ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

WTC ಫೈನಲ್ ಪಂದ್ಯವನ್ನು ಗೆದ್ದರೆ ವಿಶ್ವಕಪ್ ಗೆದ್ದಂತೆ: ಚೇತೇಶ್ವರ್ ಪೂಜಾರ

 WTC is the World Cup of the Test format says Cheteshwar Pujara

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಹಾಗೂ ಈ ಪಂದ್ಯ ಮುಗಿದ ಬೆನ್ನಲ್ಲೇ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಭಾರತ ತಂಡ ಆಡಲಿದೆ. ಹೀಗಾಗಿ ಈ ಎರಡೂ ಸರಣಿಗಳಿಗೂ ಸೇರಿ ಬಿಸಿಸಿಐ 20 ಸದಸ್ಯರ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ.

ಐಪಿಎಲ್ ಪುನಾರಂಭದ ದಿನಾಂಕ ಪ್ರಕಟವಾದ ಬೆನ್ನಲ್ಲೇ ಶುರು ಸಾಲು ಸಾಲು ಸಮಸ್ಯೆಗಳು; ಹೀಗಾದರೆ ಕಷ್ಟ!ಐಪಿಎಲ್ ಪುನಾರಂಭದ ದಿನಾಂಕ ಪ್ರಕಟವಾದ ಬೆನ್ನಲ್ಲೇ ಶುರು ಸಾಲು ಸಾಲು ಸಮಸ್ಯೆಗಳು; ಹೀಗಾದರೆ ಕಷ್ಟ!

ಈ ಪ್ರವಾಸಕ್ಕೆ ಆಯ್ಕೆಯಾಗಿರುವ ಭಾರತದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ಮಾತನಾಡಿದ್ದಾರೆ. ಟೀಮ್ ಇಂಡಿಯಾ ಟೆಸ್ಟ್ ತಂಡ ಇತ್ತೀಚಿನ ವರ್ಷಗಳಲ್ಲಿ ನಡೆದ ಬಹುತೇಕ ಸರಣಿಗಳಲ್ಲಿ ವಿಜಯವನ್ನು ಸಾಧಿಸಿದ್ದು ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ತಲುಪಲು ಕಾರಣವಾಗಿದೆ, ಸ್ಥಳ ಯಾವುದೇ ಇರಲಿ ಹಾಗೂ ಎದುರಾಳಿ ತಂಡ ಯಾವುದೇ ಆಗಿರಲಿ ಟೀಮ್ ಇಂಡಿಯಾ ಗೆಲ್ಲುವುದು ಖಚಿತ ಎಂದು ಮುಂಬರುವ ಟೆಸ್ಟ್ ಸರಣಿಗಳ ಕುರಿತು ಚೇತೇಶ್ವರ್ ಪೂಜಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಧೋನಿ ನಿವೃತ್ತಿಯಾಗುವವರೆಗೂ ಟೀಮ್ ಇಂಡಿಯಾದಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ: ವೃದ್ಧಿಮಾನ್ ಸಾಹ

'ಹಲವಾರು ಟೆಸ್ಟ್ ಸರಣಿಗಳನ್ನು ಗೆದ್ದು ಕಷ್ಟಪಟ್ಟು ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ತಲುಪಿದ್ದೇವೆ, ಈ ಟ್ರೋಫಿಯನ್ನು ಗೆಲ್ಲುವುದು ನಮ್ಮ ತಂಡದ ಕನಸಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟ್ರೋಫಿ ಟೆಸ್ಟ್ ಕ್ರಿಕೆಟ್‌ನ ವಿಶ್ವಕಪ್ ಇದ್ದಂತೆ' ಎದ್ದು ಚೇತೇಶ್ವರ್ ಪೂಜಾರ ಹೇಳಿದ್ದಾರೆ.

Story first published: Wednesday, May 26, 2021, 16:18 [IST]
Other articles published on May 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X