WTC Final: ಭಾರತಕ್ಕೆ ಈತನ ಅನುಭವ ನಿರ್ಣಾಯಕ ಎಂದ ಸಚಿನ್ ತೆಂಡೂಲ್ಕರ್
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗಾಗಿ ಸೆಣೆಸಾಟ ನಡೆಸಲಿದೆ. ಈ ಪಂದ್ಯದ ಹಿನ್ನೆಲೆಯಲ್ಲಿ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಇಂಗ್ಲೆಂಡ್‌ನಲ್ಲಿ ಕೌಂಟಿ ಚಾಂಫಿಯನ್‌ಶಿಪ್‌ನಲ್ಲಿ ಭಾಗಿಯಾಗಿದ್ದ ಚೇತೇಶ್ವರ್ ಪೂಜಾರ ಅವರ ಅನುಭವ ಈ ಪಂದ್ಯದಲ್ಲಿ ಮಹತ್ವದ ಪಡೆದುಕೊಳ್ಳಲಿದೆ ಎಂದಿದ್ದಾರೆ.
ಭಾರತದ ಚೇತೇಶ್ವರ್ ಪೂಜಾರ ಹಾಗೂ ಆಸ್ಟ್ರೇಲಿಯಾ ತಂಡದಲ್ಲಿ ಮಾರ್ನಸ್ ಲ್ಯಾಬುಶೈನ್ ಕೌಂಟಿ ಟೂರ್ನಿಯಲ್ಲಿ ಆಡಿದ್ದರು. ಈ ಹಿನ್ನೆಲೆಯಲ್ಲಿ ಮಾತನಾಡಿದ ಸಚಿನ್ ತೆಂಡೂಲ್ಕರ್ ಎರಡು ತಂಡಗಳಿಗೂ ಈ ಇಬ್ಬರು ಆಟಗಾರರ ಅನುಭವ ಬಹಳ ಮುಖ್ಯವಾದ ಆಸ್ತಿಯಾಗಲಿದೆ. ಈ ಇಬ್ಬರ ಅನುಭವವನ್ನು ಎರಡು ತಂಡಗಳು ಬಳಸಿಕೊಳ್ಳುವುದು ಮುಖ್ಯ ಎಂದಿದ್ದಾರೆ ಸಚಿನ್ ತೆಂಡೂಲ್ಕರ್.

"ಖಂಡಿತವಾಗಿಯೂ ಕೌಂಟಿ ಕ್ರಿಕೆಟ್‌ನಲ್ಲಿ ಆಡುವುದು ಬಹಳ ದೊಡ್ಡ ಅನುಭವ ನೀಡುತ್ತದೆ. ಚೇತೇಶ್ವರ್ ಪೂಜಾರ ಹಾಗೂ ಮಾರ್ನಸ್ ಲ್ಯಾಬುಶೈನ್ ಇಬ್ಬರು ಕೂಡ ಕೌಂಟಿಯಲ್ಲಿ ಅದ್ಭುತವಾಗಿ ಪ್ರದರ್ಶನ ನೀಡಿದ್ದಾರೆ. ಸ್ಟೀವ್ ಸ್ಮಿತ್ ಆಡಿದ್ದರಾದರೂ ಅವರಿಂದ ಇವರಿಬ್ಬರ ರೀತಿಯ ಪ್ರದರ್ಶನ ಬರಲಿಲ್ಲ. ಆದರೆ ಪಂದ್ಯದ ಅಭ್ಯಾಸ ದೊರೆತರೆ ಅದು ಬಹಳ ಲಾಭವಾಗಲಿದೆ. ಯಾಕೆಂದರೆ ವಾತಾವರಣ ಬಹಳ ವಿಭಿನ್ನವಾಗಿರುತ್ತದೆ" ಎಂದಿದ್ದಾರೆ ಸಚಿನ್ ತೆಂಡೂಲ್ಕರ್.
ಇನ್ನು ಟೀಮ್ ಇಂಡಿಯಾದ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಿದ ಬಳಿಕ ಈ ಮಹತ್ವದ ಊರ್ನಿಗೆ ಬರುತ್ತಿದ್ದರೆ ಆಸ್ಟ್ರೇಲಿಯಾದ ಕೆಲವೇ ಆಟಗಾರರನ್ನು ಹೊರತುಪಡಿಸಿ ಉಳಿದ ಆಟಗಾರರು ವಿಶ್ರಾಂತಿಯಲ್ಲಿದ್ದು ಈ ಟೂರ್ನಿಗೆ ಸಿದ್ಧತೆ ನಡೆಸುತ್ತಿದ್ದರು. ಯಾವ ತಂಡ ಕೂಡ ಕೌಂಟಿ ತಮಡಗಳ ಜೊತೆಗೆ ಅಭ್ಯಾಸದಲ್ಲಿ ತೊಡಗಿಸಿಕೊಂಡಿಲ್ಲ. ಆದರೆ ಇಂಟ್ರಾ ಸ್ಕ್ವಾಡ್ ಅಭ್ಯಾಸ ಪಂದ್ಯಗಳನ್ನು ಎರಡು ತಂಡಗಳು ಕೂಡ ಆಡಿವೆ.
ಇನ್ನು ಇದೇ ಸಂದರ್ಭದಲ್ಲಿ ಓವಲ್‌ನಲ್ಲಿ ಈ ಪಂದ್ಯ ನಡೆಯುತ್ತಿರುವ ಕಾರಣ ಸ್ಪಿನ್ ಸ್ನೇಹಿ ಪಿಚ್ ಹೊಂದಿರುವ ಇಲ್ಲಿ ಭಾರತ ತಂಡ ಆತ್ಮವಿಶ್ವಾಸದಿಂದ ಕಣಕ್ಕಿಳಿಯಬಹುದು ಎಂದಿದ್ದಾರೆ. "ಓವಲ್‌ನಲ್ಲಿ ಆಡುತ್ತಿಒರುವುದಕ್ಕೆ ಭಾರತ ತಂಡ ಸಹಲವಾಗಿಯೇ ಸಂತಸಗೊಂಡಿರುತ್ತದೆ. ಈ ಪಿಚ್ ಸ್ಪಿನ್ನರ್‌ಗಳಿಗೆ ನೆರವು ನೀಡುತ್ತದೆ. ಹಾಗಾಗಿ ಇಲ್ಲಿ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರಲಿದೆ" ಎಂದಿದ್ದಾರೆ ಸಚಿನ್ ತೆಂಡೂಲ್ಕರ್.
ಟೀಮ್ ಇಂಡಿಯಾ ಸಂಪೂರ್ಣ ತಂಡ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಯ್‌ದೇವ್ ಉನಾದ್ಕಟ್
ಆಸ್ಟ್ರೇಲಿಯಾ ಸಂಪೂರ್ಣ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications