WTC Final, Ind vs Aus: 3ನೇ ದಿನದಾಟ, ಸಂಕಷ್ಟದಲ್ಲಿ ಟೀಮ್ ಇಂಡಿಯಾ: Live score
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲಿಂಗ್‌ನ ಬಳಿಕ ಬ್ಯಾಟಿಂಗ್‌ನಲ್ಲಿಯೂ ಭಾರೀ ಹಿನ್ನಡೆ ಅನುಭವಿಸಿದೆ, ಎರಡನೇ ದಿನದಾಟದ ಅಂತ್ಯದಲ್ಲಿ ಟೀಮ್ ಇಂಡಿಯಾ ಐದು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಮೂರನೇ ದಿನದಾಟದ ಆರಂಭಿಕ ಹಂತದಲ್ಲಿಯೇ ಮತ್ತೊಂದು ವಿಎಕಟ್ ಕಳೆದುಕೊಂಡ ಕಾರಣ ಭಾರತ 6 ವಿಕೆಟ್‌ಗಳನ್ನು ಕಳೆದುಕೊಂಡಂತಾಗಿದೆ.
ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಟ್ರೆವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಶತಕದ ನೆರವಿನಿಂದಾಗಿ 469 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು. ಅದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಬ್ಯಾಟಿಂಗ್‌ನಲ್ಲಿ ಆರಂಭದಲ್ಲಿ ಭರವಸೆ ಮೂಡಿಸಿದರೂ ನಂತರ ಅನುಭವಿಸಿದ್ದು ದೊಡ್ಡ ನಿರಾಸೆ. ನಾಯಕ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಅಲ್ಪ ಮೊತ್ತಕ್ಕೆ ವಿಕೆಟ್ ಕಳೆದುಕೊಂಡು ಆರಂಭದಲ್ಲಿಯೇ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದರು. ಚೇತೇಶ್ವರ್ ಪೂಜಾರ ಹಾಗೂ ವಿರಾಟ್ ಕೊಹ್ಲಿ ಕೂಡ ಹೆಚ್ಚು ಕಾಲ ಕ್ರೀಸ್‌ನಲ್ಲಿ ನಿಲ್ಲಲಿಲ್ಲ.

ಇನ್ನು ನಂತರ ಜೊತೆಯಾದ ಅಜಿಂಕ್ಯಾ ರಹಾನೆ ಹಾಗೂ ರವೀಂದ್ರ ಜಡೇಜಾ ಉತ್ತಮ ಜೊತೆಯಾಟದ ಮೂಲಕ ಚೇತರಿಕೆ ನೀಡುವ ಪ್ರಯತ್ನದಲ್ಲಿದ್ದಾಗ ಈ ಜೋಡಿಯನ್ನು ಕೂಡ ಆಸಿಸ್ ಸ್ಪಿನ್ನರ್ ನಥನ್ ಲಿಯಾನ್ ಬೇರ್ಪಡಿಸಿದರು. 48 ರನ್‌ಗಳಿಸಿದ್ದ ಜಡೇಜಾ ಅವರನ್ನು ಲಿಯಾನ್ ಔಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಮೂರನೇ ದಿನದಾಟದ ಆರಂಭದಲಲ್ಲಿಯೇ ಶ್ರೀಕರ್ ಭರತ್ ಕೂಡ ವಿಕೆಟ್ ಕಳೆದುಕೊಂಡಿದ್ದಾರೆ. ಇನ್ನು ಅನುಭವಿ ಆಟಗಾರ ಅಜಿಂಕ್ಯಾ ರಹಾನೆ ಅರ್ಧ ಶತಕ ದಾಖಲಿಸಿದ್ದು ತಂಡದ ಚೇತರಿಕೆಗೆ ಹರಸಾಹಸ ಮಾಡುತ್ತಿದ್ದಾರೆ.

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಮಾರ್ಕಸ್ ಹ್ಯಾರಿಸ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications