Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final: ಭಾರತದ ವಿರುದ್ಧ ಭರ್ಜರಿ ಶತಕ ಸಿಡಿಸಿ ದಾಖಲೆ ಬರೆದ ಟ್ರೆವಿಸ್ ಹೆಡ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದ ಮೊದಲ ದಿನದಾಟದಲ್ಲೊ ಆಸ್ಟ್ರೇಲಿಯಾ ಟೀಮ್ ಇಂಡಿಯಾ ಬೌಲರ್‌ಗಳ ವಿರುದ್ಧ ಭರ್ಜರಿ ಯಶಸ್ಸು ಸಾಧಿಸಿದೆ. ಅದರಲ್ಲೂ ಟ್ರೆವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಟೀಮ್ ಇಂಡಿಯಾ ಬೌಲರ್‌ಗಳ ಪಾಲಿಗೆ ಅಕ್ಷರಶಃ ತಲೆನೋವಾಗಿದ್ದು ಭರ್ಜರಿ ಜೊತೆಯಾಟದ ಮೂಲಕ ಮುನ್ನುಗ್ಗಿದ್ದಾರೆ.

ಆಸಿಸ್ ತಮಡದ ಮಧ್ಯಮ ಕ್ರಮಾಂಕದ ದಾಂಟಿಗ ಟ್ರೆವಿಸ್ ಹೆಡ್ ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದು ಆಸಿಸ್ ತಂಡ ಬೃಹತ್ ಮೊತ್ತದತ್ತ ಮುನ್ನುಗ್ಗಲು ಕಾರಣವಾದರು. ಆಕ್ರಮಣಕಾರಿ ಆಟದ ಮೂಲಕ ಆರಂಭದಿಂದಲೇ ಭಾರತಕ್ಕೆ ಎಚ್ಚರಿಕೆ ನೀಡಿದ ಹೆಡ್ ಅವರನ್ನು ಕಟ್ಟಿಹಾಕಲು ಭಾರತ ನಡೆಸಿದ ಪ್ರಯತ್ನಗಳೆಲ್ಲಾ ವಿಫಲವಾದವು. ಕೇವಲ 106 ಎಸೆತಗಳಲ್ಲಿ ಹೆಡ್ ಭರ್ಜರಿ ಶತಕ ಸಿಡಿಸಿದ್ದು ತಮ್ಮ ಆಟವನ್ನು ಮುಂದುವರಿಸಿದ್ದಾರೆ.

WTC Final: Travis Head hit hundred in WTC Final against India

ಇನ್ನು ಟ್ರೆವಿಸ್ ಹೆಡ್ ಅವರಿಗೆ ಉತ್ತಮವಾಗಿ ಸಾಥ್ ನೀಡಿದ್ದು ಅನುಬವಿ ಆಟಗಾರ ಸ್ಟೀವ್ ಸ್ಮಿತ್. ಅವರು ಕೂಡ ಅದ್ಭುತ ಬ್ಯಾಟಿಂಗ್ ನಡೆಸಿದ್ದು ಅರ್ಧ ಶತಕ ಸಿಡಿಸಿ ಮುನ್ನುಗ್ಗಿದ್ದಾರೆ. ಅಲ್ಲದೆ ಈಗಾಗಲೇ ದ್ವಿಶತಕದ ಜೊತೆಯಾಟದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಈ ಪಂದ್ಯದ ಮೊದಲ ದಿನದಾಟದಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದಂತಾಗಿದೆ.

ಇನ್ನು ಟ್ರೆವಿಸ್ ಹೆಡ್ ಶತಕ ಸಿಡಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪ್ರತಿಷ್ಠಿತ ಫೈನಲ್ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಟ್ರೆವಿಸ್ ಪಡೆದುಕೊಂಡಿದ್ದಾರೆ. ಇದು ಎರಡನೇ WTCಯ ಎರಡನೇ ಆವೃತ್ತಿಯಾಗಿದ್ದು ಮೊದಲ ಆವೃತ್ತಿಯಲ್ಲಿ ಯಾವುದೇ ಶತಕ ಸಿಡಿದಿರಲಿಲ್ಲ. ಕೇವಲ ಇಬ್ಬರು ಆಟಗಾರರು ಮಾತ್ರವೇ ಅರ್ಧ ಶತಕದ ಗಡಿದಾಟಿದ್ದರು.

ಇನ್ನು ಟ್ರೆವಿಸ್ ಹೆಡ್ ಭಾರತದ ವಿರುದ್ಧ ಸಿಡಿಸಿದ ಮೊದಲ ಶತಕ ಇದಾಗಿದೆ. ಅಲ್ಲದೆ ಇಂಗ್ಲೆಂಡ್ ನೆಲದಲ್ಲಿಯೂ ಅವರು ಸಿಡಿಸಿದ ಮೊದಲ ಶತಕ ಇದು. ಹೀಗಾಗಿ ಆಶಸ್ ಸರಣಿಯೂ ಈ ಶತಕದ ಮೂಲಕ ಸಂದೇಶವನ್ನು ಇಂಗ್ಲೆಂಡ್ ತಂಡಕ್ಕೆ ರವಾನಿಸಿದಂತಾಗಿದೆ.

ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಉಸ್ಮಾನ್ ಖವಾಜ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡಿದ್ದರೆ ಡೇವಿಡ್ ವಾರ್ನರ್ 43 ರನ್‌ಗಳಿಸಿ ಔಟಾದರು. ಮಾರ್ನಸ್ ಲ್ಯಾಬುಶೇನ್ ಆಟ 26 ರನ್‌ಗೆ ಅಂತ್ಯವಾಗಿತ್ತು. ಹೀಗಾಗಿ 76 ರನ್‌ಗೆ 3 ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾ ಸಂಕಷ್ಟದಲ್ಲಿತ್ತು. ಆದರೆ ಈ ಸಂದರ್ಭದಲ್ಲಿ ಜೊತೆಯಾದ ಸ್ಟೀವ್ ಸ್ಮಿತ್ ಹಾಗೂ ಟ್ರೆವಿಸ್ ಹೆಡ್ ಜೋಡಿ ಟೀಮ್ ಇಂಡಿಯಾವನ್ನು ಸತತವಾಗಿ ಕಾಡಿದೆ.

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಮಾರ್ಕಸ್ ಹ್ಯಾರಿಸ್

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್

Story first published: Wednesday, June 7, 2023, 21:45 [IST]
Other articles published on Jun 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+