WTC Final: ಇಂದು ಇಂಗ್ಲೆಂಡ್‌ಗೆ ಹಾರಲಿದೆ ವಿರಾಟ್ ಕೊಹ್ಲಿ ಪಡೆ

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ವಿರಾಟ್ ಕೊಹ್ಲಿ ಪಡೆ ಜೂನ್ 3ರ ಗುರುವಾರ ಇಂಗ್ಲೆಂಡ್‌ಗೆ ಹಾರಲು ಸಿದ್ಧವಾಗಿದೆ. ಜೂನ್ 2ಕ್ಕೆ ಭಾರತ ತಂಡದ ಕ್ವಾರಂಟೈನ್ ಪೂರ್ಣಗೊಂಡಿದೆ. ಜೂನ್ 18ರಿಂದ ಜೂನ್ 22ರ ವರೆಗೆ ಈ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಪಂದ್ಯ ನಡೆಯಲಿದೆ.
ಇಂಗ್ಲೆಂಡ್ ಪ್ರಯಾಣಕ್ಕೆ ಸಿದ್ಧವಾಗಿರುವ ಭಾರತೀಯ ಪುರುಷ, ಮಹಿಳಾ ತಂಡದ ಚಿತ್ರವನ್ನು ಬೋರ್ಡ್ ಆಫ್ ಕಂಟ್ರೋಲ್ ಇನ್ ಇಂಡಿಯಾ (ಬಿಸಿಸಿಐ) ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದೆ. 'ಹೊರಡಲು ಸಿದ್ಧವಾಗಿದ್ದೇವೆ' ಎಂದು ಬಿಸಿಸಿಐ ಟ್ವೀಟ್‌ನಲ್ಲಿ ಬರೆದುಕೊಂಡಿದೆ.
ಇಂಗ್ಲೆಂಡ್ ಪ್ರವಾಸದಲ್ಲಿ ಭಾರತೀಯ ಪುರುಷರ ತಂಡ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಡಿದ ಬಳಿಕ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆಗಸ್ಟ್ 4ರಿಂದ ನಡೆಯಲಿದೆ.
ಮಹಿಳಾ ತಂಡ ಕೂಡ ಪುರುಷರ ತಂಡದೊಂದಿಗೆ ಇಂಗ್ಲೆಂಡ್‌ಗೆ ಪ್ರಯಾಣಿಸಲಿದೆ. ಇಂಗ್ಲೆಂಡ್ ವಿರುದ್ಧ ಭಾರತೀಯ ಮಹಿಳೆಯರು ಏಕಮಾತ್ರ ಟೆಸ್ಟ್, ಮೂರು ಪಂದ್ಯಗಳ ಏಕದಿನ ಸರಣಿ ಮತ್ತು 3 ಪಂದ್ಯಗಳ ಟಿ20ಐ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications