ದ್ವಿತೀಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‌ ಟ್ರೋಫಿ: ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಪ್ರಕಟ

ಮೊದಲನೇ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನಗಳನ್ನು ತೋರುವುದರ ಮೂಲಕ ಎದುರಾಳಿಗಳನ್ನು ಮಣಿಸಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಫೈನಲ್ ಹಂತವನ್ನು ಪ್ರವೇಶಿದ್ದವು. ಹಾಗೂ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲನೇ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಇತ್ತೀಚೆಗಷ್ಟೇ ಇಂಗ್ಲೆಂಡ್‌ನಲ್ಲಿ ನಡೆಯಿತು.

ಭಾರತ vs ಇಂಗ್ಲೆಂಡ್: ಭಾರತೀಯರ ಪರಿಸ್ಥಿತಿ ನೋಡಿದರೆ ನಗು ಬರುತ್ತದೆ ಎಂದು ಕಾಲೆಳೆದ ಮಾಜಿ ಕ್ರಿಕೆಟಿಗಭಾರತ vs ಇಂಗ್ಲೆಂಡ್: ಭಾರತೀಯರ ಪರಿಸ್ಥಿತಿ ನೋಡಿದರೆ ನಗು ಬರುತ್ತದೆ ಎಂದು ಕಾಲೆಳೆದ ಮಾಜಿ ಕ್ರಿಕೆಟಿಗ

ಏಜಸ್ ಬೌಲ್ ಕ್ರೀಡಾಂಗಣದಲ್ಲಿ ಜೂನ್ 18ರಂದು ಆರಂಭವಾದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಜಯಗಳಿಸಿತು. ಹೀಗೆ ಮೊದಲನೇ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟ್ರೋಫಿಯನ್ನು ಗೆಲ್ಲುವ ಅವಕಾಶವನ್ನು ಕೊನೆಗಳಿಗೆಯಲ್ಲಿ ಕಳೆದುಕೊಂಡ ವಿರಾಟ್ ಕೊಹ್ಲಿ ಪಡೆ ಇದೀಗ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೂಲಕ ದ್ವಿತೀಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‌ನಲ್ಲಿ ಹೋರಾಟವನ್ನು ಆರಂಭಿಸಿದೆ. ದ್ವಿತೀಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೂಲಕ ಆರಂಭವಾಗಿದ್ದು 2023ರ ಮಾರ್ಚ್ 31ಕ್ಕೆ ಅಂತ್ಯಗೊಳ್ಳಲಿದೆ.

ಭಾರತ vs ಇಂಗ್ಲೆಂಡ್: ಇಂಗ್ಲೆಂಡ್ ವಿರುದ್ಧ ನಾನೂ ಆಡುತ್ತೇನೆಂದು ಮೈದಾನಕ್ಕೆ ನುಗ್ಗಿದ ಜಾರ್ವೋ!ಭಾರತ vs ಇಂಗ್ಲೆಂಡ್: ಇಂಗ್ಲೆಂಡ್ ವಿರುದ್ಧ ನಾನೂ ಆಡುತ್ತೇನೆಂದು ಮೈದಾನಕ್ಕೆ ನುಗ್ಗಿದ ಜಾರ್ವೋ!

ಈಗಾಗಲೇ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಸರಣಿಯ ಮೊದಲನೇ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿದ್ದು ಇನ್ನುಳಿದ ಪಂದ್ಯಗಳಲ್ಲಿ ಯಾವ ರೀತಿಯ ಫಲಿತಾಂಶ ಬರಲಿದೆ ಎಂಬುದನ್ನು ಕಾದು ನೋಡಬೇಕು. ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿ ನಿರತವಾಗಿರುವ ಟೀಮ್ ಇಂಡಿಯಾ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಲೀಗ್ ಹಂತದಲ್ಲಿ ಯಾವ ತಂಡಗಳ ಜೊತೆ ಸೆಣಸಾಡಲಿದೆ ಎಂಬ ವೇಳಾಪಟ್ಟಿ ಹೊರಬಿದ್ದಿದೆ.

