WTC 2023 Final: ಪೂಜಾರ ಪಾತ್ರ ಟೀಮ್ ಇಡಿಯಾಗೆ ನಿರ್ಣಾಯಕ: ಕಾರಣ ವಿವರಿಸಿದ ಗವಾಸ್ಕರ್
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವನ್ನಾಡಲು ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಸಿದ್ಧತೆ ನಡೆಸುತ್ತಿವೆ. ಎರಡು ತಂಡಗಳ ಬಹುತೇಕ ಆಟಗಾರರು ಈಗಾಗಲೇ ಇಂಗ್ಲೆಂಡ್‌ಗೆ ತೆರಳಿದ್ದು ಈ ಮಹತ್ವದ ಪಂದ್ಯಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಟೀಮ್ ಇಂಡಿಯಾದ ಬಹುತೇಕ ಆಟಗಾರರು ಈ ಸರಣಿಗೂ ಮುನ್ನ ಐಪಿಎಲ್ ಟೂರ್ನಿಯಲ್ಲಿ ಬ್ಯುಸಿಯಾಗಿದ್ದರೆ ಚೇತೇಶ್ವರ್ ಪೂಜಾರ ಇಂಗ್ಲೆಂಡ್‌ನಲ್ಲಿ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಆಡುತ್ತಿದ್ದರು.
ಈ ಹಿನ್ನೆಲೆಯಲ್ಲಿ ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕಾಮೆಂಟೇಟರ್ ಸುನಿಲ್ ಗವಾಸ್ಕರ್ ಪ್ರತಿಕ್ರಿಯೆ ನೀಡಿದ್ದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ಚೇತೇಶ್ವರ್ ಪೂಜಾರ ಪಾತ್ರ ಅತ್ಯಂತ ಮಹತ್ವದ್ದು ಎಂದಿದ್ದಾರೆ. ಸುದೀರ್ಘ ಕಾಲ ಇಂಗ್ಲೆಂಡ್‌ನಲ್ಲಿದ್ದು ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದ ಕಾರಣ ಪೂಜಾರ ಅವರ ಅನುಭವ ಟೀಮ್ ಇಂಡಿಯಾದ ಬ್ಯಾಟಿಂಗ್ ಹಾಗೂ ನಾಯಕತ್ವಕ್ಕೆ ಬಹಳ ದೊಡ್ಡ ಕೊಡುಗೆ ಪಾತ್ರವಹಿಸಲಿದೆ ಎಂದಿದ್ದಾರೆ ಸುನಿಲ್ ಗವಾಸ್ಕರ್.

ಈ ಬಾರಿಯ ಕೌಂಟಿ ಋತುವಿನಲ್ಲಿ ಚೇತೇಶ್ವರ್ ಪೂಜಾರ ಸಸೆಕ್ಸ್ ತಂಡದ ಪರವಾಗಿ ಆಡಿದ್ದು ಮಾತ್ರವಲ್ಲದೆ ತಂಡವನ್ನು ನಾಯಕನಾಗಿ ಮುನ್ನಡೆಸುವ ಜವಾಬ್ಧಾರಿ ವಹಿಸಿಕೊಂಡಿದ್ದರು. ಹೀಗಾಗಿ ಇಂಗ್ಲೆಂಡ್ ವಾತಾವರಣದಲ್ಲಿ ಟೆಸ್ಟ ಆಡಿ ಅಲ್ಲಿನ ಪರಿಸ್ಥಿರಿಗೆ ಪೂಜಾರ ಚೆನ್ನಾಗಿ ಒಗ್ಗಿಕೊಂಡಿರುವುದರಲ್ಲಿ ಅನುಮಾನವಿಲ್ಲ. ಪೂಜಾರ ಅವರ ತಂಡದಲ್ಲಿ ಆಸ್ಟ್ರೇಲಿಯಾದ ಆಟಗಾರ ಸ್ಟೀವ್ ಸ್ಮಿತ್ ಕೂಡ ಕಣಕ್ಕಿಳಿದಿದ್ದರು ಎಂಬುದು ಗಮನಾರ್ಹ.
"ಚೇತೇಶ್ವರ್ ಪೂಜಾರ ಇಂಗ್ಲೆಂಡ್‌ನಲ್ಲಿದ್ದು ಟೆಸ್ಟ್ ಮಾದರಿಯಲ್ಲಿ ಆಡಿದ್ದಾರೆ ಎಂದರೆ ಅವರಲ್ಲಿ ಓವರ್ ಕ್ರೀಡಾಂಗಣದ ಪಿಚ್‌ನ ಅರಿವು ಕೂಡ ಚೆನ್ನಾಗಿಯೇ ಇರುತ್ತದೆ. ಅವರು ಓವಲ್ ಅಂಗಳದಲ್ಲಿ ಆಡದಿದ್ದರೂ ಸಸೆಕ್ಸ್ ಲಂಡನ್‌ನಿಮದ ಬಹಳ ದೂರವೇನೂ ಇಲ್ಲ. ಹೀಗಾಗಿ ಓವಲ್ ಮೈದಾನದಲ್ಲಿ ಏನಾಗುತ್ತಿದೆ ಎಂಬುದರ ಮೇಲೆ ಅವರು ಕಣ್ಣಿಟ್ಟಿರುತ್ತಾರೆ. ಬ್ಯಾಟಿಂಗ್ ವಿಭಾಗಕ್ಕೆ ಸಂಬಂಧಿಸಿದಂತೆ ಅಥವಾ ನಾಯಕತ್ವಕ್ಕೆ ಸಂಬಂಧಿಸಿದಂತೆ ಅವರ ಸಲಹೆಗಳು ಮಹತ್ವದ್ದಾಗಿರುತ್ತದೆ" ಎಂದಿದ್ದಾರೆ ಸುನಿಲ್ ಗವಾಸ್ಕರ್.
ಮುಂದುವರಿದು ಗವಾಸ್ಕರ್, "ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೂ ಮುನ್ನ ಪೂಜಾರ ಅವರು ಇಲ್ಲಿ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ ಎಂಬುದನ್ನು ಮರೆಯಬಾರದು. ಅಲ್ಲದೆ ಅವರ ತಂಡದಲ್ಲಿ ಸ್ಟೀವ್ ಸ್ಮಿತ್ ಅವರಂತಾ ಆಟಗಾರ ಕೂಡ ಇದ್ದ ಕಾರಣ ಅವರನ್ನು ಔಟ್ ಮಾಡಲು ಕೆಲ ಯೋಜನೆಗಳನ್ನು ಹೊಂದಿರಬಹುದು" ಎಂದಿದ್ದಾರೆ ಮಾಜಿ ಕ್ರಿಕೆಟಿಗ.
ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಕೆಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಯ್‌ದೇವ್ ಉನಾದ್ಕಟ್, ಇಶಾನ್ ಕಿಶನ್(ವಿಕೆಟ್ ಕೀಪರ್)
ಆಸ್ಟ್ರೇಲಿಯಾ ಸ್ಕ್ವಾಡ್: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೊಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾ, ಸ್ಟೀವ್ ಸ್ಮಿತ್, ಸ್ಟೀವ್ ಸ್ಮಿತ್ , ಡೇವಿಡ್ ವಾರ್ನರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications