Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final: ಎಂಎಸ್ ಧೋನಿ ದಾಖಲೆ ಮುರಿದು ಐತಿಹಾಸಿಕ ದಾಖಲೆ ಬರೆದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ವಿರುದ್ಧ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ.

ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 469 ರನ್‌ಗಳಿಗೆ ಸರ್ವಪತನ ಕಂಡಿದ್ದರೆ, ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 151 ರನ್‌ಗಳಿಗೆ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ ಮತ್ತು ಕೆಎಸ್ ಭರತ್ ಕ್ರಮವಾಗಿ 29 ಮತ್ತು 5 ರನ್ ಗಳಿಸಿ ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

WTC Final: Virat Kohli, Rohit Sharma Broke MS Dhonis Historic Record For India


2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್‌ ಪಂದ್ಯದಲ್ಲಿ ಆಡುವ ಮೂಲಕ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ತಮ್ಮ ಹೆಸರನ್ನು ಕ್ರಿಕೆಟ್ ಇತಿಹಾಸದ ದಾಖಲೆಗಳಲ್ಲಿ ಬರೆದಿದ್ದಾರೆ. ಅಲ್ಲದೇ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆಯನ್ನು ಮೀರಿಸಿದರೆ, ಯುವರಾಜ್ ಸಿಂಗ್ ಅವರ ಸಾಧನೆಗೆ ಹತ್ತಿರವಾಗಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೀವ್ರ ಹಣಾಹಣಿಯ ಫೈನಲ್ ಪಂದ್ಯ ಲಂಡನ್‌ನ ಕಿಯಾ ಓವಲ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ದಶಕದ ಬಳಿಕ ಮೊದಲ ಐಸಿಸಿ ಪ್ರಶಸ್ತಿ ಗೆಲ್ಲಲು ಭಾರತ ಎದುರು ನೋಡುತ್ತಿದೆ.

ಭಾರತದ ಆಡುವ 11ರ ಬಳಗದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಸೇರಿಸಿಕೊಂಡ ಬಳಿಕ ಒಂದು ಮಹತ್ವದ ಮೈಲಿಗಲ್ಲು ಸ್ಥಾಪನೆಗೆ ಕಾರಣರಾದರು. ಭಾರತ ತಂಡದ ಪರ ಐಸಿಸಿ ಫೈನಲ್‌ ಪಂದ್ಯದಲ್ಲಿ ಅತಿ ಹೆಚ್ಚು ಬಾರಿ ಕಾಣಿಸಿಕೊಂಡಿದ್ದಕ್ಕಾಗಿ ಇವರಿಬ್ಬರು ಈಗ ಜಂಟಿಯಾಗಿ ಎರಡನೇ ಸ್ಥಾನ ಪಡೆದಿದ್ದಾರೆ.

WTC Final: Virat Kohli, Rohit Sharma Broke MS Dhonis Historic Record For India

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಐಸಿಸಿ ಟೂರ್ನಮೆಂಟ್ ಫೈನಲ್‌ನಲ್ಲಿ ತಮ್ಮ ಆರನೇ ಪಂದ್ಯವನ್ನು ಆಡುತ್ತಿದ್ದಾರೆ. ಏಳು ಐಸಿಸಿ ಫೈನಲ್‌ ಪಂದ್ಯಗಳನ್ನು ತನ್ನ ಖಾತೆಯಲ್ಲಿ ಹೊಂದಿರುವ ಯುವರಾಜ್ ಸಿಂಗ್ ಅವರ ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇದ್ದಾರೆ.

ರೋಹಿತ್ ಶರ್ಮಾ 2007ರ ಟಿ20 ವಿಶ್ವಕಪ್, 2013ರ ಚಾಂಪಿಯನ್ಸ್ ಟ್ರೋಫಿ, 2014 ಟಿ20 ವಿಶ್ವಕಪ್, 2017ರ ಚಾಂಪಿಯನ್ಸ್ ಟ್ರೋಫಿ, 2021ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಸದ್ಯ ನಡೆಯುತ್ತಿರುವ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ತಮ್ಮ ಪ್ರದರ್ಶನ ನೀಡಿದ್ದಾರೆ.

ಇನ್ನು ವಿರಾಟ್ ಕೊಹ್ಲಿ 2011ರ ವಿಶ್ವಕಪ್, 2013ರ ಚಾಂಪಿಯನ್ಸ್ ಟ್ರೋಫಿ, 2014ರ ಟಿ20 ವಿಶ್ವಕಪ್, 2017ರ ಚಾಂಪಿಯನ್ಸ್ ಟ್ರೋಫಿ, 2021ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಸದ್ಯ ನಡೆಯುತ್ತಿರುವ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ ಪಂದ್ಯಗಳಲ್ಲಿ ಆಡಿದ್ದಾರೆ.

WTC Final: Virat Kohli, Rohit Sharma Broke MS Dhonis Historic Record For India

ಯುವರಾಜ್ ಸಿಂಗ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಲಾ ಎರಡು ಐಸಿಸಿ ಫೈನಲ್ ಗೆಲುವುಗಳನ್ನು ಹೊಂದಿದ್ದಾರೆ. ಯುವರಾಜ್ ಸಿಂಗ್ ಅವರ ಪುರಸ್ಕಾರಗಳ ಪಟ್ಟಿಯಲ್ಲಿ ಸ್ಮರಣೀಯ 2002ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಸೇರಿದ್ದು, ಅದು ಟೈನಲ್ಲಿ ಕೊನೆಗೊಂಡಿತ್ತು.

ಮತ್ತೊಂದೆಡೆ ಎಂಎಸ್ ಧೋನಿ ಅವರು ಐಸಿಸಿ ಫೈನಲ್‌ನಲ್ಲಿ ಐದು ಬಾರಿ ಕಾಣಿಸಿಕೊಂಡಿದ್ದಾರೆ. ಮೊದಲ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ನಂತರದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ.

2023ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರನ್ನೂ ಒಳಗೊಂಡು ಫೈನಲ್‌ಗೆ ತಲುಪಿದರೆ, ಯುವರಾಜ್ ಸಿಂಗ್ ಅವರ ಗಮನಾರ್ಹ ದಾಖಲೆಯನ್ನು ಸರಿಗಟ್ಟಲು ಅವರಿಗೆ ಅವಕಾಶವಿದೆ.

ಇನ್ನು ಯುವರಾಜ್ ಸಿಂಗ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಈ ಮೂವರು ಅಂಡರ್-19 ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಆಡಿದ್ದಾರೆ. ತಮ್ಮ ವೃತ್ತಿಜೀವನದ ಆರಂಭಿಕ ಹಂತದಿಂದಲೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ.

Story first published: Friday, June 9, 2023, 13:00 [IST]
Other articles published on Jun 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+