2011ರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾವನ್ನು ಟೂರ್ನಿಯಿಂದ ಹೊರದಬ್ಬಿದ್ದ ಭಾರತ ತಂಡದ ಈ ಇಬ್ಬರು ಆಟಗಾರರು WTC ಫೈನಲ್‌ನಲ್ಲೂ ಕಣಕ್ಕೆ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದ ಆರಂಭಕ್ಕೆ ಕಾಯುವಿಕೆ ಮುಕ್ತಾಯವಾಗಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಈ ಮೆಗಾ ಕದನದಲ್ಲಿ ಮುಖಾಮುಖಿಯಾಗಿದ್ದು ಚಾಂಪಿಯನ್ ಪಟ್ಟಕ್ಕಾಗಿ ಜಿದ್ದಾಜಿದ್ದಿನಿಂದ ಪೈಪೋಟಿಗೆ ಇಳಿದಿದೆ. ಮೊದಲ ಆವೃತ್ತಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಆಗ ಭಾರತವನ್ನು ನ್ಯೂಜಿಲೆಂಡ್ ಮಣಿಸಿ ಚಾಂಪಿಯನ್ ಪಟ್ಟಕ್ಕೆರಿತ್ತು.
ಈ ಬಾರಿ ಭಾರತ ತಂಡಕ್ಕೆ ಎದುರಾಳಿಯಾಗಿರುವುದು ಬಲಿಷ್ಠ ಆಸ್ಟ್ರೇಲಿಯಾ ತಂಡ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಐಸಿಸಿ ಟೂರ್ನಿಯ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದು 2003ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ. ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಆ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಆಸ್ಟ್ರೇಲಿಯಾ ಭಾರೀ ಅಂತರದಿಂದ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿತ್ತು. ಇದೀಗ ಎರಡು ದಶಕಗಳ ಬಳೀಕ ಅಂದಿನ ಸೋಲಿಗ ಸೇಡು ತೀರಿಸಿಕೊಳ್ಳುವ ಅವಕಾಶ ಭಾರತ ತಂಡದ ಮುಂದಿದೆ.

ಇನ್ನು ಈ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಸುದೀರ್ಘ ಮಾದರಿಯಲ್ಲಿ ನಡೆಯುತ್ತಿದೆ. ಆದರೆ ಇನ್ನು ಟೀಮ್ ಇಂಡಿಯಾ ಏಕದಿನ ಮಾದರಿಯಲ್ಲಿ 2003ರ ವಿಶ್ವಕಪ್ ಫೈನಲ್‌ನಲ್ಲಿ ಅನುಭವಿಸಿದ ಸೋಲನ್ನು 2011ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಕ್ವಾರ್ಟರ್‌ಫೈನಲ್‌ಲ್ಲಿ ಮಣಿಸಿ ಸೇಡು ತೀರಿಸಿಕೊಂಡಿತ್ತು ಎಂಬುದು ಗಮನಾರ್ಹ. ಈ ಮೂಲಕ ಆಸ್ಟ್ರೇಲಿಯಾವನ್ನು ಟೂರ್ನಿಯಿಂದ ಭಾರತ ಹೊರದಬ್ಬಿತ್ತು. ಬಳಿಕ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು.
ಇದೀಗ 2011ರ ವಿಶ್ವಕಪ್‌ನಲ್ಲಿ ಭಾರತ ತಂಡದ ಪರವಾಗಿ ಕಣಕ್ಕಿಳಿದಿದ್ದ ಇಬ್ಬರು ಆಟಗಾರರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿಯೂ ಭಾರತದ ಸ್ಕ್ವಾಡ್‌ನಲ್ಲಿದ್ದಾರೆ. ಆ ಇಬ್ಬರು ಯಾರು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.
ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿ ವಿರಾಟ್ ಕೊಹ್ಲಿ
2011ರ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಯುವ ಆಟಗಾರ. ಭಾರತ ತಂಡದ ಕಿರಿಯ ಆಟಗಾರರ ಪೈಕಿ ಕೊಹ್ಲಿ ಕೂಡ ಒಬ್ಬರಾಗಿದ್ದರು. ತಮ್ಮಲ್ಲಿದ್ದ ಅತ್ಯುತ್ತಮ ಕೌಶಲ್ಯ ಹಾಗೂ ಪ್ರತಿಭೆಯ ಕಾರಣದಿಂದಾಗಿ ಅಹ್ದಾಬಾದ್‌ನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಕ್ವಾರ್ಟರ್‌ಫೈನಲ್‌ನ ಆಡುವ ಬಳಗದಲ್ಲಿಯೂ ಸ್ಥಾನವನ್ನು ಪಡೆದುಕೊಂಡಿದ್ದರು. ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ದೊಡ್ಡ ಮೊತ್ತದ ರನ್ ಹರಿದು ಬಂದಿರಲಿಲ್ಲ. ಈ ಬಾರಿ ಕೊಹ್ಲಿ ಉತ್ತಮ ರನ್‌ಗಳಿಸುವ ನಿರೀಕ್ಷೆ ಮೂಡಿಸಿದ್ದಾರೆ.
ಸ್ಪಿನ್ನರ್ ರವಿಚಂದ್ರನ್ ಅಶ್ವಿನ್
2011ರ ವಿಶ್ವಕಪ್‌ನಲ್ಲಿ ಘಟಾನುಘಟಿ ಆಟಗಾರರ ಮಧ್ಯೆ ಸ್ಪಿನ್ನರ್ ಆಗಿ ರವಿಚಂದ್ರನ್ ಅಶ್ವಿನ್ ಕೂಡ ಸ್ಥಾನವನ್ನು ಪಡೆದುಕೊಂಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಕ್ವಾರ್ಟರ್‌ಫೈನಲ್ ಪಂದ್ಯ ಅಹ್ಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ನಡೆದ ಕಾರಣ ಅಲ್ಲಿ ಸ್ಪಿನ್ನರ್‌ಗಳಿಗೆ ಉತ್ತಮ ನೆರವು ದೊರೆಯುವ ದೃಷ್ಟಿಯಿಂದ ಆರ್ ಅಶ್ವಿನ್‌ಗೂ ಆಡುವ ಬಳಗದಲ್ಲಿ ಅವಕಾಶ ದೊರೆತಿತ್ತು.
ಅದಕ್ಕೂ ಮುನ್ನ ಗ್ರೂಪ್ ಹಂತದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿಯೂ ಅಶ್ವಿನ್ ಉತ್ತಮ ಪ್ರದರ್ಶನ ನೀಡಿದ್ದರು. ಇದೀಗ ಆರ್ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಸ್ಕ್ವಾಡ್‌ನಲ್ಲಿಯೂ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆದರೆ ಈ ಬಾರಿ ಓವಲ್ ಕ್ರೀಡಾಂಗಣ ಸ್ಪಿನ್ನರ್‌ಗಳಿಗೆ ನೆರವು ನೀಡುವ ನಿರೀಕ್ಷೆಯಿಲ್ಲದ ಕಾರಣ ಆರ್ ಅಶ್ವಿನ್ ದುರದೃಷ್ಟವಶಾತ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯಲು ವಿಫಲವಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications