For Quick Alerts
ALLOW NOTIFICATIONS  
For Daily Alerts
 

WTC Final: ವಿಶ್ವದಾಖಲೆ ಬರೆಯಲಿದೆಯಾ ಭಾರತ?: 5ನೇ ದಿನದಾಟದ Live score

ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಕೊನೆಯ ದಿನಕ್ಕೆ ಕಾಲಿಟ್ಟಿದೆ. ಈ ಪಂದ್ಯದಲ್ಲಿ ಬಹುತೇಕ ಅವಧಿಯಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಸಾಧಿಸಿದ್ದರೂ ಟೀಮ್ ಇಂಡಿಯಾ ತನ್ನ ಹೋರಾಟವನ್ನು ಬಿಟ್ಟುಕೊಟ್ಟಿಲ್ಲ. ಹೀಗಾಗಿ ಕೊನೆಯ ದಿನದಾಟ ತೀವ್ರ ಕುತೂಹಲ ಮೂಡಿಸಿದೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ 270/8 ರನ್‌ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಳ್ಳುವ ಮೂಲಕ 444 ರನ್‌ಗಳ ಬೃಹತ್ ಗುರಿಯನ್ನು ಟೀಮ್ ಇಂಡಿಯಾದ ಗೆಲುವಿಗೆ ನೀಡಿತು. ಈ ಗುರಿಯನ್ನು ಬೆನ್ನಟ್ಟಲು ಆರಂಭಿಸಿರುವ ಭಾರತ ತಂಡ ನಾಲ್ಕಬೇ ದಿನದಾಟದ ಅಂತ್ಯದಲ್ಲಿ 164 ರನ್‌ಗಳಿಸಿದ್ದು 3 ವಿಕೆಟ್ ಕಳೆದುಕೊಂಡಿದೆ. ಟೀಮ್ ಇಂಡಿಯಾ ಪರವಾಗಿ ಅಜಿಂಕ್ಯಾ ರಹಾನೆ ಹಾಗೂ ವಿರಾಟ್ ಕೊಹ್ಲಿ ಕ್ರೀಸ್‌ನಲ್ಲಿದ್ದು ಕೊನೆಯ ದಿನ ಆಟ ಮುಂದಿವರಿಸಿದ್ದಾರೆ.

WTC Final test, India vs Australia Final day, Live score, Kennington Oval

ಇನ್ನು ನಾಲ್ಕನೇ ದಿನದಾಟದಲ್ಲಿ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ನಡೆಸಿದಾಗ ಭಾರತದ ಬೌಲಿಂಗ್ ವಿಭಾಗದಿಮದ ಅದ್ಭುತ ಹೋರಾಟ ಬಂದಿತು. ಆಸ್ಟ್ರೇಲಯಾ ಪ್ರಮುಖ ಆಟಗಾರರನ್ನು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನೆಲೆಯೂರದಂತೆ ನೋಡಿಕೊಳ್ಳುವಲ್ಲಿ ಭಾರತೀಯ ಬೌಲರ್‌ಗಳು ಯಶಸ್ಸು ಸಾಧಿಸಿದರು. ಆದರೆ ಅಲೆಕ್ಸ್ ಕ್ಯಾರಿ ಹಾಗೂ ಮಿಚೆಲ್ ಸ್ಟಾರ್ಕ್ ಜೋಡಿ ಭಾರತೀಯ ಬೌಲರ್‌ಗಳಿಗೆ ಅಡ್ಡಿಯಾದದರು. ಹೀಗಾಗಿ 270 ರನ್‌ಗಳವರೆಗೆ ತಂಡದ ಸ್ಕೋರ್ ವಿಸ್ತರಿಸಿದ ಆಸಿಸ್ ತಂಡ 444 ರನ್‌ಗಳ ಮುನ್ನಡೆ ಸಾಧಿಸಿದ ಸಂದರ್ಭದಲ್ಲಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡರು.

ಇನ್ನು ಆಸ್ಟ್ರೇಲಿಯಾ ತಂಡ ನೀಡಿದ ಈ ಬೃಹತ್ ಗುರಿಯನ್ನು ಬೆನ್ನಟ್ಟಲುಯ ಆರಂಭಿಸಿದ ಟೀಮ್ ಇಂಡಿಯಾ ಸಕಾರಾತ್ಮಕವಾಗಿಯೇ ಆಟವನ್ನು ಶುರುಮಾಡಿಕೊಂಡಿತು. ಆದರೆ ಶುಬ್ಮನ್ ಗಿಲ್ ತಂಡದ ಮೊತ್ತ 41 ರನ್‌ಗಳಿಸಿದ್ದಾಗ ವಿವಾದಾತ್ಮಕ ತೀರ್ಪಿಗೆ ಬಲಿಯಾದರು. ನಂತರ ರೋಹಿತ್ ಶರ್ಮಾ ವೈಯಕ್ತಿಕ ಮೊತ್ತ 43 ರನ್‌ಗಳಿಸಿದ್ದಾಗ ಅನಗತ್ಯ ಹೊಡೆತಕ್ಕೆ ಮುಂದಾಗಿ ವಿಕೆಟ್ ಕಳೆದುಕೊಂಡರು. ನಂತರ ಚೇತೇಶ್ವರ್ ಪೂಜಾರ ಕೂಡ ಔಟಾಗಿದ್ದಾರೆ.

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್

ಬೆಂಚ್: ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಮಾರ್ಕಸ್ ಹ್ಯಾರಿಸ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್

Story first published: Sunday, June 11, 2023, 15:09 [IST]
Other articles published on Jun 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+