ಇಂಗ್ಲೆಂಡ್ ಸರಣಿ ಮುಗಿದ ನಂತರ ನ್ಯೂಜಿಲೆಂಡ್‌ ಜೊತೆ ಹೋರಾಟ

ಇಂಗ್ಲೆಂಡ್ ಸರಣಿ ಮುಗಿದ ನಂತರ ನ್ಯೂಜಿಲೆಂಡ್‌ ಜೊತೆ ಹೋರಾಟ

ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ ಮುಗಿದ ನಂತರ ಟೀಮ್ ಇಂಡಿಯಾ ನ್ಯೂಜಿಲೆಂಡ್ ಜೊತೆ ಸೆಣಸಾಟ ನಡೆಸಲಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ನ್ಯೂಜಿಲೆಂಡ್ ತಂಡ ನವೆಂಬರ್‌ 2021ರಲ್ಲಿ ಭಾರತ ಪ್ರವಾಸವನ್ನು ಕೈಗೊಳ್ಳಲಿದೆ. ಇದೇ ತಿಂಗಳು ಟಿಟ್ವೆಂಟಿ ವಿಶ್ವಕಪ್ ಕೂಡ ಇರುವುದರಿಂದ ನ್ಯೂಜಿಲೆಂಡ್ ಮತ್ತು ಭಾರತದ ನಡುವಿನ ಈ ಟೆಸ್ಟ್ ಸರಣಿ ಮುಂದೂಡುವ ಸಾಧ್ಯತೆಗಳಿವೆ. ಕಳೆದ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಸೇಡನ್ನು ತೀರಿಸಿಕೊಳ್ಳಲು ಕೊಹ್ಲಿ ಬಳಗಕ್ಕಿದು ಒಳ್ಳೆಯ ಅವಕಾಶ ಎಂದೇ ಹೇಳಬಹುದು.

ನ್ಯೂಜಿಲೆಂಡ್ ಸರಣಿ ಮುಗಿದ ನಂತರ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ಜತೆ ಕೊಹ್ಲಿ ಪಡೆ ಸೆಣಸಾಟ

ನ್ಯೂಜಿಲೆಂಡ್ ಸರಣಿ ಮುಗಿದ ನಂತರ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ಜತೆ ಕೊಹ್ಲಿ ಪಡೆ ಸೆಣಸಾಟ

ನ್ಯೂಜಿಲೆಂಡ್ ಸರಣಿ ಮುಗಿದ ಬಳಿಕ ಟೀಮ್ ಇಂಡಿಯಾ ಡಿಸೆಂಬರ್ 2021 ಅಥವಾ ಜನವರಿ 2022ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ದಕ್ಷಿಣ ಆಫ್ರಿಕಾದ ಸರಣಿ ಮುಗಿದ ನಂತರ ಶ್ರೀಲಂಕಾ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ತಂಡ ಆಡಲಿದೆ.

Mohammed Siraj ಅವರತ್ತ ನೋಡಲು ಹೆದರಿದ Robinson | Oneindia Kannada
ಆಸ್ಟ್ರೇಲಿಯಾ ಜೊತೆ ಬಾರ್ಡರ್ - ಗವಾಸ್ಕರ್ ಟ್ರೋಫಿಯಲ್ಲಿ ಸೆಣಸಾಟ

ಆಸ್ಟ್ರೇಲಿಯಾ ಜೊತೆ ಬಾರ್ಡರ್ - ಗವಾಸ್ಕರ್ ಟ್ರೋಫಿಯಲ್ಲಿ ಸೆಣಸಾಟ

ಲಂಕಾ ವಿರುದ್ಧದ ಟೆಸ್ಟ್ ಸರಣಿ ಮುಗಿದ ನಂತರ ಟೀಮ್ ಇಂಡಿಯಾ ದ್ವಿತೀಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಲೀಗ್ ಹಂತದಲ್ಲಿ ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಈ ಸರಣಿಯಲ್ಲಿ ಬಾರ್ಡರ್ - ಗವಾಸ್ಕರ್ ಟ್ರೋಫಿಗೋಸ್ಕರ ಕೂಡ ಎರಡೂ ತಂಡಗಳು ಹೋರಾಡಲಿವೆ. ಈ ಹಿಂದೆ ನಡೆದಿರುವ 2 ಬಾರ್ಡರ್ ಗವಾಸ್ಕರ್ ಟ್ರೋಫಿಗಳಲ್ಲಿಯೂ ಸಹ ಭಾರತ ಜಯ ಸಾಧಿಸಿ ಆಸ್ಟ್ರೇಲಿಯಾ ವಿರುದ್ಧ ಮೇಲುಗೈ ಸಾಧಿಸಿದೆ.

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಎರಡನೇ ಆವೃತ್ತಿಯ ಲೀಗ್ ಹಂತದ ಕೊನೆಯ ಸರಣಿಯನ್ನು ಭಾರತ ಬಾಂಗ್ಲಾದೇಶದ ವಿರುದ್ಧ ಆಡಲಿದೆ. ಈ ಸರಣಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು 2 ಟೆಸ್ಟ್ ಪಂದ್ಯಗಳಲ್ಲಿ ಸೆಣಸಾಡಲಿವೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 20 - October 27 2021, 03:30 PM
ಇಂಗ್ಲೆಂಡ್
ಬಾಂಗ್ಲಾದೇಶ್
Predict Now

For Quick Alerts
ALLOW NOTIFICATIONS
For Daily Alerts
Story first published: Sunday, August 15, 2021, 14:59 [IST]
Other articles published on Aug 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X