾತ್ರ ಇದೆ ಈ ವಿಶೇಷ ದಾಖಲೆ

ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಸದ್ಯ ಸ್ಪರ್ಧೆಯಲ್ಲಿರುವ ಒಬ್ಬ ಬೌಲರ್ ಎಂದರೆ ಅದು ಕಿವೀಸ್ ವೇಗಿ ಟಿಮ್ ಸೌಥೀ. ಸೌಥೀ 10 ಪಂದ್ಯಗಳಲ್ಲಿ 51 ವಿಕೆಟ್ ಪಡೆದಿದ್ದಾರೆ. ಹೀಗಾಗಿ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಧಿಕ ವಿಕೆಟ್‌ನಲ್ಲಿ ಟಾಪರ್ ಅನ್ನಿಸಿಕೊಳ್ಳಬೇಕಾದರೆ ಸೌಥೀ ಇನ್ನು 20 ವಿಕೆಟ್ ಪಡೆಯಬೇಕಾಗುತ್ತದೆ. ಆದರೆ ಇದು ಸಾಧ್ಯವಾಗುವ ಮಾತಲ್ಲ.

Story first published: Thursday, May 27, 2021, 20:53 [IST]
Other articles published on May 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X