For Quick Alerts
ALLOW NOTIFICATIONS  
For Daily Alerts
 

WTC Final: ಆಸ್ಟ್ರೇಲಿಯಾ ಪಾಲಿಗೆ ಕಂಟಕವಾಗಲಿದ್ದಾರೆ ಈ ಇಬ್ಬರು ಭಾರತೀಯರು: ಒಪ್ಪಿಕೊಂಡ ಆಸಿಸ್ ಮಾಜಿ ನಾಯಕ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ ಸಾಕಷ್ಟು ಚರ್ಚೆಗಳು ಜೋರಾಗಿ ನಡೆಯುತ್ತಿದೆ. ಯಾವೆಲ್ಲಾ ಆಟಗಾರರು ಆಡುವ ಬಳಗದಲ್ಲಿ ಅವಕಾಶ ಪಡೆಯಬಹುದು ಎಂಬುದರಿಂದ ಹಿಡಿದು ನಾನಾ ರೀತಿಯ ಪ್ರಶ್ನೆಗಳು ಕ್ರಿಕೆಟ್ ಅಭಿಮಾನಿಗಳನ್ನು ಕಾಡುತ್ತಿದೆ. ಬುಧವಾರದಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಆರಂಭವಾಗಲಿದ್ದು ಅದಕ್ಕೂ ಮುನ್ನ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆರೋನ್ ಫಿಂಚ್ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಅಪಾಯವನ್ನುಂಟು ಮಾಡಬಲ್ಲ ಇಬ್ಬರು ಆಟಗಾರರ ಹೆಸರನ್ನು ಹೇಳಿಕೊಂಡಿದ್ದಾರೆ.

ಇಂಗ್ಲೆಂಡ್‌ನ ಲಂಡನ್‌ನಲ್ಲಿರುವ ಓವಲ್ ಕ್ರೀಡಾಂಗಣದಲ್ಲಿ ರೋಹಿತ್ ಶರ್ಮಾ ಹಾಗೂ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ತಂಡ ಚಾಂಪಿಯನ್ ಪಟ್ಟಕ್ಕಾಗಿ ಕೊನೆಯ ಹಂತದ ಸಿದ್ಧತೆಗಳನ್ನು ನಡೆಸುತ್ತಿದೆ. ಟೀಮ್ ಇಂಡಿಯಾದ ವೇಗದ ಬೌಲಿಂಗ್ ವಿಭಾಗವನ್ನು ಮೊಹಮ್ಮದ್ ಶಮಿ ಮುನ್ನಡೆಸಿದರೆ ಮೊಹಮ್ಮದ್ ಸಿರಾಜ್ ಅವರಿಗೆ ಸಾಥ್ ನೀಡಲಿದ್ದಾರೆ. ಇನ್ನು ಉಮೇರ್ಶ ಯಾದವ್ ಅಥವಾ ಶಾರ್ದೂಲ್ ಠಾಕೂರ್ ಅವರಲ್ಲಿ ಒಬ್ಬರು ಅಥವಾ ಇಬ್ಬರು ಕೂಡ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

WTC Final: These 2 bowlers of Team India will big threat for Australia said Aaron Finch

ಇವರಿಬ್ಬರು ಆಸ್ಟ್ರೇಲಿಯಾಗೆ ಕಂಟಕ

ಸ್ಟಾರ್ ಸ್ಪೋರ್ಟ್ಸ್‌ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯಾದ ಮಾಜಿ ನಾಯಕ ಆರೋನ್ ಫಿಂಚ್ ಭಾರತದ ಇಬ್ಬರು ವೇಗಿಗಳು ಆಸ್ಟ್ರೇಲಿಯಾ ತಂಡಕ್ಕೆ ಕಂಟಕವಾಗಬಲ್ಲರು ಎಂದಿದ್ದಾರೆ. ಟೀಮ್ ಇಂಡಿಯಾದ ವೇಗದ ಬೌಲರ್‌ಗಳಾದ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಇಬ್ಬರು ಕೂಡ ಉತ್ತಮ ಫಾರ್ಮ್‌ನಲ್ಲಿದ್ದು ಆಸ್ಟ್ರೇಲಿಯಾ ತಂಡವನ್ನು ಒತ್ತಡಕ್ಕೆ ಸಿಲುಕಿಸುವ ಸಾಮರ್ಥ್ಯಹೊಂದಿದ್ದಾರೆ ಎಂದಿದ್ದಾರೆ.

"ಇಬ್ಬರು ನ್ಯೂಬಾಲ್ ಬೌಲರ್‌ಗಳಾದ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಇಬ್ಬರು ಕೂಡ ಕಳೆದ ಒಂದೆರಡು ವರ್ಷಗಳಿಂದ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ತಮ್ಮ ಸೀಮ್ ಬೌಲಿಂಗ್ ಮೂಲಕ ಸಿರಾಜ್ ಫ್ಲ್ಯಾಟ್ ಪಿಚ್‌ನಲ್ಲಿಯೂ ಯಶಸ್ಸು ಸಾಧಿಸಬಲ್ಲರು" ಎಂದಿದ್ದಾರೆ. ಮುಂದುವರಿದು ಅವರು "ಸಿರಾಜ್ ಅವರನ್ನು ಎದುರಿಸುವುದು ಕಠಿಣವಾಗಲಿದೆ. ಅವರ ಆಟದ ಶೈಲಿ ಕುಡ ಹಾಗೆಯೇ ಯಾವಾಗಲೂ ಅವರು ಹಿಡಿತವನ್ನು ಸಡಿಲಿಸುವುದಿಲ್ಲ. ಇನ್ನು ಶಮಿ ಅವರ ಫಾರ್ಮ್ ನಂಬಲಸಾಧ್ಯವಾಗಿದೆ" ಎಂದಿದ್ದಾರೆ ಆರೋನ್ ಫಿಂಚ್.

ಟೀಮ್ ಇಂಡಿಯಾ ಸಂಪೂರ್ಣ ತಂಡ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಯ್‌ದೇವ್ ಉನಾದ್ಕಟ್

ಆಸ್ಟ್ರೇಲಿಯಾ ಸಂಪೂರ್ಣ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್

Story first published: Monday, June 5, 2023, 16:17 [IST]
Other articles published on Jun 5, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+